ನೆಲ್ಯಾಡಿ: ಶ್ರೀ ರಾಮ ವಿದ್ಯಾಲಯದಲ್ಲಿ ವರಮಹಾಲಕ್ಷ್ಮಿ ಪೂಜೆ ಪೂರ್ವಭಾವಿ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಶೇರ್ ಮಾಡಿ

 

ನೆಲ್ಯಾಡಿ: ಶ್ರೀ ರಾಮ ವಿದ್ಯಾಲಯದಲ್ಲಿ ವರಮಹಾಲಕ್ಷ್ಮಿ ಪೂಜೆ ಪೂರ್ವಭಾವಿ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ನೆಲ್ಯಾಡಿ: ಶ್ರೀ ರಾಮ ವಿದ್ಯಾಲಯದಲ್ಲಿ ವರಮಹಾಲಕ್ಷ್ಮಿ ಪೂಜೆಯ ಪೂರ್ವಭಾವಿ ಸಭೆಯು ಜೂ.24ರಂದು ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಆಡಳಿತ ಮಂಡಳಿಯ ಕಾರ್ಯದರ್ಶಿ ಮೂಲಚಂದ್ರ ಕಾಂಚನ ವಹಿಸಿದ್ದರು. ಈ ಸಂದರ್ಭದಲ್ಲಿ ವರಮಹಾಲಕ್ಷ್ಮಿ ಪೂಜೆಯ ಯಶಸ್ವಿ ಆಯೋಜನೆಗೆ ಸಂಬಂಧಿಸಿದಂತೆ ವಿವಿಧ ಸಿದ್ಧತೆಗಳು, ಜವಾಬ್ದಾರಿಗಳ ಹಂಚಿಕೆ ಹಾಗೂ ಪೂಜಾ ಸಮಿತಿಯ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿಸುಪ್ರೀತಾ ರವಿಚಂದ್ರ ಹೊಸವಕ್ಲು ಅವರು ಸತತ 6ನೇ ಬಾರಿಗೆ ಪುನರಾಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ರೇವತಿ, ಕಾರ್ಯದರ್ಶಿಯಾಗಿ ಪ್ರಿಯ, ಕೋಶಾಧಿಕಾರಿಯಾಗಿ ಸುಮಲತಾ ಹಾಗೂ ಜೊತೆ ಕಾರ್ಯದರ್ಶಿಯಾಗಿ ಲಲಿತಾ ಅವರನ್ನು ನೇಮಕ ಮಾಡಲಾಯಿತು.

ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕಿ ಕಾವ್ಯ, ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಗಣೇಶ್ ವಾಗ್ಲೆ ಹಾಗೂ ಶಾಲಾ ನಿರ್ವಹಣಾ ಸಮಿತಿಯ ಸದಸ್ಯರು ಸಭೆಯಲ್ಲಿ ಭಾಗವಹಿಸಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

 

Leave a Reply

error: Content is protected !!