ಬೆಳ್ತಂಗಡಿ: ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಶೇರ್ ಮಾಡಿ

 

ಬೆಳ್ತಂಗಡಿ: ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ನೇತೃತ್ವದಲ್ಲಿ ಮಹಾಸಭೆ ಹಾಗೂ ಒಕ್ಕೂಟ ಬಲವರ್ಧನೆ ತರಬೇತಿ ಕಾರ್ಯಕ್ರಮವು ಬೆಳ್ತಂಗಡಿಯ ಸಾನ್ತೋಮ್ ಟವರ್‌ನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಒಕ್ಕೂಟದ ಅಧ್ಯಕ್ಷೆ ಎಲಿಯಮ್ಮ ತೋಮಸ್ ವಹಿಸಿದ್ದರು. ಮಹಿಳಾ ಸಬಲೀಕರಣ ಯೋಜನೆಯ ಸಂಯೋಜಕಿ ಸಿಸಿಲ್ಯಾ ತಾವ್ರೊ ಅವರು ಮಹಿಳಾ ಒಕ್ಕೂಟಗಳ ಸದಸ್ಯರು ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಅಭಿವೃದ್ಧಿಯತ್ತ ಸಾಗಬೇಕೆಂದು ಕರೆ ನೀಡಿದರು.

ಡಿ.ಕೆ.ಆರ್.ಡಿ.ಎಸ್. ಸಂಸ್ಥೆಯ ನಿರ್ದೇಶಕ ವಂ.ಫಾ.ಆದರ್ಶ್ ಪಿ.ಎಸ್. ಅವರು ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ಸಮಿತಿ ಸದಸ್ಯರ ಜವಾಬ್ದಾರಿಗಳು, ಕರ್ತವ್ಯಗಳು ಮತ್ತು ಸಂಘದ ನಿಯಮಾವಳಿಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಒಕ್ಕೂಟವನ್ನು ಮತ್ತಷ್ಟು ಬಲಪಡಿಸಲು ನಾಯಕತ್ವ, ಸಂಘಟನೆ ಮತ್ತು ಸಮನ್ವಯದ ಅಗತ್ಯವನ್ನು ವಿವರಿಸಿದರು.

ಸಭೆಯಲ್ಲಿ 2026ರಿಂದ 2029ರ ಅವಧಿಗೆ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಉಷಾ ಜೋಯ್, ಉಪಾಧ್ಯಕ್ಷರಾಗಿ ಫಿಲೋಮಿನ ಸಿಜೆ, ಕಾರ್ಯದರ್ಶಿಯಾಗಿ ವೈಶಾಲಿ, ಜೊತೆ ಕಾರ್ಯದರ್ಶಿಯಾಗಿ ಚಂದನ, ಕೋಶಾಧಿಕಾರಿಯಾಗಿ ಮಂಜುಳ ಜಾನ್ ಹಾಗೂ ಸಮಿತಿ ಸದಸ್ಯರಾಗಿ ಮಿನಿ ತೋಮಸ್, ಉಷಾ, ಡೈಸಿ ಮತ್ತು ಪ್ರಿನ್ಸಿ ಆಯ್ಕೆಯಾದರು.

ಪ್ರಿನ್ಸಿ ಸ್ವಾಗತಿಸಿದರು, ಜಿನ್ಸಿ ರಾಜೇಶ್ ವಂದಿಸಿದರು. ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಹಾಸಭೆ ಹಾಗೂ ತರಬೇತಿಯನ್ನು ಯಶಸ್ವಿಗೊಳಿಸಿದರು.

 

Leave a Reply

error: Content is protected !!