ನೆಲ್ಯಾಡಿ: ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ : 13 ಕೇಂದ್ರಗಳಲ್ಲಿ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ

ಶೇರ್ ಮಾಡಿ

 

ನೆಲ್ಯಾಡಿ: ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ : 13 ಕೇಂದ್ರಗಳಲ್ಲಿ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ

ನೆಲ್ಯಾಡಿ: ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ಅಂಗವಾಗಿ ಭಾನುವಾರ ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ವ್ಯಾಪ್ತಿಯ ವಿವಿಧ ಕೇಂದ್ರಗಳಲ್ಲಿ ಐದು ವರ್ಷದೊಳಗಿನ ಪುಟಾಣಿ ಮಕ್ಕಳಿಗೆ ಪೋಲಿಯೋ ಲಸಿಕೆ (ಹನಿ) ನೀಡುವ ಅಭಿಯಾನ ಯಶಸ್ವಿಯಾಗಿ ನಡೆಯಿತು.

ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಕಾರ್ಯಕ್ರಮಕ್ಕೆ ನೆಲ್ಯಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಲಾಂ ಬಿಲಾಲ್ ಅವರು ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಅಧಿಕೃತ ಚಾಲನೆ ನೀಡಿದರು. ಬಳಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಶಿಶಿರ ಅವರು ಕೇಂದ್ರಕ್ಕೆ ಆಗಮಿಸಿದ ಮಕ್ಕಳಿಗೆ ಪೋಲಿಯೋ ಹನಿ ನೀಡಿ, ಯಾವುದೇ ಮಗುವೂ ಲಸಿಕೆಯಿಂದ ವಂಚಿತವಾಗದಂತೆ ಪೋಷಕರು ಕಡ್ಡಾಯವಾಗಿ ಪೋಲಿಯೋ ಹನಿ ಹಾಕಿಸಬೇಕು ಎಂದು ಕರೆ ನೀಡಿದರು.

ಅಭಿಯಾನದ ಅಂಗವಾಗಿ ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಪಡುಬೆಟ್ಟು ಅಂಗನವಾಡಿ ಕೇಂದ್ರ, ಮಾದರಿ ಅಂಗನವಾಡಿ ಕೇಂದ್ರ, ಆರ್ಲ ಅಂಗನವಾಡಿ ಕೇಂದ್ರ, ಕೋಲ್ಪೆ ಅಂಗನವಾಡಿ ಕೇಂದ್ರ, ಗೋಳಿತೊಟ್ಟು ಅಂಗನವಾಡಿ ಕೇಂದ್ರ, ಕಾಂಚನ ಅಂಗನವಾಡಿ ಕೇಂದ್ರ, ಪರಂದಾಚೆ ಅಂಗನವಾಡಿ ಕೇಂದ್ರ, ವಳಾಲು ಗ್ರಾಮ ಪಂಚಾಯತ್ ಸಭಾಭವನ, ಹೊಸಮಜಲು ಅಂಗನವಾಡಿ ಕೇಂದ್ರ, ಕೊಕ್ಕಡ ಚರ್ಚ್ ಅಂಗನವಾಡಿ ಕೇಂದ್ರ, ಆಯುಷ್ಮಾನ್ ಆರೋಗ್ಯ ಕೇಂದ್ರ ಇಚ್ಲಂಪಾಡಿ ಸೇರಿದಂತೆ ಒಟ್ಟು 13 ಕೇಂದ್ರಗಳಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಅರ್ಹ ಮಕ್ಕಳಿಗೆ ಪೋಲಿಯೋ ಹನಿಯನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ನೆಲ್ಯಾಡಿ ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ಅಧ್ಯಕ್ಷ ಉಲಹನ್ನನ್ ಪಿ.ಎಂ, ಮಹಿಳಾ ಜೇಸಿ ಅಧ್ಯಕ್ಷೆ ಮೇರಿ, ನೆಲ್ಯಾಡಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ಉಷಾ ಜೋಯಿ, ಅರೆವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸಕ್ರಿಯವಾಗಿ ಪಾಲ್ಗೊಂಡು ಅಭಿಯಾನವನ್ನು ಯಶಸ್ವಿಗೊಳಿಸಿದರು.

 

Leave a Reply

error: Content is protected !!