ಶಿಶಿಲ: ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ

ಶೇರ್ ಮಾಡಿ

 

ಶಿಶಿಲ: ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ

ಕೊಕ್ಕಡ: ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೋಮವಾರ ಸ್ವಚ್ಛತಾ ಅಭಿಯಾನವನ್ನು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು, ಸ್ತ್ರೀಶಕ್ತಿ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಶಿಶಿಲ–ಅರಸಿನಮಕ್ಕಿ ಘಟಕದ ಸದಸ್ಯರ ಜಂಟಿ ಸಹಕಾರದೊಂದಿಗೆ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡ ಸ್ವಚ್ಛತೆಯ ಮಹತ್ವವನ್ನು ತಿಳಿಸಿ ಸಾರ್ವಜನಿಕರು ತಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಆರೋಗ್ಯಕರ ಗ್ರಾಮ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಪ್ರಿಯಾ, ಸೇವಾ ಪ್ರತಿನಿಧಿ ರಶ್ಮಿತಾ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಸಂಜೀವಿನಿ ಸ್ವಸಹಾಯ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರು, ಸ್ತ್ರೀಶಕ್ತಿ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಶಿಶಿಲ–ಅರಸಿನಮಕ್ಕಿ ಸದಸ್ಯರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.

ಗ್ರಾಮದ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸುವ ಮೂಲಕ ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

 

Leave a Reply

error: Content is protected !!