ಬೆಳ್ತಂಗಡಿ: ಅನುಮಾನಾಸ್ಪದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ

ಶೇರ್ ಮಾಡಿ

 

ಬೆಳ್ತಂಗಡಿ: ಅನುಮಾನಾಸ್ಪದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ

ಬೆಳ್ತಂಗಡಿ: ಗುರುವಾಯನಕೆರೆ ಖಾಸಗಿ ವಿದ್ಯುತ್ ಸಬ್ ಸ್ಟೇಷನ್ ಜಾಗದಲ್ಲಿ ಅವಿವಾಹಿತ ಯುವಕನೋರ್ವನ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಕುವೆಟ್ಟು ಗ್ರಾಮದ ಶಕ್ತಿನಗರ ಸಮೀಪವಿರುವ ಖಾಸಗಿ ವಿದ್ಯುತ್ ಸಬ್ ಸ್ಟೇಷನ್ ಜಾಗದ ಮುಂಭಾಗ ತಡೆಗೋಡೆ ಇರುವ ಇಳಿಜಾರು ಪ್ರದೇಶದಲ್ಲಿ ಬುಧವಾರದಂದು ತಣ್ಣೀರುಪಂತ ಗ್ರಾಮದ ಕಲ್ಲೇರಿ ಜನತಾ ಕಾಲೋನಿ ನಿವಾಸಿ ಶರೀಫ್ ಕೆ. ಅವರ ಪ್ರಥಮ ಪುತ್ರ ಮುಸ್ತಾಕ್ (27)ಎಂಬಾತನ ಮೃತದೇಹ ಕಂಡು ಬಂದಿದೆ.

ಚಾಲಕ ವೃತ್ತಿ ನಡೆಸುತ್ತಿದ್ದ ಈತನನ್ನು ಜೂ.30 ರಂದು ಕಲ್ಲೇರಿಯಿಂದ ಮದ್ದಡ್ಕಕ್ಕೆ ಮುಸ್ತಾಕ್ ನನ್ನು ಆತನ ತಮ್ಮ ಮುನಾಸೀರ್ ಬೈಕ್ ನಲ್ಲಿ ಬಿಟ್ಟು ಹೋಗಿದ್ದರು. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯ ಎಸ್ ಐ ಆನಂದ್, ಸೋಕೋ ತಂಡ, ಕುವೆಟ್ಟು ಗ್ರಾ.ಪಂ ಪಿಡಿಒ ಇಮ್ತಿಯಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Leave a Reply

error: Content is protected !!