










ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯ ಗುಂಡ್ಯ ಸಮೀಪ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ಕಂಟೈನರ್ ಹಾಗೂ ಕಾರಿನ ಮುಖಾಮುಖಿ ಡಿಕ್ಕಿಯಲ್ಲಿ ಕಾರು ಜಖಂಗೊಂಡಿದ್ದು, ಕಾರಿನಲ್ಲಿದ್ದ ವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸೋಂಪುರ ನಿವಾಸಿ ಹರ್ಷ ಟಿ ಅವರು ತಮ್ಮ ಪುತ್ರಿಯನ್ನು ಮಂಗಳೂರಿನ ಕಾಲೇಜಿನಿಂದ ಮಳೆ ರಜೆ ಹಿನ್ನೆಲೆಯಲ್ಲಿ ಮನೆಗೆ ಕರೆದುಕೊಂಡು ಹೋಗಲು ಟೊಯೋಟಾ ಹೈರೈಡರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಬೆಳಿಗ್ಗೆ ಸುಮಾರು 6.30ರ ವೇಳೆಗೆ ಶಿರಾಡಿ ಗ್ರಾಮದ ಗುಂಡ್ಯ ಪೇಟೆ ಸಮೀಪದ ತಿರುವು ರಸ್ತೆಗೆ ತಲುಪಿದಾಗ, ಎದುರಿನಿಂದ ಬಂದ ಕಂಟೈನರ್ ವಾಹನವು ಎದುರು ದಿಕ್ಕಿಗೆ ನುಗ್ಗಿ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಭಾಗಶಃ ಜಖಂಗೊಂಡಿದ್ದು, ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ. ಘಟನೆಯ ಕುರಿತು ಹರ್ಷ ಟಿ. ನೀಡಿದ ದೂರಿನ ಆಧಾರದಲ್ಲಿ ಕಂಟೈನರ್ ಚಾಲಕ ಆನಂದ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



