ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಭೇಟಿ

ಶೇರ್ ಮಾಡಿ

 

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಭೇಟಿ

ಸುಬ್ರಹ್ಮಣ್ಯ: ರಾಜ್ಯ ಸರ್ಕಾರದ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಸೋಮವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.

ಬೆಳಿಗ್ಗೆ ದೇವಸ್ಥಾನದಲ್ಲಿ ನಡೆದ ಪಂಚಾಮೃತ ಮಹಾಭಿಷೇಕದಲ್ಲಿ ಭಕ್ತಿಭಾವದಿಂದ ಭಾಗವಹಿಸಿದ ಅವರು, ಬಳಿಕ ಮಹಾಮಂಗಳಾರತಿಯನ್ನು ವೀಕ್ಷಿಸಿ ಶ್ರೀ ದೇವರ ದರ್ಶನ ಪಡೆದರು. ನಂತರ ತೀರ್ಥ-ಪ್ರಸಾದ ಸ್ವೀಕರಿಸಿ ದೇವಸ್ಥಾನದ ಅನ್ನಸಂತರ್ಪಣೆಯಲ್ಲಿ ಭೋಜನ ಪ್ರಸಾದ ಸೇವಿಸಿದರು.

ದೇವಸ್ಥಾನದ ವತಿಯಿಂದ ಶಿಷ್ಟಾಚಾರ ವಿಭಾಗದ ಪ್ರಮೋದ್ ಕುಮಾರ್ ಅವರು ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಜಾಕೆ ಮಾಧವ ಗೌಡ, ಜಿಲ್ಲಾ ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ಪ್ರಿಯಾ ಸಾಲಿಯನ್, ದಿವಾಕರ ಬೆಂಗಳೂರು, ಜಯಂತ ಪಂಬತ್ತಾಡಿ, ಬಿಜೆಪಿ ಮುಖಂಡ ಸಂತೋಷ್ ಜಾಕೆ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಬಳಿಕ ಎಚ್.ಡಿ. ರೇವಣ್ಣ ಅವರು ಸುಬ್ರಹ್ಮಣ್ಯದ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠಕ್ಕೂ ಭೇಟಿ ನೀಡಿ ಪೀಠಾಧ್ಯಕ್ಷ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಈ ವೇಳೆ ಸ್ವಾಮೀಜಿಯವರು ಶಾಲು ಹೊದಿಸಿ, ಮಂತ್ರಾಕ್ಷತೆ ನೀಡಿ ಗೌರವಿಸಿ ಆಶೀರ್ವದಿಸಿದರು.

 

Leave a Reply

error: Content is protected !!