ಬಿಸಿ ರೋಡ್: ಬಸ್ ನಿಲ್ದಾಣದ ಬಳಿ ಯುವತಿಗೆ ಹರಿತವಾದ ಆಯುಧದಿಂದ ಹಲ್ಲೆ

ಶೇರ್ ಮಾಡಿ

 

ಬಿಸಿ ರೋಡ್: ಬಸ್ ನಿಲ್ದಾಣದ ಬಳಿ ಯುವತಿ ಮೇಲೆ ಹರಿತವಾದ ಆಯುಧದಿಂದ ಹಲ್ಲೆ

ಬಂಟ್ವಾಳ: ಬಿಸಿ ರೋಡ್ ಕೆಎಸ್‌ಆರ್‌ಟಿಸಿ ನೂತನ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ಅಪರಿಚಿತ ವ್ಯಕ್ತಿಯೊಬ್ಬ ಯುವತಿಯ ಮೇಲೆ ಹರಿತವಾದ ಆಯುಧದಿಂದ ಗಂಭೀರ ಹಲ್ಲೆ ನಡೆಸಿ ಪರಾರಿಯಾದ ಘಟನೆ ನಡೆದಿದೆ.

ಗುರುವಾರ ಸಂಜೆ ಸುಮಾರು 6 ಗಂಟೆಯ ವೇಳೆಗೆ ಬಸ್‌ಗಾಗಿ ಕಾಯುತ್ತಿದ್ದ ಸುಮಾರು 21ರಿಂದ 25 ವರ್ಷದ ಯುವತಿಯ ಮೇಲೆ ಅಪರಿಚಿತ ವ್ಯಕ್ತಿ ಏಕಾಏಕಿ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಹಲ್ಲೆಯಿಂದ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲಿದ್ದ ಸಾರ್ವಜನಿಕರು ತಕ್ಷಣವೇ ಆಕೆಯನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಲ್ಲೆ ನಡೆಸಿದ ಆರೋಪಿಯ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದು, ಘಟನೆಯ ನಿಖರ ಕಾರಣ ಹಾಗೂ ಹೆಚ್ಚಿನ ಮಾಹಿತಿ ಪೊಲೀಸ್ ವಿಚಾರಣೆಯ ಬಳಿಕ ತಿಳಿದುಬರಬೇಕಿದೆ.

 

Leave a Reply

error: Content is protected !!