ಬಂಟ್ವಾಳ: ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಭೀಕರ ಹತ್ಯೆ: ಏಕಪಕ್ಷೀಯ ಪ್ರೀತಿಯ ಶಂಕೆ; ಯುವತಿ ಲಾವಣ್ಯ ಸಾವು

ಶೇರ್ ಮಾಡಿ

 

ಬಂಟ್ವಾಳ: ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಭೀಕರ ಹತ್ಯೆ: ಏಕಪಕ್ಷೀಯ ಪ್ರೀತಿಯ ಶಂಕೆ; ಯುವತಿ ಲಾವಣ್ಯ ಸಾವು

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ನೂತನ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ನಡೆದ ಭೀಕರ ಹಲ್ಲೆ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ಕಕ್ಕೆಪದವು ನಿವಾಸಿ ಲಾವಣ್ಯ (25) ಎಂದು ಗುರುತಿಸಲಾಗಿದೆ.

ಗುರುವಾರ ಸಂಜೆ ಸುಮಾರು 6 ಗಂಟೆ ವೇಳೆಗೆ ಲಾವಣ್ಯ ಅವರು ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ನೂತನ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ, ಅಪರಿಚಿತನಂತೆ ಬಂದ ವ್ಯಕ್ತಿಯೊಬ್ಬ ಹರಿತವಾದ ಆಯುಧದಿಂದ ಏಕಾಏಕಿ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಲಾವಣ್ಯ ಅವರನ್ನು ಸ್ಥಳೀಯರು ತಕ್ಷಣ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಅವರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಆರೋಪಿಯ ಬಂಧನಕ್ಕಾಗಿ ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ವ್ಯಾಪಕ ಶೋಧ ಕಾರ್ಯ ಮುಂದುವರಿದಿದೆ.

ಪ್ರಾಥಮಿಕ ತನಿಖೆಯಲ್ಲಿ, ಕೃತ್ಯ ಎಸಗಿರುವ ಆರೋಪಿ ಚೇತನ್ ಎಂದು ಗುರುತಿಸಲಾಗಿದ್ದು, ಆತ ಮೃತ ಲಾವಣ್ಯ ಅವರ ದೂರದ ಸಂಬಂಧಿಯಾಗಿದ್ದಾನೆ ಎನ್ನಲಾಗಿದೆ. ಅಲ್ಲದೆ, ಲಾವಣ್ಯ ಅವರನ್ನು ಏಕಪಕ್ಷೀಯವಾಗಿ ಪ್ರೀತಿಸುತ್ತಿದ್ದ ಹಿನ್ನೆಲೆಯಲ್ಲೇ ಈ ಕೃತ್ಯ ಎಸಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಆದರೆ ಹತ್ಯೆಯ ನಿಖರ ಕಾರಣ ಹಾಗೂ ಇತರ ಎಲ್ಲಾ ಆಯಾಮಗಳ ಕುರಿತು ತನಿಖೆ ಮುಂದುವರಿದಿದೆ.

 

Leave a Reply

error: Content is protected !!