ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ: ಕುಟುಂಬಕ್ಕೆ ಸಾಂತ್ವನ ಹೇಳಿದ ಅರುಣ್ ಕುಮಾರ್ ಪುತ್ತಿಲ; ಕಠಿಣ ಕ್ರಮಕ್ಕೆ ಆಗ್ರಹ

ಶೇರ್ ಮಾಡಿ

 

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ: ಕುಟುಂಬಕ್ಕೆ ಸಾಂತ್ವನ ಹೇಳಿದ ಅರುಣ್ ಕುಮಾರ್ ಪುತ್ತಿಲ; ಕಠಿಣ ಕ್ರಮಕ್ಕೆ ಆಗ್ರಹ

ಬಂಟ್ವಾಳ: ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ನೂತನ ಬಸ್ ನಿಲ್ದಾಣದಲ್ಲಿ ಧಾರುಣವಾಗಿ ಹತ್ಯೆಯಾದ ಯುವತಿ ಲಾವಣ್ಯ ಅವರ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು.

ಈ ವೇಳೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ಇಂತಹ ಭೀಕರ ಘಟನೆಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಲಾವಣ್ಯ ಹತ್ಯೆ ಪ್ರಕರಣದ ಆರೋಪಿಯನ್ನು ಪೊಲೀಸರು ತಕ್ಷಣವೇ ಬಂಧಿಸಿ, ಕಾನೂನು ಪ್ರಕಾರ ಅತ್ಯಂತ ಕಠಿಣ ಕ್ರಮ ಕೈಗೊಳ್ಳಬೇಕು. ಇಂತಹ ಕ್ರೂರ ಕೃತ್ಯಗಳನ್ನು ಎಸಗುವವರಿಗೆ ಯಾವುದೇ ರೀತಿಯ ಅವಕಾಶ ನೀಡಬಾರದು. ಸಾರ್ವಜನಿಕರ ಭಾವನೆಗಳಿಗೆ ಸ್ಪಂದಿಸಿ ಆರೋಪಿಯ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಮುಂದಿನ ದಿನಗಳಲ್ಲಿ ಯಾರೂ ಇಂತಹ ಅಮಾನುಷ ಕೃತ್ಯಗಳನ್ನು ಎಸಗದಂತೆ ಕಾನೂನು ಸುವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಿ, ಅಪರಾಧಿಗಳಿಗೆ ತಕ್ಕ ಶಿಕ್ಷೆಯಾಗುವಂತೆ ಪೊಲೀಸ್ ಇಲಾಖೆ ಹಾಗೂ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮೃತ ಲಾವಣ್ಯ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ತಕ್ಷಣವೇ ಸೂಕ್ತ ಪರಿಹಾರ ಘೋಷಿಸಿ, ಅಗತ್ಯ ನೆರವು ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಸರ್ಕಾರವನ್ನು ಅರುಣ್ ಕುಮಾರ್ ಪುತ್ತಿಲ ಆಗ್ರಹಿಸಿದರು.

 

Leave a Reply

error: Content is protected !!