










ನೆಲ್ಯಾಡಿ: ಬೆಥನಿ ಐಟಿಐ ಸಂಸ್ಥೆಯಲ್ಲಿ ವೃತ್ತಿ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೆ.ಫಾ.ವರ್ಗೀಸ್ ಕೈಪನಡಕ್ಕ ಓಐಸಿ ವಹಿಸಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೌಶಲ್ಯಾಧಾರಿತ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವಿದ್ದು, “ಕೌಶಲ್ಯವೇ ಶಕ್ತಿ” ಎಂಬ ಸಂದೇಶವನ್ನು ವಿದ್ಯಾರ್ಥಿಗಳಿಗೆ ನೀಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೊಣಾಲು ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕಿ ರಮಣಿ ಬಿ. ಅವರು ಮಾತನಾಡಿ, ಪರಿಶ್ರಮ ಮತ್ತು ಆತ್ಮವಿಶ್ವಾಸ ಇದ್ದರೆ ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ ಎಂದು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ರೆ.ಫಾ.ಸ್ಯಾಮುವೆಲ್ ಜಾರ್ಜ್ ಓಐಸಿ, ಪ್ರಾಚಾರ್ಯ ಸಜಿ ಕೆ.ತೋಮಸ್, ತರಬೇತಿ ಅಧಿಕಾರಿ ಜಾನ್ ಪಿ.ಎಸ್. ಹಾಗೂ ಸಂಸ್ಥೆಯ ಹಳೆ ವಿದ್ಯಾರ್ಥಿ ಜಾನ್ಸನ್ ಉಪಸ್ಥಿತರಿದ್ದರು.
ಕಂಪ್ಯೂಟರ್ ವಿಭಾಗದ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಜಾನ್ ಪಿ.ಎಸ್. ಸ್ವಾಗತಿಸಿದರು. ಸಂಸ್ಥೆಯ ಉಪನ್ಯಾಸಕ ಹರಿಪ್ರಸಾದ್ ರೈ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಅನಂತಕೃಷ್ಣ ವಂದಿಸಿದರು.
ಈ ಸಂದರ್ಭದಲ್ಲಿ ವಿವಿಧ ವಿಭಾಗಗಳ ವಿದ್ಯಾರ್ಥಿಗಳಿಗೆ ವೃತ್ತಿ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳು, ಪೋಷಕರು ಹಾಗೂ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.



