ದ.ಕ.ದಲ್ಲಿ ಯೆಲ್ಲೊ ಅಲರ್ಟ್: ನಾಳೆ(ಜುಲೈ 23) ಶಾಲೆ–ಪಿಯು ಕಾಲೇಜುಗಳಿಗೆ ರಜೆ

ಶೇರ್ ಮಾಡಿ

 

ದ.ಕ.ದಲ್ಲಿ ಯೆಲ್ಲೊ ಅಲರ್ಟ್: ನಾಳೆ(ಜುಲೈ 23) ಶಾಲೆ–ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಜಿಲ್ಲೆಯಾದ್ಯಂತ ಯೆಲ್ಲೊ ಅಲರ್ಟ್ ಘೋಷಿಸಿದೆ.

ಜಿಲ್ಲಾಧಿಕಾರಿ ಮುಂಜಾಗ್ರತಾ ಕ್ರಮವಾಗಿ ಜುಲೈ 23ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ವಸತಿ ಶಾಲೆಗಳು, ಪದವಿ ಪೂರ್ವ ಹಾಗೂ ಪದವಿ ಪೂರ್ವ ವಸತಿ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ರಜೆ ಘೋಷಿಸಲಾಗಿದೆ.

ಆದೇಶವನ್ನು ಉಲ್ಲಂಘಿಸಿ ತರಗತಿಗಳನ್ನು ನಡೆಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ–2005ರ ಕಲಂ 51(ಬಿ) ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಪ್ರಾಕೃತಿಕ ವಿಕೋಪ ಸಂಬಂಧಿತ ತುರ್ತು ಸಹಾಯಕ್ಕಾಗಿ ಸಾರ್ವಜನಿಕರು ಟೋಲ್ ಫ್ರೀ 1077 ಅಥವಾ 0824-2442590 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

CALL NOW 8606485844

 

Leave a Reply

error: Content is protected !!