ಮಂಗಳೂರು: ಲಾಲ್‌ಬಾಗ್ ಸಿಗ್ನಲ್ ಬಳಿ ಮಾರಕಾಸ್ತ್ರದಿಂದ ದಾಳಿ; ಬೈಕ್ ಸವಾರ ಗಂಭೀರ ಗಾಯ

ಶೇರ್ ಮಾಡಿ

 

ಮಂಗಳೂರು: ಲಾಲ್‌ಬಾಗ್ ಸಿಗ್ನಲ್ ಬಳಿ ಮಾರಕಾಸ್ತ್ರದಿಂದ ದಾಳಿ; ಬೈಕ್ ಸವಾರ ಗಂಭೀರ ಗಾಯ

ಮಂಗಳೂರು: ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸುಮಾರು 1:45ರ ವೇಳೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಅಪರಿಚಿತ ದುಷ್ಕರ್ಮಿಯೊಬ್ಬ ಮಾರಕಾಸ್ತ್ರದಿಂದ ದಾಳಿ ನಡೆಸಿರುವ ಘಟನೆ ನಡೆದಿದೆ.

ಗಾಯಗೊಂಡ ವ್ಯಕ್ತಿಯನ್ನು ಪ್ರಾಥಮಿಕ ಮಾಹಿತಿಯಂತೆ ವಿಕ್ಕಿ ಬಪ್ಪಾಲ್ ಎಂದು ಗುರುತಿಸಲಾಗಿದೆ. ಅವರು ಬೈಕ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಮತ್ತೊಂದು ಬೈಕ್‌ನಲ್ಲಿ ಬಂದಿದ್ದ ಅಪರಿಚಿತ ವ್ಯಕ್ತಿ ಅವರನ್ನು ಹಿಂಬಾಲಿಸಿ, ಚಲಿಸುತ್ತಿದ್ದ ಬೈಕ್‌ನಲ್ಲೇ ಮಚ್ಚಿನಿಂದ ಕುತ್ತಿಗೆ ಭಾಗಕ್ಕೆ ತೀವ್ರವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ವಿಕ್ಕಿ ಬಪ್ಪಾಲ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕುತ್ತಿಗೆ ಭಾಗದಲ್ಲಿ ಆಳವಾದ ಗಾಯವಾಗಿರುವುದರಿಂದ ಚಿಕಿತ್ಸೆ ಮುಂದುವರಿದಿದೆ.

ಘಟನೆಯ ಬಳಿಕ ನಗರ ಪೊಲೀಸರು ತಕ್ಷಣ ಎಚ್ಚೆತ್ತುಕೊಂಡಿದ್ದು, ಆರೋಪಿಯನ್ನು ಬಂಧಿಸಲು ಎಲ್ಲಾ ಚೆಕ್‌ಪೋಸ್ಟ್‌ಗಳಿಗೆ ಎಚ್ಚರಿಕೆ ನೀಡಲಾಗಿದೆ. ಆರೋಪಿಯ ಪತ್ತೆಗೆ ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.

ಈ ಸಂಬಂಧ ಬರ್ಕೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಲಿದ್ದು, ಪೂರ್ವ ಉಪವಿಭಾಗದ ಪೊಲೀಸ್ ಇನ್‌ಸ್ಪೆಕ್ಟರ್ ಪ್ರಕರಣದ ತನಿಖೆ ನಡೆಸಲಿದ್ದಾರೆ.

CALL NOW 8606485844

 

Leave a Reply

error: Content is protected !!