










ನೆಲ್ಯಾಡಿ: ಬಜತ್ತೂರಿನಲ್ಲಿ ಶುಕ್ರವಾರ ನಡೆದ ಉಪ್ಪಿನಂಗಡಿ ವಲಯ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ನೆಲ್ಯಾಡಿಯ ವಿದ್ಯಾರ್ಥಿನಿ ಹಿಮಾನಿ ಅವರು ಅತ್ಯುತ್ತಮ ಪ್ರದರ್ಶನ ನೀಡಿ ತಾಲೂಕು ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಹಿಮಾನಿ ಅವರು ಪಡುಬೆಟ್ಟು ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಕುಶಾಲಪ್ಪ ಹಾಗೂ ನೆಲ್ಯಾಡಿ ಸಂತ ಜಾರ್ಜ್ ಶಾಲೆಯ ಸಹಶಿಕ್ಷಕಿ ಭವ್ಯ ದಂಪತಿಯ ಪುತ್ರಿಯಾಗಿದ್ದಾರೆ. ವಿದ್ಯಾರ್ಥಿನಿಯ ಸಾಧನೆಯ ಹಿಂದೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜಯಂತ್ ಅವರ ಸಮರ್ಪಕ ತರಬೇತಿ ಮತ್ತು ಮಾರ್ಗದರ್ಶನವೂ ಪ್ರಮುಖ ಪಾತ್ರ ವಹಿಸಿದೆ.
ವಿದ್ಯಾರ್ಥಿನಿಯ ಈ ಗಮನಾರ್ಹ ಸಾಧನೆಗೆ ಶಾಲೆಯ ಮುಖ್ಯಶಿಕ್ಷಕ ಶ್ರೀಧರ್, ಶಿಕ್ಷಕ ವೃಂದ, ಎಸ್‌ಡಿಎಂಸಿ ಅಧ್ಯಕ್ಷ ದಿನಕರ್ ಹಾಗೂ ಸದಸ್ಯರು ಅಭಿನಂದಿಸಿದರು.



