ಗಾಂಧಿ ಮೈದಾನದ ಬಳಿ ಯು-ಟರ್ನ್ ಕಲ್ಪಿಸುವಂತೆ ಆಗ್ರಹ; ನೂರಕ್ಕೂ ಅಧಿಕ ಮಂದಿ ಸಭೆಯಲ್ಲಿ ಮಹತ್ವದ ನಿರ್ಧಾರ
ಸೆ.9ರಂದು ನೆಲ್ಯಾಡಿಯಲ್ಲಿ ಯು-ಟರ್ನ್ಗಾಗಿ ಬೃಹತ್ ಪ್ರತಿಭಟನೆನೂರಕ್ಕೂ ಅಧಿಕ ಮಂದಿ ಸಭೆಯಲ್ಲಿ ಮಹತ್ವದ ನಿರ್ಧಾರ
ನೆಲ್ಯಾಡಿ: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಅಡ್ಡಹೊಳೆಯಿಂದ ಬಿ.ಸಿ.ರೋಡಿನವರೆಗೆ ನಡೆಯುತ್ತಿರುವ ಚತುಷ್ಪಥ ಹೆದ್ದಾರಿ ಕಾಮಗಾರಿಯು ಮುಕ್ತಾಯದ ಹಂತಕ್ಕೆ ತಲುಪುತ್ತಿರುವ ಬೆನ್ನಲ್ಲೇ, ನೆಲ್ಯಾಡಿ ಗಾಂಧಿ ಮೈದಾನದ ಬಳಿಯಿಂದ ಬೆಥನಿ ವಿದ್ಯಾ ಸಂಸ್ಥೆಯ ಮಧ್ಯದಲ್ಲಿ ಯು-ಟರ್ನ್ ಕಲ್ಪಿಸಬೇಕೆಂಬ ಬೇಡಿಕೆ ಮತ್ತೆ ತೀವ್ರಗೊಂಡಿದೆ. ಈ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ಸೆ.9ರಂದು ನೆಲ್ಯಾಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ವಿವಿಧ ಸಂಘಟನೆಗಳು, ಶಿಕ್ಷಣ ಸಂಸ್ಥೆಗಳ ಮುಖಂಡರು, ಧಾರ್ಮಿಕ ಮುಖಂಡರು ಹಾಗೂ ಸ್ಥಳೀಯ ಸಾರ್ವಜನಿಕರು ತೀರ್ಮಾನಿಸಿದ್ದಾರೆ.
ನೆಲ್ಯಾಡಿ ಗಾಂಧಿ ಮೈದಾನದ ಬಳಿಯಿಂದ ಬೆಥನಿ ವಿದ್ಯಾ ಸಂಸ್ಥೆಯ ಮಧ್ಯದಲ್ಲಿ ಯು-ಟರ್ನ್ ಕಲ್ಪಿಸಬೇಕೆಂಬ ಬೇಡಿಕೆಯನ್ನು ಸ್ಥಳೀಯರು ಹಲವು ಬಾರಿ ಸಂಸದರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಆರಂಭಿಕ ಹಂತದಲ್ಲಿ ಯು-ಟರ್ನ್ ವ್ಯವಸ್ಥೆ ಕಲ್ಪಿಸುವ ಕುರಿತು ಭರವಸೆ ನೀಡಲಾಗಿತ್ತು ಎನ್ನಲಾಗಿದೆ. ಆದರೆ ಇದೀಗ ಯಾವುದೇ ಕಾರಣಕ್ಕೂ ಆ ಸ್ಥಳದಲ್ಲಿ ಯು-ಟರ್ನ್ ನೀಡಲು ಸಾಧ್ಯವಿಲ್ಲ ಎಂಬ ನಿಲುವು ವ್ಯಕ್ತವಾಗಿರುವುದರಿಂದ ಸ್ಥಳೀಯ ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ನೂರಕ್ಕೂ ಅಧಿಕ ಮಂದಿ ಭಾಗವಹಿಸಿ ಯು-ಟರ್ನ್ ಅಗತ್ಯತೆ ಹಾಗೂ ಮುಂದಿನ ಹೋರಾಟದ ರೂಪುರೇಷೆಗಳ ಕುರಿತು ಚರ್ಚಿಸಿದರು.
ನೆಲ್ಯಾಡಿ ಗಾಂಧಿ ಮೈದಾನದ ಸುತ್ತಮುತ್ತ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಿದ್ದು, ಪ್ರಮುಖ ರಾಜ್ಯ ಹೆದ್ದಾರಿಗೆ ಸಂಪರ್ಕ ಸಾಧಿಸುವ ಮಾರ್ಗವೂ ಇದೇ ಭಾಗದಲ್ಲಿದೆ. ಅಲ್ಲದೆ, ಈ ಪ್ರದೇಶದಲ್ಲಿ ಹಲವು ಶಿಕ್ಷಣ ಸಂಸ್ಥೆಗಳು, ಧಾರ್ಮಿಕ ಕೇಂದ್ರಗಳು ಹಾಗೂ ಸಾರ್ವಜನಿಕ ಸೇವಾ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಯು-ಟರ್ನ್ ವ್ಯವಸ್ಥೆ ಇಲ್ಲದಿದ್ದಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ವಾಹನ ಸವಾರರು ತಮ್ಮ ಗಮ್ಯಸ್ಥಾನಕ್ಕೆ ತೆರಳಲು ಸುಮಾರು ಎರಡರಿಂದ ಮೂರು ಕಿಲೋಮೀಟರ್ ದೂರ ಸುತ್ತು ಬಳಸಿ ಪ್ರಯಾಣಿಸಬೇಕಾದ ಅನಿವಾರ್ಯತೆ ಎದುರಾಗಲಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಪ್ರತಿದಿನ ಸಾವಿರಾರು ವಿದ್ಯಾರ್ಥಿಗಳು, ಶಿಕ್ಷಕರು, ಸಾರ್ವಜನಿಕರು ಹಾಗೂ ವಾಹನ ಸವಾರರು ಈ ಮಾರ್ಗವನ್ನು ಅವಲಂಬಿಸಿರುವುದರಿಂದ, ಯು-ಟರ್ನ್ ಇಲ್ಲದಿರುವುದು ಮುಂದಿನ ದಿನಗಳಲ್ಲಿ ಸಂಚಾರ ಸಮಸ್ಯೆಗೂ ಕಾರಣವಾಗುವ ಸಾಧ್ಯತೆ ಇದೆ ಎಂದು ಸಭೆಯಲ್ಲಿ ಭಾಗವಹಿಸಿದವರು ಆತಂಕ ವ್ಯಕ್ತಪಡಿಸಿದರು. ಸ್ಥಳೀಯ ಜನರ ಅನುಕೂಲತೆ, ಶಿಕ್ಷಣ ಸಂಸ್ಥೆಗಳಿಗೆ ತೆರಳುವ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ವಿವಿಧ ಗ್ರಾಮಗಳಿಗೆ ಸಂಪರ್ಕದ ದೃಷ್ಟಿಯಿಂದ ಗಾಂಧಿ ಮೈದಾನದ ಬಳಿ ಯು-ಟರ್ನ್ ಕಲ್ಪಿಸುವುದು ಅತ್ಯಗತ್ಯವಾಗಿದೆ ಎಂದು ಮುಖಂಡರು ಒತ್ತಾಯಿಸಿದರು.
ಈ ಎಲ್ಲಾ ವಿಚಾರಗಳನ್ನು ಪರಿಗಣಿಸಿ, ಯು-ಟರ್ನ್ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ಸೆ9ರಂದು ನೆಲ್ಯಾಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಸಭೆಯಲ್ಲಿ ಸರ್ವಾನುಮತದ ತೀರ್ಮಾನ ಕೈಗೊಳ್ಳಲಾಯಿತು. ಪ್ರತಿಭಟನೆಯನ್ನು ಯಶಸ್ವಿಗೊಳಿಸುವ ಉದ್ದೇಶದಿಂದ ವಿವಿಧ ಸಂಘಟನೆಗಳು, ಶಿಕ್ಷಣ ಸಂಸ್ಥೆಗಳು, ಸಾರ್ವಜನಿಕರು ಹಾಗೂ ಸ್ಥಳೀಯ ಫಲಾನುಭವಿಗಳನ್ನು ಒಗ್ಗೂಡಿಸಿ ಹೋರಾಟ ನಡೆಸಲು ನಿರ್ಧರಿಸಲಾಯಿತು.
ಹೋರಾಟ ಸಮಿತಿ ರಚನೆ ಸಮಿತಿಯ ಅಧ್ಯಕ್ಷರಾಗಿ ಬೆಥನಿ ವಿದ್ಯಾಸಂಸ್ಥೆಯ ಸಂಚಾಲಕ ಹಾಗೂ ಪ್ರಾಚಾರ್ಯ ಡಾ. ವರ್ಗೀಸ್ ಕೈಪನಡ್ಕ, ಉಪಾಧ್ಯಕ್ಷರಾಗಿ ರವಿಚಂದ್ರ ಅತ್ರಿಜಾಲು, ಕಾರ್ಯದರ್ಶಿಯಾಗಿ ರಫೀಕ್, ಕೋಶಾಧಿಕಾರಿಯಾಗಿ ಸೈಜು ಸದಸ್ಯರಾಗಿ ಆಟೋ ಚಾಲಕ–ಮಾಲಕರ ಸಂಘದ ಅಧ್ಯಕ್ಷ ಸಂತೋಷ್, ನೆಲ್ಯಾಡಿ–ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ಅಧ್ಯಕ್ಷ ಸತೀಶ್ ಕೆ.ಎಸ್., ಅಂಗನವಾಡಿ ಕಾರ್ಯಕರ್ತೆ ಸಂಪಾವತಿ, ನೆಲ್ಯಾಡಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯೆ ಉಷಾ ಜೋಯಿ, ಉಪನ್ಯಾಸಕಿ ಜೆಸಿಂತಾ, ಮನೋಜ್, ಗಣೇಶ್ ಪೂಜಾರಿ ಹಾಗೂ ಪೌಲ್ ಡಿಸೋಜ, ಸಂಚಾಲಕರಾಗಿ ನೆಲ್ಯಾಡಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಇಕ್ಬಾಲ್ ಅವರನ್ನು ನೇಮಕ ಮಾಡಲಾಯಿತು.
ಪ್ರತಿಭಟನೆಯ ಯಶಸ್ಸಿಗಾಗಿ ಪ್ರತ್ಯೇಕವಾಗಿ ವಿವಿಧ ಉಪಸಮಿತಿಗಳನ್ನೂ ರಚಿಸಲಾಯಿತು. ಸಭೆಯಲ್ಲಿ ಬೆಥನಿ ವಿದ್ಯಾಸಂಸ್ಥೆಯ ಸಂಚಾಲಕ ಹಾಗೂ ಪ್ರಾಚಾರ್ಯ ಡಾ.ವರ್ಗೀಸ್ ಕೈಪನಡ್ಕ, ಫಾ. ಹನಿ ಜೇಕಬ್, ಆಟೋ ಚಾಲಕ–ಮಾಲಕರ ಸಂಘದ ಅಧ್ಯಕ್ಷ ಸಂತೋಷ್, ನೆಲ್ಯಾಡಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯೆ ಉಷಾ ಜೋಯಿ, ಜೋಸ್ ಮಾತಾ, ನಿವೃತ್ತ ಮುಖ್ಯಶಿಕ್ಷಕ ವೆಂಕಟರಮಣ ಆರ್., ಫಾ. ಗ್ರೇಸಸ್, ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಏಲಿಯಸ್ ಎಂ.ಕೆ., ನೆಲ್ಯಾಡಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಅಬ್ದುಲ್ ಜಬ್ಬಾರ್, ಮಹಮ್ಮದ್ ಇಕ್ಬಾಲ್, ನೆಲ್ಯಾಡಿ–ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ಅಧ್ಯಕ್ಷ ಸತೀಶ್ ಕೆ.ಎಸ್. ಹಾಗೂ ನೆಲ್ಯಾಡಿ ಅಲ್ಫೋನ್ಸ ಚರ್ಚ್ನ ಧರ್ಮಗುರು ಫಾ.ಶಾಜಿ ಮ್ಯಾಥ್ಯೂ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
72ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಪಂಜ ವಲಯ ಅರಣ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ನೆಲ್ಯಾಡಿ: “ಆವಾಸ ಸ್ಥಾನಗಳ ಜೋಡಣೆ ಹಾಗೂ ವನ್ಯಜೀವಿಗಳ ಅಭಿವೃದ್ಧಿ” ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿರುವ ...
ಉಪ್ಪಿನಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕ್ರೀಡಾಕೂಟ ಹಿರೆಬಂಡಾಡಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಇಂದ್ರಪ್ರಸ್ಥ ...
ಕೊಕ್ಕಡ: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಶಿಶಿಲ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಹೀ ಸೇವಾ ಸಮಾರೋಪ ಸಮಾರಂಭದೊಂದಿಗೆ ವಿಶೇಷ ಗ್ರಾಮ ಸಭೆ ನಡೆಯಿತು. ಪಂಚಾಯತ್ ಆಡಳಿತಾಧಿಕಾರಿ ಭರತ್ ...
ಕೊಕ್ಕಡ: ಸಂತ ಜೋನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ನೂತನ ಯಾಜಕರಾಗಿ ಗುರುದೀಕ್ಷೆ ಸ್ವೀಕರಿಸಿದ ರೆ| ಫಾ| ವಿಲ್ಫ್ರೆಡ್ ಸ್ಟೀವನ್ ರೊಡ್ರಿಗಸ್ ಹಾಗೂ ಡಾಕ್ಟರೇಟ್ ಪದವಿ ಪಡೆದ ಡಾ| ಸೈಮನ್ ...
ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪ ಎಫ್ಐಆರ್ನಲ್ಲಿ ಸೇರಿಸಿಲ್ಲ: ಬಣಕಲ್ ಪೊಲೀಸರ ವಿರುದ್ಧ ಗಾಯಾಳುಗಳ ಆಕ್ರೋಶ ಕೊಕ್ಕಡ: ಮಂತ್ರಾಲಯಕ್ಕೆ ತೆರಳುತ್ತಿದ್ದ ಶಿಶಿಲದ ಸ್ನೇಹಿತರಿದ್ದ ಕಾರಿಗೆ ಎದುರಿನಿಂದ ಬಂದ ...
ಅರಸಿನಮಕ್ಕಿ: ಮಹಾತ್ಮಗಾಂಧಿ ಜಯಂತಿಯ ಅಂಗವಾಗಿ ಅರಸಿನಮಕ್ಕಿ ಗ್ರಾಮ ಪಂಚಾಯಿತಿ ವತಿಯಿಂದ ಗಾಂಧಿ ಜಯಂತಿ ಆಚರಣೆ ಹಾಗೂ ‘ಸ್ವಚ್ಛತಾ ಹೀ ಸೇವಾ’ ಅಭಿಯಾನದ ಸಮಾರೋಪ ಸಮಾರಂಭ ನಡೆಯಿತು. ಇದೇ ...
ನೆಲ್ಯಾಡಿ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ನೆಲ್ಯಾಡಿ ಮಹಾಶಕ್ತಿ ಕೇಂದ್ರದ ವತಿಯಿಂದ ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ಅ.4ರಂದು ನೆಲ್ಯಾಡಿಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ನೆಲ್ಯಾಡಿಯ ...
ನೆಲ್ಯಾಡಿ: ಕಡಬ ತಾಲೂಕಿನ ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಅನಿಲ ಸಮೀಪ ಶುಕ್ರವಾರ ಸಂಜೆ ಚಲಿಸುತ್ತಿದ್ದ ಕಾರಿಗೆ ಕಡವೆಯೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸುಬ್ರಹ್ಮಣ್ಯದಿಂದ ...
ನೆಲ್ಯಾಡಿ: ನೆಲ್ಯಾಡಿಯ ಲೈಫ್ ಫಾರ್ಮಾ ಸಂಸ್ಥೆಯಲ್ಲಿ ಔಷಧ ವಿತರಣೆ ಹಾಗೂ ಕಂಪ್ಯೂಟರ್ ಬಿಲ್ಲಿಂಗ್ ಕೆಲಸ ನಿರ್ವಹಿಸಲು ಸಿಬ್ಬಂದಿ ತುರ್ತಾಗಿ ಅಗತ್ಯವಿದ್ದಾರೆ. ಅಭ್ಯರ್ಥಿಗಳು ಎಸ್ಎಸ್ಎಲ್ಸಿ, ಪಿಯುಸಿ ಅಥವಾ ಯಾವುದೇ ...
ಶಿರಾಡಿ: ಕಡಬ ತಾಲೂಕು ಶಿರಾಡಿ ಗ್ರಾಮದ ಎಸ್.ಆರ್.ಎಸ್. ಪೆಟ್ರೋಲ್ ಪಂಪ್ ಸಮೀಪ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಬೊಲೆರೋ ಪಿಕ್ಅಪ್ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ...
ಕೊಕ್ಕಡ: ನಿಡ್ಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ 2026-27ನೇ ಸಾಲಿನ ಕೊಕ್ಕಡ, ನಿಡ್ಲೆ ಹಾಗೂ ಪೆರ್ಲ ಕ್ಲಸ್ಟರ್ಗಳ ವಲಯ ಮಟ್ಟದ 14ರ ವಯೋಮಾನದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಶಿಶಿಲದ ಮಹರ್ಷಿ ...
ಕೊಕ್ಕಡ: ನಾಲ್ಕು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ಮೂಲಕ ಪೂರ್ಣ ಪ್ರಮಾಣದ ಪ್ರಯತ್ನ ನಡೆಸಲಾಗುವುದು ಎಂದು ಮಂಗಳೂರು ಲೋಕಸಭಾ ...
ನೆಲ್ಯಾಡಿ: ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ನಾಟೆಕಲ್–ಮಂಗಳೂರು ಹಾಗೂ ಬದ್ರಿಯಾ ಜುಮಾ ಮಸೀದಿ ನೆಲ್ಯಾಡಿಯ ಅಧೀನ ಸಂಸ್ಥೆಯಾದ ನುಸ್ರತುಲ್ ಮಸಾಕೀನ್ ಯಂಗ್ ಮೆನ್ಸ್ ...
ಕಡಬ: ಪೊಲೀಸ್ ಇಲಾಖೆಯ ಸಿವಿಲ್ ಪರೀಕ್ಷೆ ಕಾನ್ಸ್ಟೇಬಲ್ ನೇಮಕಾತಿಯ ದೈಹಿಕ ಪರೀಕ್ಷೆಗೆ ಹಾಜರಾಗಲು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ದುರ್ಬಳಕೆ ಮಾಡಿಕೊಂಡು ನಕಲಿ ಪ್ರವೇಶ ಪತ್ರ ಸೃಷ್ಟಿಸಿ ವಂಚಿಸಲು ...
ನೆಲ್ಯಾಡಿ: ಉದನೆ ಸಮೀಪದ ನೆಲ್ಯಡ್ಕ ನಿವಾಸಿ ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರಿ ಜನರಲ್ ಆಗಿ ಸೇವೆ ಸಲ್ಲಿಸುತ್ತಿದ್ದ ವಂ.ಡಾ.ಮಾಣಿ ವೆಳುತ್ತೇಡತ್ತುಪರಂಬಿಲ್(64) ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರದಂದು ನಿಧನರಾದರು. ಧರ್ಮಗುರುಗಳಾಗಿ, ...
ನೆಲ್ಯಾಡಿ: ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಅಟೋರಿಕ್ಷಾ ಚಲಾಯಿಸಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಕಡಬ ತಾಲೂಕು ಶಿರಿಬಾಗಿಲು ಗ್ರಾಮದ ದೇರಣೆ ಎಂಬಲ್ಲಿ ಭಾನುವಾರದಂದು ...
ನೆಲ್ಯಾಡಿ: ಸರ್ ಪ್ರಕ್ರಿಯೆಯ ಸಂದರ್ಭದಲ್ಲಿ ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ನಿಮಿತ್ತ ವಿದೇಶ ಹಾಗೂ ಬೆಂಗಳೂರಿನಲ್ಲಿ ತಾತ್ಕಾಲಿಕವಾಗಿ ವಾಸಿಸುತ್ತಿರುವ ಸ್ಥಳೀಯ ನಿವಾಸಿಗಳ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ...
ಕೊಕ್ಕಡ: ಹಲವು ವರ್ಷಗಳಿಂದ ಗ್ರಾಮಸ್ಥರ ಬೇಡಿಕೆಯಾಗಿರುವ ಶಿಶಿಲ-ಬೈರಾಪುರ ಅಂತರ ಜಿಲ್ಲಾ ಗ್ರಾಮೀಣ ರಸ್ತೆಯನ್ನು ಹಸಿರು ಮಾದರಿ ರಸ್ತೆಯಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮಂಗಳವಾರ ಸ್ಥಳ ಪರಿಶೀಲನೆ ನಡೆಯಿತು. ಪ್ರಧಾನಮಂತ್ರಿ ...
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪತ್ರಡ್ಕದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ...
ನೆಲ್ಯಾಡಿ: ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಸಮಾಜ ಸೇವಕ ಹಾಗೂ ಯಕ್ಷಗಾನ ಸಂಘಟಕ, ನೆಲ್ಯಾಡಿ ಕೆಳಗಿನಪರಾರಿ ನಿವಾಸಿ ದಿ.ಜಯಾನಂದ ಬಂಟ್ರಿಯಾಲ್ ಅವರಿಗೆ ಯಕ್ಷಗಾನ ತಾಳಮದ್ದಳೆಯ ಮೂಲಕ ನುಡಿನಮನ ...
ಕಳೆಂಜ: ಗ್ರಾಮದ ಶಾಲೆತ್ತಡ್ಕ ಎಂಬಲ್ಲಿ ಕೇಂದ್ರ ಸರಕಾರದ ಅನುದಾನದಡಿಯಲ್ಲಿ ಸುಮಾರು ರೂ. 65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಆಯುಷ್ಮಾನ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡದ ಶಿಲಾನ್ಯಾಸ ...
ಶಿಶಿಲ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ ವತಿಯಿಂದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಶಿಶಿಲದಲ್ಲಿ ...
ಉಜಿರೆ: ಮೌಲ್ಯ ನಾಯಕ್ ಅವರು ದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯವು ಆಯೋಜಿಸಿದ್ದ ಭಾರತೀಯ ಜ್ಞಾನ ಪರಂಪರೆ (ಇಂಡಿಯನ್ ನಾಲೆಡ್ಜ್ ಸಿಸ್ಟಮ್ ) ಸಂಸ್ಕೃತ ಒಲಂಪಿಯಾಡ್ನಲ್ಲಿ ಸ್ವರ್ಣ ಪದಕ ...
ಕೊಕ್ಕಡ: ನಾಡಿನ ಪ್ರಸಿದ್ಧ ಬಯಲು ಗಣಪತಿ ಕ್ಷೇತ್ರವಾಗಿರುವ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ...
ಕಡಬ: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ಬಯೋ ಮೆಡಿಕಲ್ ಎಂಜಿನಿಯರಿಂಗ್ ಅಂತಿಮ ಪರೀಕ್ಷೆಯಲ್ಲಿ ಬೆಂಗಳೂರಿನ ಡಾ| ಎಸಿಎಸ್ ಇಂಜಿನಿಯರಿಂಗ್ ಕಾಲೇಜಿನ (2022-26 ಬ್ಯಾಚ್) ವಿದ್ಯಾರ್ಥಿ ಕಡಬದ ...
ನೇಲ್ಯಡ್ಕ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳ್ತಂಗಡಿ ಹಾಗೂ ರೆಖ್ಯಾ-ನೇಲ್ಯಡ್ಕ ಅಂಗನವಾಡಿ ಕೇಂದ್ರದ ವತಿಯಿಂದ ಸುಮಾರು 36 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಅಂಗನವಾಡಿ ...
ರಾಮಕುಂಜ: ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕು. ರಕ್ಷಾ ಡಿ. ಅವರು 30 ನಿಮಿಷದಲ್ಲಿ ಕೈಗಳನ್ನು ಸೊಂಟದಲ್ಲಿ ಜೊತೆಯಾಗಿ ಹಿಡಿದು ಮುಂದಕ್ಕೆ ಹಾಗೂ ...
ಉಜಿರೆ: ಶಿಕ್ಷಣ ಮತ್ತು ಆರೋಗ್ಯ ಎಲ್ಲರಿಗೂ ಸಿಗುವುದೇ ಸರಕಾರದ ಆಶಯ. ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕಾಣುತ್ತಿದೆ. ನಾಡಿನ ಬೆಳಕಾಗುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಎಲ್ಲ ಶಿಕ್ಷಕರಿಗೆ ...
ನೂಜಿಬಾಳ್ತಿಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಡಬ ವಲಯದ ನೂಜಿಬಾಳ್ತಿಲ ನವಚೇತನ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಸಮಾರಂಭವು ನೂಜಿಬಾಳ್ತಿಲ ಗ್ರಾಮ ...
ಬಜತ್ತೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೈಕ್ವೊಂದು ಟ್ಯಾಂಕರ್ಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೆ.25ರ ರಾತ್ರಿ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ...
ಸೆ.29ರಂದು ಶಿಶಿಲ ವಾಲ್ಮೀಕಿ ಆಶ್ರಮ ಶಾಲೆ ಕಟ್ಟಡ ಉದ್ಘಾಟನೆ ವಿದ್ಯುತ್ ಕೈಕೊಟ್ಟರೆ ವಿದ್ಯಾರ್ಥಿಗಳಿಗೆ ಮಂದ ಬೆಳಕಿನಲ್ಲೇ ಪಾಠ ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಆದಿವಾಸಿ ಹಾಗೂ ಪರಿಶಿಷ್ಟ ಪಂಗಡ ...
ಬಂಟ್ವಾಳ: ತಲವಾರು ಹಾಗೂ ಕಬ್ಬಿಣದ ರಾಡ್ನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ತೀವ್ರವಾಗಿ ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ತೆಂಕಬೆಳ್ಳೂರು ...
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥಗೊಂಡ ಬಳಿಕ ನೆಲ್ಯಾಡಿ ಬಸ್ ನಿಲ್ದಾಣಕ್ಕೆ ಎಕ್ಸ್ಪ್ರೆಸ್ ಬಸ್ಗಳು ಪ್ರವೇಶಿಸದೆ ಓವರ್ಬ್ರಿಡ್ಜ್ ಮೂಲಕ ನೇರವಾಗಿ ಸಂಚರಿಸುತ್ತಿರುವುದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಎಕ್ಸ್ಪ್ರೆಸ್ ಹಾಗೂ ಸರ್ವಿಸ್ ...
ಬಂಟ್ವಾಳ: ತಾಲೂಕಿನ ತುಂಬೆ ಗ್ರಾಮದ ಕೆಳಗಿನ ತುಂಬೆ ಎಂಬಲ್ಲಿ ನದಿ ಕಿನಾರೆಯಿಂದ ಅಕ್ರಮವಾಗಿ ಮರಳು ತೆಗೆದು ಟಿಪ್ಪರ್ ಲಾರಿಗಳಿಗೆ ತುಂಬಿಸುತ್ತಿದ್ದ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಸೆ.25ರಂದು ...
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನೆಲ್ಯಾಡಿಯ ಸೇಂಟ್ ಜಾರ್ಜ್ ಹಾಗೂ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಗಳ ನಡುವೆ ಯು-ಟರ್ನ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ನಡೆದ ಹೋರಾಟದ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ...
ಕೊಕ್ಕಡ: ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗಾಗಿ ನಡೆಯುತ್ತಿರುವ ಹೋರಾಟವನ್ನು ಮುಂದುವರಿಸುವ ನಿಟ್ಟಿನಲ್ಲಿ ಶಿಶಿಲ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಶಿಶಿಲ–ಬೈರಾಪುರ ರಸ್ತೆ ಹೋರಾಟ ಸಮಿತಿಯ ಸಭೆ ಗುರುವಾರ ನಡೆಯಿತು. ಸಭೆಯಲ್ಲಿ ...
ನೆಲ್ಯಾಡಿ: ವಳಯಿಲ್ ನಿವಾಸಿ, ದಿ. ವಿ.ಟಿ. ಜೋಸೆಫ್ ಅವರ ಪತ್ನಿ ಚಿನ್ನಮ್ಮ (56) ಅವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ. 24ರಂದು ನಿಧನರಾದರು. ಮೃತರು ...
ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್–ಅಶ್ವಿನಿ ಆಸ್ಪತ್ರೆ ಸಹಯೋಗದಲ್ಲಿ ತಜ್ಞ ವೈದ್ಯರಿಂದ ತಪಾಸಣೆ ಹಾಗೂ ಸಲಹೆ ನೆಲ್ಯಾಡಿ: ಮಂಗಳೂರಿನ ಪ್ರತಿಷ್ಠಿತ ಬಂಜೆತನ ನಿವಾರಣಾ ಸಂಸ್ಥೆಯಾದ ಬಿರ್ಲಾ ಫರ್ಟಿಲಿಟಿ ಮತ್ತು ...
ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಜಿಲ್ಲಾ ಹಾಗೂ ತಾಲೂಕು ಮಹಿಳಾ ಒಕ್ಕೂಟಗಳ ಸದಸ್ಯರಿಗೆ ಲಿಂಗ ಸಮಾನತಾ ಕುರಿತು ಸಾಮರ್ಥ್ಯ ವರ್ಧನಾ ತರಬೇತಿ ಕಾರ್ಯಕ್ರಮ ಬೆಳ್ತಂಗಡಿಯ ಸಾನ್ತೋಮ್ ...
ವಿಕಾಸ ಸೌಧದಲ್ಲಿ ಕರ್ನಾಟಕ ರಾಜ್ಯದ ಮಾಜಿ ಸೈನಿಕರ ಸಂಘದ ಪ್ರತಿನಿಧಿಗಳೊಂದಿಗೆ ಗೃಹ ಸಚಿವ ಪ್ರಿಯಾಂಕ ಖರ್ಗೆ ಸಭೆ; ಭೂಮಿ, ಮೀಸಲಾತಿ, ಉದ್ಯೋಗ, ನಿವೇಶನ ಸೇರಿದಂತೆ ವಿವಿಧ ಬೇಡಿಕೆಗಳ ...
ಶಿಶಿಲ: ಗ್ರಾಮದ ಗುಂಡಿಕ್ಕಾಡು ನಿವಾಸಿ ತನಿಯಪ್ಪ ಗೌಡ ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೆ.23ರಂದು ಬೆಳಕಿಗೆ ಬಂದಿದೆ. ಕೆಲ ದಿನಗಳ ಹಿಂದಷ್ಟೇ ಅವರ ...
ನೆಲ್ಯಾಡಿ: ಗ್ರಾಮದ ತೋಟದಮನೆ ನಿವಾಸಿ, ನಿವೃತ್ತ ಉಪತಹಶೀಲ್ದಾರ್ ಹಾಗೂ ನೆಲ್ಯಾಡಿ ವಲಯ ಬಂಟರ ಸಂಘದ ಸ್ಥಾಪಕ ಕಾರ್ಯದರ್ಶಿ ಗುಡ್ಡಪ್ಪ ಶೆಟ್ಟಿ(68) ಅವರು ಸೆ. 23ರಂದು ಮುಂಜಾನೆ ಸ್ವಗೃಹದಲ್ಲಿ ...
ನೆಲ್ಯಾಡಿ: ಕಸ್ತೂರಿ ರಂಗನ್ ವರದಿ ಕುರಿತಂತೆ ಗ್ರಾಮಸ್ಥರ ಸಲಹೆ, ಸೂಚನೆ, ಅಭಿಪ್ರಾಯ ಸಂಗ್ರಹಕ್ಕೆ ಸಂಬಂಧಿಸಿ ಗೋಳಿತ್ತೊಟ್ಟು ಗ್ರಾ.ಪಂ.ನ ವಿಶೇಷ ಗ್ರಾಮಸಭೆ ಸೆ.22ರಂದು ಬೆಳಗ್ಗೆ ಗ್ರಾ.ಪಂ.ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ...
ಸರಕಾರಿ ಶಾಲೆಗಳ ಉಳಿವಿಗೆ ಸಮುದಾಯದ ಸಹಕಾರ ಅಗತ್ಯ:ಬೆಳ್ಳಿಪ್ಪಾಡಿ ರಾಜೇಂದ್ರ ರೈ ಕಡಬ: ಕಡಬ ತಾಲೂಕಿನ ಮರ್ದಾಳದ ಪಾಲೆತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬ್ಯಾಂಕ್ ಆಫ್ ಬರೋಡ ...
ನೆಲ್ಯಾಡಿ: ನಿವೃತ್ತ ಅರಣ್ಯ ರಕ್ಷಕ ಶೀನಪ್ಪ ಗೌಡ(64ವ.)ರವರು ಅಲ್ಪಕಾಲದ ಅನಾರೋಗ್ಯದಿಂದ ಸೆ.22ರಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು. ಮೂಲತ: ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮದ ಕುದ್ಕೋಳಿ ...
ಪಠ್ಯದ ಜೊತೆಗೆ ಕೃಷಿಯ ಬಗ್ಗೆ ಕಲಿಕೆಯೂ ಅಗತ್ಯ: ಬೆಳ್ಳಿಪ್ಪಾಡಿ ರಾಜೇಂದ್ರ ರೈ ಕಡಬ: ಶಿಕ್ಷಣದ ಜೊತೆಗೆ ಮಕ್ಕಳಿಗೆ ಕೃಷಿ ಸಂಸ್ಕೃತಿಯತ್ತ ಒಲವು ಮೂಡಿಸುವ ಕಾರ್ಯಕ್ರಮಗಳು ನಡೆಯಬೇಕು. ಗ್ರಾಮೀಣ ...
ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಅಪಘಾತ; ಮಂಗಳೂರು ಆಸ್ಪತ್ರೆಗೆ ದಾಖಲು ನೆಲ್ಯಾಡಿ: ಕಡಬ ತಾಲೂಕಿನ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಬೈಕ್ವೊಂದು ನಿಯಂತ್ರಣ ...