







ಗೋಳಿತ್ತೊಟ್ಟು: ಕಳೆದ ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮದ ಡೆಬ್ಬೇಲಿ ಗಣೇಶ ನಿವಾಸದ ಕುಶಾನ್ ಗೌಡ (7) ಸೆ.7ರಂದು ಮಧ್ಯಾಹ್ನ ಸ್ವಗೃಹದಲ್ಲಿ ನಿಧನರಾದರು.
ಕುಶಾನ್ ಗೌಡ ಅವರು ಗೋಳಿತ್ತೊಟ್ಟು ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಸುಮಾರು ಒಂದು ವರ್ಷದ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದ ಬಾಲಕನಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ ಇತ್ತೀಚೆಗೆ ಮತ್ತೆ ಅನಾರೋಗ್ಯ ಉಲ್ಬಣಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದ ಅವರು ಸೆ.7ರಂದು ಮಧ್ಯಾಹ್ನ ಮನೆಯಲ್ಲಿ ಕೊನೆಯುಸಿರೆಳೆದರು.
ಮೃತರು ತಂದೆ ಲೋಹಿತ್ ಗೌಡ, ತಾಯಿ ಸುಪ್ರಿಯಾ, ಅಜ್ಜ ವೆಂಕಪ್ಪ ಗೌಡ ಹಾಗೂ ಅಜ್ಜಿ ಜಾನಕಿ ಅವರನ್ನು ಅಗಲಿದ್ದಾರೆ.
ಬಾಲಕನ ನಿಧನದ ಸುದ್ದಿ ತಿಳಿದು ಗೋಳಿತ್ತೊಟ್ಟು ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರು, ಸಹಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಸ್ಥಳೀಯ ಗಣ್ಯರು ಮನೆಗೆ ಭೇಟಿ ನೀಡಿ ಮೃತ ಬಾಲಕನ ಕುಟುಂಬಕ್ಕೆ ಸಾಂತ್ವನ ಹೇಳಿ ಸಂತಾಪ ಸೂಚಿಸಿದ್ದಾರೆ.









































































































