







ನೆಲ್ಯಾಡಿ: ಪ್ರಾಥಮಿಕ ಆರೋಗ್ಯ ಕೇಂದ್ರ ನೆಲ್ಯಾಡಿಯಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ ಇಬ್ಬರು ಆರೋಗ್ಯ ಇಲಾಖೆಯ ಸಿಬ್ಬಂದಿ ಮುಂಬಡ್ತಿ ಹೊಂದಿ ಬೇರೆಡೆಗೆ ವರ್ಗಾವಣೆಗೊಂಡಿದ್ದಾರೆ.
ಪ್ರಾಥಮಿಕ ಆರೋಗ್ಯ ಕೇಂದ್ರ ನೆಲ್ಯಾಡಿಯಲ್ಲಿ ಕಳೆದ 17 ವರ್ಷಗಳಿಂದ ಶುಶ್ರೂಷಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೆಲಿನಾ ಯು.ವಿ. ಅವರು ಹಿರಿಯ ಶುಶ್ರೂಷಣಾಧಿಕಾರಿಯಾಗಿ ಮುಂಬಡ್ತಿ ಹೊಂದಿದ್ದು, ಮಂಗಳೂರಿನ ಮೂಡುಶೆಡ್ಡೆಯಲ್ಲಿರುವ ಕ್ಷಯ ಹಾಗೂ ಎದೆ ರೋಗಗಳ ಆಸ್ಪತ್ರೆಗೆ ವರ್ಗಾವಣೆಗೊಂಡಿದ್ದಾರೆ. ಇದೇ ವೇಳೆ, ಪ್ರಾಥಮಿಕ ಆರೋಗ್ಯ ಕೇಂದ್ರ ನೆಲ್ಯಾಡಿಯ ಗೋಳಿತೊಟ್ಟು ಉಪಕೇಂದ್ರದಲ್ಲಿ ಕಳೆದ 9 ವರ್ಷಗಳಿಂದ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಲೀನಾ ಕೆ.ಎಂ. ಅವರು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಯಾಗಿ ಮುಂಬಡ್ತಿ ಹೊಂದಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರ ಶಿರಾಡಿಗೆ ವರ್ಗಾವಣೆಗೊಂಡಿದ್ದಾರೆ.
ಇಬ್ಬರೂ ತಮ್ಮ ಕರ್ತವ್ಯದ ಅವಧಿಯಲ್ಲಿ ಆರೋಗ್ಯ ಇಲಾಖೆಯ ಸೇವೆಯನ್ನು ಸಮರ್ಪಣಾ ಮನೋಭಾವದಿಂದ ನಿರ್ವಹಿಸಿದ್ದು, ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇವರ ಮುಂಬಡ್ತಿ ಹಾಗೂ ವರ್ಗಾವಣೆಗೆ ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿ, ಮುಂದಿನ ವೃತ್ತಿ ಜೀವನ ಸುಖಕರ ಹಾಗೂ ಯಶಸ್ವಿಯಾಗಿರಲಿ ಎಂದು ಹಾರೈಸಿದ್ದಾರೆ.









































































































