ಹೆದ್ದಾರಿ ತಡೆಗೆ ಮುಂದಾದ ಪ್ರತಿಭಟನಾಕಾರರು; ಪೊಲೀಸರೊಂದಿಗೆ ವಾಗ್ವಾದ — ಒಂದು ತಿಂಗಳಲ್ಲಿ ಸುರಕ್ಷತಾ ಪರಿಶೀಲನೆ ನಡೆಸಿ ಕ್ರಮದ ಭರವಸೆ
ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆ ಹಾಗೂ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯ ನಡುವೆ ಯು-ಟರ್ನ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಬುಧವಾರ ನೆಲ್ಯಾಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ನೆಲ್ಯಾಡಿ ವ್ಯಾಪ್ತಿಯ 51ಕ್ಕೂ ಅಧಿಕ ಸಂಘ-ಸಂಸ್ಥೆಗಳು, ವರ್ತಕರು ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ಸೂಚಿಸುವುದರೊಂದಿಗೆ ಪ್ರತಿಭಟನೆಯಲ್ಲಿ ನೂರಾರು ಮಂದಿ ಪಾಲ್ಗೊಂಡು ಯು-ಟರ್ನ್ ಕಲ್ಪಿಸಲೇಬೇಕೆಂದು ಒತ್ತಾಯಿಸಿದರು.
ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಯು-ಟರ್ನ್ಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಹಾಗೂ ಸಾರ್ವಜನಿಕರು ಮಾತನಾಡಿ, ನೆಲ್ಯಾಡಿಯ ಈ ಭಾಗದಲ್ಲಿ ಯು-ಟರ್ನ್ ವ್ಯವಸ್ಥೆ ಕಲ್ಪಿಸುವುದು ಸ್ಥಳೀಯರ ಅನುಕೂಲಕ್ಕಾಗಿ ಮಾತ್ರವಲ್ಲದೆ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು, ಸಾರ್ವಜನಿಕರು ಹಾಗೂ ವಾಹನ ಸವಾರರ ಸುರಕ್ಷತೆ ಮತ್ತು ಸಂಚಾರ ವ್ಯವಸ್ಥೆಯ ದೃಷ್ಟಿಯಿಂದಲೂ ಅತ್ಯಗತ್ಯ ಎಂದು ಪ್ರತಿಪಾದಿಸಿದರು.
ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚ್ ಧರ್ಮಗುರು ಫಾ.ಶಾಜಿ ಮ್ಯಾಥ್ಯು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಪಿ.ಪಿ.ವರ್ಗೀಸ್ ಹಾಗೂ ಸರ್ವೋತ್ತಮ ಗೌಡ, ನ್ಯಾಯವಾದಿ ಇಸ್ಮಾಯಿಲ್ ನೆಲ್ಯಾಡಿ, ನೆಲ್ಯಾಡಿ ಪ್ರಾ.ಕೃ.ಪತ್ತಿ.ಸ.ಸಂ.ಉಪಾಧ್ಯಕ್ಷ ರವಿಚಂದ್ರ ಹೊಸವಕ್ಲು, ರಿಕ್ಷಾ ಚಾಲಕ-ಮಾಲಕರ ಸಂಘದ ಮಾಜಿ ಅಧ್ಯಕ್ಷ ರವಿಪ್ರಸಾದ್ ಗುತ್ತಿನಮನೆ, ನೆಲ್ಯಾಡಿ–ಕೌಕ್ರಾಡಿ ವರ್ತಕ ಸಂಘದ ಅಧ್ಯಕ್ಷ ಸತೀಶ್ ಕೆ.ಎಸ್. ದುರ್ಗಾಶ್ರೀ, ಕೆ.ಇ. ಅಬೂಬಕ್ಕರ್ ಹೊಸಮಜಲು, ಉದ್ಯಮಿ ಶಾಜಿ ವರ್ಗೀಸ್, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್, ಕೌಕ್ರಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಕೆ.ಇಬ್ರಾಹಿಂ, ಕಿರಣ್ ಮಹಿಳಾ ಒಕ್ಕೂಟದ ರಾಜ್ಯಾಧ್ಯಕ್ಷೆ ಮಂಜುಳಾ, ಕಡಬ ತಾಲೂಕು ಮಹಿಳಾ ಒಕ್ಕೂಟದ ಅಧ್ಯಕ್ಷೆ ಉಷಾ ಜೋಯಿ, ಕಡಬ ತಾಲೂಕು ಮಾಜಿ ಸೈನಿಕರ ಸಂಘದ ಅಧ್ಯಕ್ಷ ಸೆಬಾಸ್ಟಿಯನ್ ಸೇರಿದಂತೆ ಹಲವರು ಮಾತನಾಡಿದರು.
ಹೆದ್ದಾರಿ ತಡೆಗೆ ಮುಂದಾದ ಪ್ರತಿಭಟನಾಕಾರರು ಪ್ರತಿಭಟನೆ ವೇಳೆ ಒಂದು ಹಂತದಲ್ಲಿ ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿಗೆ ತೆರಳಿ ರಸ್ತೆ ತಡೆ ನಡೆಸಲು ಮುಂದಾದರು. ಆದರೆ ಪೊಲೀಸರು ಹೆದ್ದಾರಿ ತಡೆಗೆ ಅವಕಾಶ ನೀಡಲಿಲ್ಲ. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಕೆಲಕಾಲ ವಾಗ್ವಾದ ನಡೆಯಿತು. ಗಾಂಧಿ ಮೈದಾನದಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡಲಾಗಿದ್ದು, ಅಲ್ಲಿಯೇ ಪ್ರತಿಭಟನೆ ಮುಂದುವರಿಸುವಂತೆ ಯೋಜನಾ ನಿರ್ದೇಶಕರು ಗಾಂಧಿ ಮೈದಾನಕ್ಕೆ ಆಗಮಿಸಿ ಪ್ರತಿಭಟನಾಕಾರರ ಮನವಿ ಸ್ವೀಕರಿಸಲಿದ್ದಾರೆ ಎಂದು ಪೊಲೀಸರು ಹೋರಾಟ ಸಮಿತಿ ಪದಾಧಿಕಾರಿಗಳಿಗೆ ಸೂಚಿಸಿದರು.ಇದಾದ ಬಳಿಕ ಪ್ರತಿಭಟನಾಕಾರರು ಗಾಂಧಿ ಮೈದಾನಕ್ಕೆ ತೆರಳಿದರು.
ಯು-ಟರ್ನ್ ಸಾಧ್ಯವಿಲ್ಲ ಎಂದ ಯೋಜನಾ ನಿರ್ದೇಶಕರು ಗಾಂಧಿ ಮೈದಾನದಲ್ಲಿ ನಡೆದ ಪ್ರತಿಭಟನೆಯ ಸ್ಥಳಕ್ಕೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ವಿಭಾಗದ ಯೋಜನಾ ನಿರ್ದೇಶಕ ಅಬ್ದುಲ್ಲಾ ಜಾವೇದ್ ಅಜ್ಮಿ ಆಗಮಿಸಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ ಈ ಪ್ರದೇಶದಲ್ಲಿ ಯು-ಟರ್ನ್ ಕಲ್ಪಿಸುವುದು ಸುರಕ್ಷತೆಯ ದೃಷ್ಟಿಯಿಂದ ಸಾಧ್ಯವಿಲ್ಲ. ಇಲ್ಲಿ ಯು-ಟರ್ನ್ ನೀಡಿದರೆ ಅಪಘಾತ ವಲಯ ನಿರ್ಮಾಣವಾಗುವ ಸಾಧ್ಯತೆ ಇದೆ. ಆದ್ದರಿಂದ ವಾಹನಗಳ ಸುಗಮ ಸಂಚಾರಕ್ಕಾಗಿ ಸರ್ವಿಸ್ ರಸ್ತೆ ಹಾಗೂ ಸಾರ್ವಜನಿಕರು ರಸ್ತೆ ದಾಟಲು ಸ್ಕೈವಾಕ್ ವ್ಯವಸ್ಥೆ ಕಲ್ಪಿಸುವ ಬಗ್ಗೆ ಅವರು ತಿಳಿಸಿದರು. ಆದರೆ ಇದರಿಂದ ತೃಪ್ತರಾಗದ ಪ್ರತಿಭಟನಾಕಾರರು ಯು-ಟರ್ನ್ ಕಲ್ಪಿಸುವ ಕುರಿತು ಸ್ಪಷ್ಟ ಭರವಸೆ ನೀಡುವಂತೆ ಪಟ್ಟು ಹಿಡಿದರು.
ಈ ಭಾಗದ ಸಂಚಾರದ ಪ್ರಮಾಣ, ಶಿಕ್ಷಣ ಸಂಸ್ಥೆಗಳ ಸಂಖ್ಯೆ, ಸಾರ್ವಜನಿಕರ ಓಡಾಟ ಹಾಗೂ ಸ್ಥಳೀಯ ಸಂಪರ್ಕ ವ್ಯವಸ್ಥೆಯನ್ನು ಪರಿಗಣಿಸಿ ತಾಂತ್ರಿಕವಾಗಿ ಸಾಧ್ಯವಿರುವ ರೀತಿಯಲ್ಲಿ ಯು-ಟರ್ನ್ ವ್ಯವಸ್ಥೆ ಕಲ್ಪಿಸಬೇಕು. ಸಾರ್ವಜನಿಕರ ಬೇಡಿಕೆಯನ್ನು ಕೇವಲ ತಾಂತ್ರಿಕ ಕಾರಣ ಮುಂದಿಟ್ಟು ತಿರಸ್ಕರಿಸದೆ ಸುರಕ್ಷಿತ ಪರ್ಯಾಯ ವ್ಯವಸ್ಥೆಯೊಂದಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಹೋರಾಟ ಸಮಿತಿ ಅಧ್ಯಕ್ಷ ಡಾ.ವರ್ಗೀಸ್ ಕೈಪನಡ್ಕ ಆಗ್ರಹಿಸಿದರು.
ಕೊನೆಗೆ ಹೆದ್ದಾರಿ ಸುರಕ್ಷತಾ ಎಂಜಿನಿಯರ್ಗಳ ತಂಡದಿಂದ ಸ್ಥಳ ಪರಿಶೀಲನೆ ನಡೆಸಿ, ಅವರು ನೀಡುವ ತಾಂತ್ರಿಕ ನಿರ್ದೇಶನದ ಆಧಾರದ ಮೇಲೆ ಒಂದು ತಿಂಗಳೊಳಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಯೋಜನಾ ನಿರ್ದೇಶಕರು ಭರವಸೆ ನೀಡಿದರು. ಈ ಭರವಸೆಯ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಪ್ರತಿಭಟನೆಯನ್ನು ಹಿಂಪಡೆದರು.
ಹಲವು ಪ್ರಮುಖರ ಉಪಸ್ಥಿತಿ ಕಡಬ ತಾಲೂಕಿನ ತಹಶೀಲ್ದಾರ್ ಗಣೇಶ್ ಸವಣೂರ್, ನೆಲ್ಯಾಡಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಹೋರಾಟ ಸಮಿತಿ ಸಂಚಾಲಕ ಮೊಹಮ್ಮದ್ ಇಕ್ಬಾಲ್, ಪ್ರಾ.ಕೃ.ಪ.ಸ.ಸಂ.ಅಧ್ಯಕ್ಷ ಬಾಲಕೃಷ್ಣ ಬಾಣಜಾಲು, ಕೌಕ್ರಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಉದಯ ಕುಮಾರ್, ನೆಲ್ಯಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಲಾಂ ಬಿಲಾಲ್, ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚನ್, ಸಂತ ಜಾರ್ಜ್ ವಿದ್ಯಾಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್, ಹೋರಾಟ ಸಮಿತಿ ಕಾರ್ಯದರ್ಶಿಯಾಗಿ ರಫೀಕ್, ಕೆ ಪಿ.ತೋಮಸ್ ಮತ್ತಿತರರು ಉಪಸ್ಥಿತರಿದ್ದರು.
ನೆಲ್ಯಾಡಿ ಜೆಸಿ ಅಧ್ಯಕ್ಷೆ ಪ್ರವೀಣಿ ಶೆಟ್ಟಿ, ಜೊತೆ ಕಾರ್ಯದರ್ಶಿ ಸುಪ್ರೀತಾ ರವಿಚಂದ್ರ, ನೆಲ್ಯಾಡಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಜಬ್ಬಾರ್, ಮಾಜಿ ಸದಸ್ಯ ರವಿಪ್ರಸಾದ್ ಶೆಟ್ಟಿ, ಸುಂದರ ಗೌಡ ಅತ್ರಿಜಾಲು, ಪ್ರಮೋದ್ ಮೈಕಲ್, ಎಂ ಎಸ್ ಥಾಮಸ್, ಪೌಲ್ ಡಿ ಸೋಜ, ಪೂವಪ್ಪ ಕರ್ಕೇರ, ನೋಮಿಸ್ ಕುರಿಯಾಕೋಸ್, ಎಲಿಯಾಸ್ ಎಂ.ಕೆ., ಫಾ. ಹನಿಜೇಕಬ್, ಗಂಗಾಧರ ಶೆಟ್ಟಿ ಹೊಸಮನೆ, ಎಂ. ಅಬ್ದುಲ್ಲಾ ಮೊರಂಕಳ, ಸಜಿ ಥೋಮಸ್, ಫಾ. ಜಿಜನ್, ಜಾನ್ ಪಿ.ಎಸ್., ಪ್ರಕಾಶ್ ಕೆ.ವೈ., ಮನೋಜ್ ಇಂಜಿನಿಯರ್, ರವಿಚಂದ್ರ ಅತ್ರಿಜಾಲು, ಜೋಸ್ ಮಾತಾ, ಗಣೇಶ್ ಪೂಜಾರಿ ಪೊಸೋಳಿಕೆ, ಇಸ್ಮಾಯಿಲ್ ಆಶಿಕ್ ಹೊಸಮಜಲು, ಜುನೈ ಜಾರ್ಜ್, ಸಿದ್ದೀಕ್ ಮಣ್ಣಗುಂಡಿ, ರಫೀಕ್ ಬೈಲು, ಸಿದ್ದೀಕ್ ಹೊಸಮಜಲು, ಮಹಮ್ಮದ್ ಹನೀಫ್ ಕರಾವಳಿ, ಸೈಜು, ಖಲೀಲ್ ಇಬ್ರಾಹಿಂ ಹೊಸಮಜಲು, ಕೆ.ಇ. ಅಬೂಬಕ್ಕರ್, ಸುದರ್ಶನ್, ಶಿವಣ್ಣ ಪಿ. ಹೆಗ್ಡೆ, ನಾಝಿಂ ಸಾಹೇಬ್, ಪ್ರಶಾಂತ್ ಚಾಕೋ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಬಿಗಿ ಪೊಲೀಸ್ ಬಂದೋಬಸ್ತ್ ಪ್ರತಿಭಟನೆಯ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಡಿವೈಎಸ್ಪಿ ಸಿ.ಕೆ. ರೋಹಿಣಿ ಅವರ ನೇತೃತ್ವದಲ್ಲಿ ಇನ್ಸ್ಪೆಕ್ಟರ್ಗಳಾದ ತಿಮ್ಮಪ್ಪ ನಾಯ್ಕ್ ಹಾಗೂ ಸುನಿಲ್ ಕುಮಾರ್, ಸಬ್ ಇನ್ಸ್ಪೆಕ್ಟರ್ಗಳಾದ ಸುಸುತೇಶ್, ಜಂಬೂರಾಜ್ ಮಹಾಜನ್, ಸುಷ್ಮಾ ಭಂಡಾರಿ, ಕೌಶಿಕ್, ಸಿ.ಟಿ. ಸುರೇಶ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಕರ್ತವ್ಯ ನಿರ್ವಹಿಸಿದರು. ಜಿಲ್ಲಾ ಸಶಸ್ತ್ರ ಮೀಸಲು ಪಡೆಯ 4 ತಂಡಗಳು, 1 ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ತಂಡ, ಸ್ಟ್ರೈಕ್ ಪ್ರೊಟೆಕ್ಷನ್ ಫೋರ್ಸ್ ತಂಡ ಹಾಗೂ ಪುತ್ತೂರು ಮತ್ತು ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ ಪೊಲೀಸರು ಬಂದೋಬಸ್ತ್ನಲ್ಲಿ ಪಾಲ್ಗೊಂಡಿದ್ದರು.
2–3 ಕಿ.ಮೀ. ಸುತ್ತು ಪ್ರಯಾಣದ ಅನಿವಾರ್ಯತೆ ನೆಲ್ಯಾಡಿಯ ಈ ಭಾಗವು ಸುತ್ತಮುತ್ತಲಿನ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಪ್ರದೇಶವಾಗಿದೆ. ರಾಜ್ಯ ಹೆದ್ದಾರಿಗೆ ಸಂಪರ್ಕಿಸುವ ಪ್ರಮುಖ ಮಾರ್ಗವೂ ಇಲ್ಲಿದ್ದು, ಹಲವು ಶಿಕ್ಷಣ ಸಂಸ್ಥೆಗಳು, ಧಾರ್ಮಿಕ ಕೇಂದ್ರಗಳು, ವ್ಯಾಪಾರ ಸಂಸ್ಥೆಗಳು ಹಾಗೂ ಸಾರ್ವಜನಿಕ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿನಿತ್ಯ ನೂರಾರು ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು, ಸಾರ್ವಜನಿಕರು ಹಾಗೂ ವಾಹನ ಸವಾರರು ಈ ಮಾರ್ಗವನ್ನು ಬಳಸುತ್ತಿದ್ದಾರೆ. ಇಲ್ಲಿ ಯು-ಟರ್ನ್ ವ್ಯವಸ್ಥೆ ಇಲ್ಲದಿದ್ದರೆ ಒಂದು ಬದಿಯಿಂದ ಮತ್ತೊಂದು ಬದಿಗೆ ತೆರಳಲು ವಾಹನ ಸವಾರರು ಸುಮಾರು 2ರಿಂದ 3 ಕಿ.ಮೀ. ಸುತ್ತು ಬಳಸಿ ಪ್ರಯಾಣಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ. ಇದರಿಂದ ಸಮಯ ಹಾಗೂ ಇಂಧನ ವ್ಯರ್ಥವಾಗುವುದರ ಜೊತೆಗೆ ಸ್ಥಳೀಯರ ದೈನಂದಿನ ಸಂಚಾರಕ್ಕೂ ತೊಂದರೆಯಾಗಲಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಹೆದ್ದಾರಿ ತಡೆಗೆ ಮುಂದಾದ ಪ್ರತಿಭಟನಾಕಾರರು; ಪೊಲೀಸರೊಂದಿಗೆ ವಾಗ್ವಾದ — ಒಂದು ತಿಂಗಳಲ್ಲಿ ಸುರಕ್ಷತಾ ಪರಿಶೀಲನೆ ನಡೆಸಿ ಕ್ರಮದ ಭರವಸೆ ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನೆಲ್ಯಾಡಿ ...
ಕೊಕ್ಕಡ: ಕರಾವಳಿ ಕೊಂಕಣಿ ಕ್ರೈಸ್ತ ಸಮುದಾಯದ ಪ್ರಮುಖ ಧಾರ್ಮಿಕ ಹಬ್ಬಗಳಲ್ಲಿ ಒಂದಾದ ಮೊಂತಿ ಫೆಸ್ತ್ (ತೆನೆ ಹಬ್ಬ)ವನ್ನು ಸೆ. 8ರಂದು ಕೊಕ್ಕಡ ಸಂತ ಜೋನರ ದೇವಾಲಯದಲ್ಲಿ ಸಾಂಪ್ರದಾಯಿಕ ...
ನೆಲ್ಯಾಡಿ: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯಕ್ಕೆ ಸಂಬಂಧಿಸಿದ 7ನೇ ಕರಡು ಅಧಿಸೂಚನೆಯನ್ನು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಂಪೂರ್ಣವಾಗಿ ಕೈಬಿಡಬೇಕು ಎಂದು ಆಗ್ರಹಿಸಿ ಕೌಕ್ರಾಡಿ ಹಾಗೂ ...
ನೆಲ್ಯಾಡಿ: ಪುತ್ತೂರು ಶಿಶು ಅಭಿವೃದ್ಧಿ ಯೋಜನೆಯ ನೆಲ್ಯಾಡಿ ವಲಯದ ಬೀಡುಬೈಲು ಅಂಗನವಾಡಿ ಕೇಂದ್ರದಲ್ಲಿ ಸುಮಾರು 36 ವರ್ಷಗಳ ಕಾಲ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ಶಾಲಿನಿ ಹಾಗೂ ...
ನೆಲ್ಯಾಡಿ: ಮಲೆನಾಡು ಜನಹಿತ ರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಇದರ ಆಶ್ರಯದಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ ಮಂಗಳವಾರದಂದು ಗೋಳಿತ್ತೋಟ್ಟು ಗ್ರಾಮ ಪಂಚಾಯತ್ ...
ನೆಲ್ಯಾಡಿ: ಪ್ರಾಥಮಿಕ ಆರೋಗ್ಯ ಕೇಂದ್ರ ನೆಲ್ಯಾಡಿಯಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ ಇಬ್ಬರು ಆರೋಗ್ಯ ಇಲಾಖೆಯ ಸಿಬ್ಬಂದಿ ಮುಂಬಡ್ತಿ ಹೊಂದಿ ಬೇರೆಡೆಗೆ ವರ್ಗಾವಣೆಗೊಂಡಿದ್ದಾರೆ. ಪ್ರಾಥಮಿಕ ಆರೋಗ್ಯ ...
51ಕ್ಕೂ ಅಧಿಕ ಸಂಘ-ಸಂಸ್ಥೆಗಳ ಬೆಂಬಲ; ಜಿಲ್ಲಾಧಿಕಾರಿ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೆ ಪ್ರತಿಭಟನೆ ಮುಂದುವರಿಸುವ ಎಚ್ಚರಿಕೆ ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಅಡ್ಡಹೊಳೆ–ಬಿ.ಸಿ.ರೋಡ್ ನಡುವಿನ ...
ಉಪ್ಪಿನಂಗಡಿ: ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಯವರ ಕಚೇರಿಯಲ್ಲಿ ಕಳೆದ ಒಂಬತ್ತು ವರ್ಷಗಳಿಂದ ದ್ವಿತೀಯ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಉಷಾಕಿರಣ. ಬಿ. ಅವರು ಮಂಗಳೂರು ವೃತ್ತ ಅರಣ್ಯ ಕಚೇರಿಗೆ ...
ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕದ ವತಿಯಿಂದ ಜೆಸಿ ಸಪ್ತಾಹದ ಉದ್ಘಾಟನೆ ಹಾಗೂ ನೆಲ್ಯಾಡಿಯ ಆಟೋ ಚಾಲಕರಿಗೆ ಸ್ಟೀಲ್ ಬಾಟಲ್ ವಿತರಿಸುವ ಕಾರ್ಯಕ್ರಮ ಭಾನುವಾರದಂದು ನೆಲ್ಯಾಡಿಯ ಗೌರಿಜಾಲ್ ಆರ್ಕೇಡ್ನಲ್ಲಿ ...
ನೆಲ್ಯಾಡಿ: ಶೌರ್ಯ ವಿಪತ್ತು ನಿರ್ವಹಣಾ ತಂಡ ಉಪ್ಪಿನಂಗಡಿ ಬಜತ್ತೂರು ಘಟಕದ ವತಿಯಿಂದ ಬಜತ್ತೂರು ಗ್ರಾಮದ ಮಣ್ಣಿಮೇರು ಎಂಬಲ್ಲಿ ಏಕಾಂಗಿಯಾಗಿ ವಾಸ್ತವ್ಯವಿದ್ದ ಬಡ ಮಹಿಳೆ ಜಾನಕಿ ಎಂಬವರಿಗೆ ನಿರ್ಮಿಸಲಾದ ...
ತಾಲೂಕು ಮಟ್ಟದ ಪಂದ್ಯಾಟದಲ್ಲಿ ಬಾಲಕ–ಬಾಲಕಿಯರ ತಂಡಕ್ಕೆ ಪ್ರಥಮ ಸ್ಥಾನ; ಪ್ರಾಥಮಿಕ ಶಾಲೆಯ ಬಾಲಕಿಯರಿಗೆ ದ್ವಿತೀಯ ಸ್ಥಾನ ನೆಲ್ಯಾಡಿ: ಶಾಲಾ ಶಿಕ್ಷಣ ಇಲಾಖೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ...
‘ಸಂಕಲ್ಪ @ 75’ ಕಾರ್ಯಕ್ರಮಕ್ಕೆ ಚಾಲನೆ; ಪೂರ್ವ ವಿದ್ಯಾರ್ಥಿಗಳ ಸಮಾಗಮ, ನಿವೃತ್ತ ಶಿಕ್ಷಕರಿಗೆ ಗುರುವಂದನೆ ನೆಲ್ಯಾಡಿ: ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ನ 75ನೇ ವರ್ಷದ ಸಂಭ್ರಮಾಚರಣೆ ಹಾಗೂ ...
ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮ ನೆಲ್ಯಾಡಿ: ಗುರುಗಳನ್ನು ದೇವರ ಸ್ಥಾನದಲ್ಲಿ ಇಟ್ಟು ಗೌರವಿಸಿ ಆರಾಧಿಸಬೇಕು. ಕತ್ತಲೆಯಿಂದ ಬೆಳಕಿನ ಕಡೆಗೆ ಕೊಂಡೊಯ್ಯುವವರೇ ...
23 ವರ್ಷಗಳ ಶೈಕ್ಷಣಿಕ ಸೇವೆ, ಬಡ ವಿದ್ಯಾರ್ಥಿಗಳಿಗೆ ನೆರವು, ಶಾಲಾ ಅಭಿವೃದ್ಧಿಯಲ್ಲಿ ಮಹತ್ವದ ಕೊಡುಗೆ ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನೆಲ್ಯಾಡಿಯ ಸಂತ ಜಾರ್ಜ್ ...
ಕೃತ್ಯಕ್ಕೆ ಬಳಸುತ್ತಿದ್ದ ವಾಹನ ಹಾಗೂ ಪರಿಕರಗಳು ಪೊಲೀಸರ ವಶಕ್ಕೆ ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಲಂಪಾಡಿ ಕ್ರಾಸ್ ಸಮೀಪ ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳವು ...
ನೆಲ್ಯಾಡಿ: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘವು 24ನೇ ವರ್ಷವನ್ನು ಯಶಸ್ವಿಯಾಗಿ ಪೂರೈಸಿ 25ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಹಿನ್ನೆಲೆಯಲ್ಲಿ ನೆಲ್ಯಾಡಿ ಶಾಖೆಯಲ್ಲಿ ಬುಧವಾರ ಸ್ಥಾಪನ ದಿನಾಚರಣೆಯನ್ನು ...
ಕೊಕ್ಕಡ: ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶ್ರೀ ಶಿಶಿಲೇಶ್ವರ ದೇವರ ಸನ್ನಿಧಾನದಲ್ಲಿ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಶ್ರೀ ಶಿಶಿಲೇಶ್ವರ ದೇವರಿಗೆ ವಿಶೇಷ ...
ಮಂಗಳೂರು: ಶಾಲಾ ಮಕ್ಕಳನ್ನು ಸುರಕ್ಷಿತವಾಗಿ ಕರೆದೊಯ್ಯುವ ನಿಟ್ಟಿನಲ್ಲಿ ಕಾನೂನು ನಿಯಮಗಳು ಹಾಗೂ ಸಂಚಾರ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಶಾಲಾ ಬಸ್ ಚಾಲಕರು, ನಿರ್ವಾಹಕರು, ಮಾಲೀಕರು ಹಾಗೂ ...
ಕೊಕ್ಕಡ: ಆನೆಗಳ ಹಾವಳಿಯಿಂದ ಸಾರ್ವಜನಿಕರು, ಕೃಷಿಕರು ಹಾಗೂ ಅವರ ಕೃಷಿ ಮತ್ತು ಆಸ್ತಿಪಾಸ್ತಿಗಳಿಗೆ ಹಾನಿಯಾಗದಂತೆ, ಆನೆ ಹಾವಳಿ ನಿಯಂತ್ರಣಕ್ಕೆ ಬಂದು ಜನರು ನೆಮ್ಮದಿಯಿಂದ ಬದುಕುವಂತಾಗಲಿ ಎಂದು ಪ್ರಾರ್ಥಿಸಿ ...
ಧರ್ಮಸ್ಥಳ ಭಜನಾ ಕಮ್ಮಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರಾರ್ಥಿಗಳು ಭಾಗವಹಿಸಲು ಕರೆ ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಿ.ಸಿ. ಟ್ರಸ್ಟ್, ಕಡಬ ತಾಲೂಕು ಭಜನಾ ...
ನೆಲ್ಯಾಡಿ: ನೆಲ್ಯಾಡಿ, ಶಿರಾಡಿ ಹಾಗೂ ಮರ್ದಾಳ ಗ್ರಾಮ ಪಂಚಾಯಿತಿಗಳಿಗೆ ಮಂಗಳವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಿವಿಧ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಗ್ರಾಮ ಪಂಚಾಯಿತಿಗಳ ಕಚೇರಿಗಳಿಗೆ ಭೇಟಿ ...
ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಅಶ್ವಿನಿ ಆಸ್ಪತ್ರೆ ನೆಲ್ಯಾಡಿ, ಶ್ರೀನಿವಾಸ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಮುಕ್ಕ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ನೆಲ್ಯಾಡಿ ...
ನೆಲ್ಯಾಡಿ: ಪ್ರತಿಯೊಬ್ಬರ ಜೀವನದಲ್ಲಿಯೂ ಹೊಸ ಕನಸುಗಳು, ಹೊಸ ಭರವಸೆಗಳು ಹಾಗೂ ಹೊಸ ಆಲೋಚನೆಗಳು ಇರುತ್ತವೆ. ಸಂಸ್ಥೆಗೆ ನೂತನವಾಗಿ ಆಗಮಿಸಿರುವ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಹೊಸ ಕನಸು, ಹೊಸ ಯೋಜನೆ, ...
ನೆಲ್ಯಾಡಿ: ಶ್ರೀ ರಾಮ ವಿದ್ಯಾಲಯ, ನೆಲ್ಯಾಡಿಯಲ್ಲಿ ನಡೆದ ಅಂಡರ್–14 ಉಪ್ಪಿನಂಗಡಿ ವಲಯ ಮಟ್ಟದ ಖೋ-ಖೋ ಸ್ಪರ್ಧೆಯಲ್ಲಿ ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ನೆಲ್ಯಾಡಿಯ ಬಾಲಕ ಹಾಗೂ ...
ನೆಲ್ಯಾಡಿ: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ನೆಲ್ಯಾಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಕಡಬ ತಾಲೂಕು ವ್ಯಾಪ್ತಿಯ ನೆಲ್ಯಾಡಿ ಶೌರ್ಯ ...
₹45 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಂಗಮಂಟಪಕ್ಕೆ ನಳಿನ್ ಕುಮಾರ್ ಕಟೀಲ್ ಚಾಲನೆ ನೆಲ್ಯಾಡಿ: ಶ್ರೀ ಶಬರೀಶ ಬಯಲು ರಂಗಮಂಟಪಕ್ಕೆ ಶಿಲಾನ್ಯಾಸ ನೆಲ್ಯಾಡಿ: ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ...
ಗಾಂಧಿ ಮೈದಾನದ ಬಳಿ ಯು-ಟರ್ನ್ ಕಲ್ಪಿಸುವಂತೆ ಆಗ್ರಹ; ನೂರಕ್ಕೂ ಅಧಿಕ ಮಂದಿ ಸಭೆಯಲ್ಲಿ ಮಹತ್ವದ ನಿರ್ಧಾರ ಸೆ.9ರಂದು ನೆಲ್ಯಾಡಿಯಲ್ಲಿ ಯು-ಟರ್ನ್ಗಾಗಿ ಬೃಹತ್ ಪ್ರತಿಭಟನೆ ನೂರಕ್ಕೂ ಅಧಿಕ ಮಂದಿ ...
ಕೊಕ್ಕಡ: ಇಲ್ಲಿನ ಪ್ರಸಿದ್ಧ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ನೂತನ ಗರ್ಭಗುಡಿಗಳ ಶಿಲಾನ್ಯಾಸ ಕಾರ್ಯಕ್ರಮವು ಗುರುವಾರ ಧಾರ್ಮಿಕ ವಿಧಿವಿಧಾನಗಳೊಂದಿಗೆ ...
ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆಸಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಆರೋಪದ ಹಿನ್ನೆಲೆಯಲ್ಲಿ, ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರಿಗೆ ಟಾಟಾ ಸುಮೊದಿಂದ ಡಿಕ್ಕಿ ಹೊಡೆದ ಪ್ರಕರಣಕ್ಕೆ ...
ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಎಂಬಲ್ಲಿ ಕಾರೊಂದು ಹೆದ್ದಾರಿ ಮಧ್ಯದಲ್ಲಿ ತಾತ್ಕಾಲಿಕವಾಗಿ ಅಳವಡಿಸಲಾಗಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಭಾನುವಾರ ...
ಇಚ್ಲಂಪಾಡಿ: ಕ್ರಿಶ್ಚಿಯನ್ ಬ್ರದರ್ಸ್ ಟ್ರಸ್ಟ್ ಇದರ ವತಿಯಿಂದ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಸಹಯೋಗದಲ್ಲಿ ಭಾನುವಾರದಂದು ಇಚ್ಲಂಪಾಡಿಯ ಸಂತ ಜಾರ್ಜ್ ಅರ್ಥೋಡೊಕ್ಸ್ ಸಿರಿಯನ್ ಚರ್ಚ್ ಸಭಾಂಗಣದಲ್ಲಿ ...
ಪುತ್ತೂರು: ಆನಡ್ಕ ಕಡೆಯಿಂದ ಪಡೀಲ್ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಪಿಕ್ಅಪ್ ವಾಹನವನ್ನು ಪುತ್ತೂರು ನಗರ ಠಾಣಾ ಪೊಲೀಸರು ಜಿಡೆಕಲ್ಲು ಬಳಿ ತಡೆದು, ಮೂರು ಜಾನುವಾರುಗಳನ್ನು ...
ಇಚ್ಲಂಪಾಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನೇರ್ಲ–ಇಚ್ಲಂಪಾಡಿಯ ಶಾಲಾ ಆವರಣದ ಭದ್ರತೆ ಹಾಗೂ ಮೂಲಸೌಕರ್ಯವನ್ನು ಗಮನದಲ್ಲಿಟ್ಟುಕೊಂಡು ಹಳೆ ವಿದ್ಯಾರ್ಥಿನಿ ಕುಮಾರಿ ಆದಿರಾ ಉದಯಕುಮಾರ್ ...
ನೆಲ್ಯಾಡಿ: ನೆಲ್ಯಾಡಿ ಹಾಗೂ ಸುತ್ತಮುತ್ತ ಬೈಕ್ ಕಳ್ಳತನ ಪ್ರಕರಣಗಳು ಮತ್ತೆ ಮುಂದುವರಿದಿರುವ ಶಂಕೆ ವ್ಯಕ್ತವಾಗಿದ್ದು, ಹೊಸಮಜಲು ಸಮೀಪದ ಗ್ಯಾರೇಜ್ನಲ್ಲಿ ಲಾಕ್ ಮಾಡಿ ನಿಲ್ಲಿಸಿದ್ದ ಪಲ್ಸರ್ ...
ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಮಳೆಗಾಲದಲ್ಲಿ ಆಗಮಿಸುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಬ್ಯಾಂಕ್ ಆಫ್ ಬರೋಡಾ ವತಿಯಿಂದ ₹5 ಲಕ್ಷ ವೆಚ್ಚದಲ್ಲಿ ನಿರ್ಮಿಸಿಕೊಡಲಾದ ರೂಫಿಂಗ್ ...
ಅರಸಿನಮಕ್ಕಿ: ಚೈತನ್ಯ ಮಿತ್ರ ಕಲಾವೃಂದ, ಅರಸಿನಮಕ್ಕಿ ಇದರ ಆಶ್ರಯದಲ್ಲಿ 23ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣಜನ್ಮಾಷ್ಟಮಿ ಉತ್ಸವವು ಸೆ.5ರಂದು ನಡೆಯಲಿದೆ. ಉತ್ಸವದ ಅಂಗವಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ...
ಗುಂಡ್ಯ: ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮಣಿಭಾಂಡ ಬಳಿ ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಏಕಾಏಕಿ ಮರವೊಂದು ಸ್ಕೂಟಿ ಮೇಲೆ ಉರುಳಿಬಿದ್ದ ಪರಿಣಾಮ ಸಹಪ್ರಯಾಣಿಕ ಗಂಭೀರವಾಗಿ ಗಾಯಗೊಂಡ ...
ನೆಲ್ಯಾಡಿ: ಕ್ರಿಶ್ಚಿಯನ್ ಬ್ರದರ್ಸ್ ಟ್ರಸ್ಟ್, ಇಚಿಲಂಪಾಡಿ ಇದರ ವತಿಯಿಂದ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಸಹಯೋಗದಲ್ಲಿ ಆ.23ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಇಚಿಲಂಪಾಡಿಯ ಸಂತ ...
ಕೊಕ್ಕಡ: ಗ್ರಾಮ ಪಂಚಾಯಿತಿನ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಆ.20ರಂದು ಕೊಕ್ಕಡ ಅಂಬೇಡ್ಕರ್ ಭವನದಲ್ಲಿ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಪಿಡಬ್ಲ್ಯುಡಿ ಇಲಾಖೆಯ ಸೂರಜ್ ...
ಕೊಕ್ಕಡ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ರೆಖ್ಯಾ ಗ್ರಾಮದ ಸರ್ವೆ ನಂಬರ್ 69/1ರ ವ್ಯಾಪ್ತಿಯಲ್ಲಿರುವ ಅರಣ್ಯ ಹಾಗೂ ಕಂದಾಯ ಭೂಮಿಯ ಸಕ್ರಮೀಕರಣ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ, ಹಲವು ವರ್ಷಗಳಿಂದ ...
ನೆಲ್ಯಾಡಿ: ನೆಲ್ಯಾಡಿ ವಲಯ ಬಂಟರ ಸಂಘದ ಮಹಾಸಭೆಯು ನೆಲ್ಯಾಡಿ ಹಾಲು ಉತ್ಪಾದಕರ ಸಂಘದ ಕ್ಷೀರ ಸಂಗಮ ಸಭಾಂಗಣದಲ್ಲಿ ನಡೆಯಿತು. ಪ್ರತಾಪ್ ಚಂದ್ರ ರೈ ಕುದ್ಮಾರುಗುತ್ತು ಅವರ ಅಧ್ಯಕ್ಷತೆಯಲ್ಲಿ ...
ನೆಲ್ಯಾಡಿ: ನೆಲ್ಯಾಡಿ ಪೇಟೆ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಬಾಲ ವಿಕಾಸ ಸಮಿತಿಯ ಅಧ್ಯಕ್ಷರ ನೇತೃತ್ವದಲ್ಲಿ ನೆಲ್ಯಾಡಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ...
ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗ ಸನ್ನಿಧಿಯಲ್ಲಿ ನಾಗರಪಂಚಮಿ ಆಚರಣೆಯು ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ನಡೆಯಿತು. ನಾಗರಪಂಚಮಿ ಹಿನ್ನೆಲೆಯಲ್ಲಿ ಸೀಮೆಯ ವಿವಿಧೆಡೆಯಿಂದ ಆಗಮಿಸಿದ ಭಕ್ತರು ಬೆಳಗ್ಗಿನಿಂದಲೇ ...
ನೆಲ್ಯಾಡಿ: ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಿದವು. ನಾಗರಪಂಚಮಿ ಅಂಗವಾಗಿ ನಾಗದೇವರಿಗೆ ವಿಶೇಷ ತಂಬಿಲ, ಕ್ಷೀರಾಭಿಷೇಕ, ಸೀಯಾಳಾಭಿಷೇಕ ಸೇರಿದಂತೆ ...
ನೆಲ್ಯಾಡಿ: ಕೌಕ್ರಾಡಿ ಗ್ರಾಮದ ದೊಂತಿಲ ಕ್ಷೇತ್ರದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು. ದೊಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕರಾದ ...
ಗೋಳಿತೊಟ್ಟು: ಸರಕಾರಿ ಶಾಲೆಯಲ್ಲಿ ಆಟಿ ತಿಂಗಳ ವಿಶೇಷತೆ, ತುಳುನಾಡಿನ ಸಾಂಪ್ರದಾಯಿಕ ಆಚರಣೆ ಹಾಗೂ ಗ್ರಾಮೀಣ ಬದುಕಿನ ಸೊಗಡನ್ನು ಪರಿಚಯಿಸುವ ‘ಆಟಿದೊಂಜಿ ದಿನ’ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮಕ್ಕೆ ...
ನೆಲ್ಯಾಡಿ: ಯುವಜನರಲ್ಲಿ ವ್ಯಕ್ತಿತ್ವ ವಿಕಸನದ ಜೊತೆಗೆ ನಾಯಕತ್ವ ಗುಣಗಳನ್ನು ಬೆಳೆಸುವ ಹಾಗೂ ಸಮಾಜಮುಖಿ ಸೇವಾ ಚಟುವಟಿಕೆಗಳ ಮೂಲಕ ಜನರೊಂದಿಗೆ ಬೆರೆಯುವ ಉದ್ದೇಶದಿಂದ ನೆಲ್ಯಾಡಿ ಜೇಸಿಐ ವತಿಯಿಂದ ಆಯೋಜಿಸಲಾದ ...
ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ ಆಗಸ್ಟ್ ತಿಂಗಳ ಸಾಮಾನ್ಯ ಸಭೆಯು ಕೊಕ್ಕಡದ ಎಜುನೆಸ್ಟ್ ಅಕಾಡೆಮಿ ಕೇಂದ್ರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ರಿತೇಶ್ ಎಂ.ಸ್ಟ್ರೆಲ್ಲಾ ...
ನೆಲ್ಯಾಡಿ: ಮರಾಟಿ ಸಮಾಜ ಸೇವಾ ಸಂಘ ನೆಲ್ಯಾಡಿ–ಕೌಕ್ರಾಡಿ ಇದರ ಆಶ್ರಯದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮವು ಸಂಭ್ರಮದಿಂದ ಯಶಸ್ವಿಯಾಗಿ ನಡೆಯಿತು. ಕೋಡಿಮನೆ ರಾಮಣ್ಣ ನಾಯ್ಕ ಅವರು ದೀಪ ಬೆಳಗಿಸಿ ...
ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಡಬ ತಾಲೂಕು, ನೆಲ್ಯಾಡಿ ವಲಯದ ಕೌಕ್ರಾಡಿ ಕಾರ್ಯಕ್ಷೇತ್ರದ ವತಿಯಿಂದ ದೊಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯ ...
ಧಾರ್ಮಿಕ ಹಾಗೂ ಸಾಂಸ್ಕೃತಿಕ 📅 ಆಗಸ್ಟ್ 16, 2026 ರಾಮಾಯಣ ಪಾರಾಯಣ ಸಮಾಪ್ತಿ ದಿನಾಚರಣೆ: ನೆಲ್ಯಾಡಿ ಕೆ.ಎನ್.ಎಸ್.ಎಸ್. ಕಚೇರಿಯಲ್ಲಿ ಭಕ್ತಿಭಾವದ ಸಂಭ್ರಮ ಶ್ರೀ ಚಂದ್ರಶೇಖರನ್ ನಾಯರ್ ಅವರ ...
ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿನಗರದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕದ ತ್ಯಾಜ್ಯ ವಿಲೇವಾರಿ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ನಡೆಸಲು ಸ್ಥಳೀಯರು ನಿರ್ಧರಿಸಿದ್ದಾರೆ. ಶಾಂತಿನಗರ ...
ಗೊಳಿತ್ತೋಟ್ಟು: ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೊಣಾಲು ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶಾಲಾ ಪರಿಸರವನ್ನು ಸ್ವಚ್ಛ ಹಾಗೂ ಸುಂದರವಾಗಿಡುವ ಉದ್ದೇಶದಿಂದ ನಡೆದ ...
ಅರಸಿನಮಕ್ಕಿ : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ ಮಾಲಕರ ಸಂಘದ ವತಿಯಿಂದ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಅರಸಿನಮಕ್ಕಿ ...
ಕೊಕ್ಕಡ : ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ದರ್ಭೇತಡ್ಕದಲ್ಲಿರುವ ಪರಶುರಾಮ ದೇವಾಲಯದ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಪರಶುರಾಮ ವನದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ದೇವಾಲಯದ ಅರ್ಚಕರಾದ ಅಶೋಕ ...
ನೆಲ್ಯಾಡಿ: ಅಲ್ ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ದೇಶಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಬದ್ರಿಯಾ ಜುಮಾ ಮಸೀದಿ ಖತೀಬರಾದ ಖಲಂದರ್ ...
ಶಿಶಿಲ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ದೇಶಭಕ್ತಿಯ ವಾತಾವರಣದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಧ್ವಜಾರೋಹಣದ ಬಳಿಕ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಹಳೆ ವಿದ್ಯಾರ್ಥಿಗಳ ...
ನೆಲ್ಯಾಡಿ: ಅಶ್ವಿನಿ ಆಸ್ಪತ್ರೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಂತ ಚಾರ್ಜ್ ಪದವಿಪೂರ್ವ ಕಾಲೇಜಿನ ಆಂಗ್ಲ ಮಾಧ್ಯಮ ವಿಭಾಗದ ನಿವೃತ್ತ ಮುಖ್ಯಶಿಕ್ಷಕ ...
ನೆಲ್ಯಾಡಿ: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್ಡಿಟಿಯು) ನೆಲ್ಯಾಡಿ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಎಸ್ಡಿಟಿಯು ನೆಲ್ಯಾಡಿ ಅಧ್ಯಕ್ಷ ನೌಶಾದ್ ದೊಂತಿಲ ಧ್ವಜಾರೋಹಣ ನೆರವೇರಿಸಿದರು.ಗಲ್ಫ್ ನೆಲ್ಯಾಡಿ ...
ನೆಲ್ಯಾಡಿ: ನೆಲ್ಯಾಡಿ–ಕೌಕ್ರಡಿ ಎಸ್ಡಿಪಿಐ ಗ್ರಾಮ ಸಮಿತಿ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್ಡಿಪಿಐ ಗ್ರಾಮ ಸಮಿತಿ ಅಧ್ಯಕ್ಷರಾದ ಸಮದ್ ನೆಲ್ಯಾಡಿ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ...
ಕೊಕ್ಕಡದಲ್ಲಿ ಕೃಷಿಕರ ಸಮಾಲೋಚನಾ ಸಭೆ; ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆಗೆ ಮನವಿ ಕೊಕ್ಕಡ: ಆನೆ ಹಾವಳಿ ಹಾಗೂ ಕಸ್ತೂರಿ ರಂಗನ್ ವರದಿ ಜಾರಿಯಿಂದ ಕೃಷಿಕರಿಗೆ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ...
ನೆಲ್ಯಾಡಿ–ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದಿಂದ ಅದ್ದೂರಿ ಸ್ವಾತಂತ್ರ್ಯೋತ್ಸವ | ಹಿರಿಯರಿಗೆ ಸನ್ಮಾನ ನೆಲ್ಯಾಡಿ: ನೆಲ್ಯಾಡಿ–ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ...
ನೆಲ್ಯಾಡಿ ಸಂತ ಚಾರ್ಜ್ ವಿದ್ಯಾಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ, ಪ್ರತಿಭಾ ಪ್ರದರ್ಶನ, ಠಾಗೋರ್ ಅವರ ಪುಣ್ಯಸ್ಮರಣೆ ನೆಲ್ಯಾಡಿ: ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವುದು ವಿಶೇಷವಾದ ಜವಾಬ್ದಾರಿಯಾಗಿದೆ. ಈ ...
ನೆಲ್ಯಾಡಿ: ಮಹಾತ್ಮಗಾಂಧಿ ನೆಲ್ಯಾಡಿ ಗ್ರಾಮ ಪಂಚಾಯಿತಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಭಾರತಿ ಅವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ...
ಕೊಕ್ಕಡ : ಅರಸಿನಮಕ್ಕಿ ಗ್ರಾಮ ಪಂಚಾಯಿತಿ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಹಾಗೂ ದೇಶಭಕ್ತಿ ಭಾವನೆಯೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು ...
ನೆಲ್ಯಾಡಿ: ನೆಲ್ಯಾಡಿ ಗ್ರಾಮದ ಕೊಲ್ಯೊಟ್ಟು ನಿವಾಸಿ, ಮಾಜಿ ನೆಲ್ಯಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಸಮಾಜ ಸೇವಕ ಜಯಾನಂದ ಬಂಟ್ರಿಯಾಲ್ (54) ಅವರು ಅಲ್ಪಕಾಲದ ಅನಾರೋಗ್ಯದಿಂದ ಶನಿವಾರ ...
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಯೋಜನೆ | ಉಚಿತ ತಪಾಸಣೆ, ಆರೋಗ್ಯ ಸಲಹೆ; ಆಯುರ್ವೇದ ಔಷಧಿಗಳಿಗೆ ಶೇ.10 ರಿಯಾಯಿತಿ ನೆಲ್ಯಾಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಯ ...
ನೆಲ್ಯಾಡಿ : ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕುಕ್ಕೆ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ನೆಲ್ಯಾಡಿ ತಾಲೂಕು ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ...