ವಿಕಲಚೇತನರಿಗೆ ಸವಲತ್ತು ವಿತರಣೆ, ಕ್ರೀಡಾ–ಶೈಕ್ಷಣಿಕ ಸಾಧಕರಿಗೆ ಸನ್ಮಾನ; ‘ಕಾಮಧೇನು ಸಹಕಾರ ಕಿರಣ’ ಕೈಪಿಡಿ ಬಿಡುಗಡೆ
ನೆಲ್ಯಾಡಿ: ನಾಲ್ಕು ವರ್ಷಗಳ ಹಿಂದೆ ನೆಲ್ಯಾಡಿಯಲ್ಲಿ ಆರಂಭಗೊಂಡ ಕಾಮಧೇನು ಮಹಿಳಾ ಸಹಕಾರ ಸಂಘದ 2025–26ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ವಿಕಲಚೇತನರಿಗೆ ವಿಶೇಷ ಸವಲತ್ತು ವಿತರಣೆ, ಕ್ರೀಡಾ ಮತ್ತು ಶೈಕ್ಷಣಿಕ ಸಾಧಕರಿಗೆ ಸನ್ಮಾನ, ‘ಕಾಮಧೇನು ಸಹಕಾರ ಕಿರಣ’ ಕೈಪಿಡಿ ಬಿಡುಗಡೆ ಕಾರ್ಯಕ್ರಮ ಆ.12ರಂದು ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಲ್ಪವೃಕ್ಷ ಸಹಕಾರ ಸೌಧದ ಕಾಮಧೇನು ಸಭಾಂಗಣದಲ್ಲಿ ನಡೆಯಿತು.
ಮಹಾಸಭೆಯ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ‘ವಿಕಲಚೇತನರಿಗೆ ಆಸರೆ’ ವಿಶೇಷ ಕಾರ್ಯಕ್ರಮಕ್ಕೆ ವಿಧಾನಪರಿಷತ್ ಸದಸ್ಯ ಪಿ.ವಿ.ಮೋಹನ್ ಚಾಲನೆ ನೀಡಿದರು. ಮಾತನಾಡಿದ ಅವರು, ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕಾರ್ಯಕ್ರಮ ಇದಾಗಿದೆ. ಇತಿಹಾಸ ಸೃಷ್ಟಿಸುವ ಶಕ್ತಿ ಮಹಿಳೆಯರಲ್ಲಿದ್ದು, ಮಹಿಳೆಯರಿಂದಲೇ ಆರಂಭಗೊಂಡ ಕಾಮಧೇನು ಮಹಿಳಾ ಸಹಕಾರ ಸಂಘ ಬಡವರು ಹಾಗೂ ಅಶಕ್ತರ ಸಂಕಷ್ಟಕ್ಕೆ ಸ್ಪಂದಿಸುತ್ತಿರುವುದು ಶ್ಲಾಘನೀಯ. ವಿಕಲಚೇತನರಿಗೆ ನೀಡುವ ಮಾಸಾಶನ ಹೆಚ್ಚಿಸುವ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ಹೇಳಿದರು.
‘ಕಾಮಧೇನು ಸಹಕಾರ ಕಿರಣ’ ಕೈಪಿಡಿ ಬಿಡುಗಡೆಗೊಳಿಸಿ ಮಾತನಾಡಿದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಉಭಯ ಜಿಲ್ಲೆಗಳಲ್ಲಿ ಅತ್ಯುತ್ತಮ ಸಹಕಾರಿ ಸಂಘವಾಗಿ ಗುರುತಿಸಿಕೊಂಡಿರುವ ಕಾಮಧೇನು ಮಹಿಳಾ ಸಹಕಾರ ಸಂಘಕ್ಕೆ ಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪಡೆದು ಸಹಕಾರ ಕ್ಷೇತ್ರಕ್ಕೆ ಇನ್ನಷ್ಟು ಮೆರುಗು ತರಲಿ ಎಂದು ಹಾರೈಸಿದರು. ನೆಲ್ಯಾಡಿ ಭಾಗದ ಮಹಿಳೆಯರನ್ನು ಒಗ್ಗೂಡಿಸಿ ಉಷಾ ಅಂಚನ್ ಅವರು ಸಂಘವನ್ನು ಸ್ಥಾಪಿಸಿ ಯಶಸ್ವಿಯಾಗಿ ಮುನ್ನಡೆಸುತ್ತಿರುವುದು ಅಭಿನಂದನೀಯ ಎಂದರು.
ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕ ಹಾಗೂ ಬೆಸ್ಟ್ ಫೌಂಡೇಶನ್ ಸ್ಥಾಪಕ ರಕ್ಷಿತ್ ಶಿವರಾಂ ಮಾತನಾಡಿ, ಕಾಮಧೇನು ಮಹಿಳಾ ಸಹಕಾರ ಸಂಘ ಕೇವಲ ವ್ಯವಹಾರಕ್ಕೆ ಸೀಮಿತವಾಗದೆ ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವಿಗೂ ಸ್ಪಂದಿಸುತ್ತಿದೆ. ಸಂಘ–ಸಂಸ್ಥೆಗಳು ಹಾಗೂ ಬ್ಯಾಂಕ್ಗಳು ಅಶಕ್ತರ ನೋವಿಗೆ ಸ್ಪಂದಿಸಿದಾಗ ನವ ಸಮಾಜ ನಿರ್ಮಾಣ ಸಾಧ್ಯ. ಮಹಿಳಾ ಸಬಲೀಕರಣಕ್ಕೆ ಸರಕಾರವೂ ಒತ್ತು ನೀಡುತ್ತಿದೆ. ಜಿಲ್ಲೆಗೆ ದ್ವೇಷದ ರಾಜಕಾರಣಕ್ಕಿಂತ ಅಭಿವೃದ್ಧಿಯ ರಾಜಕಾರಣ ಅಗತ್ಯ ಎಂದರು.
ಪುತ್ತೂರು ಶಾಸಕ ಅಶೋಕ್ಕುಮಾರ್ ರೈ ಮಾತನಾಡಿ, ಮಹಿಳೆಯರ ಕೈ ಬಲಪಡಿಸುವ ನಿಟ್ಟಿನಲ್ಲಿ ಸರಕಾರ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಅಗತ್ಯ. ಗ್ರಾಮೀಣ ಪ್ರದೇಶದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ 19 ಕರ್ನಾಟಕ ಪಬ್ಲಿಕ್ ಸ್ಕೂಲ್ಗಳನ್ನು ಆರಂಭಿಸಲಾಗಿದೆ. ಕಾಮಧೇನು ಮಹಿಳಾ ಸಹಕಾರ ಸಂಘ ಬಡವರ ಕಣ್ಣೀರೊರೆಸುವ ಕಾರ್ಯ ಮಾಡುತ್ತಿದ್ದು, ಸಂಘದ ಕಾರ್ಯವೈಖರಿ ಶ್ಲಾಘನೀಯ ಎಂದರು.
ಕ್ಷೇತ್ರ ಸಮನ್ವಯ ಶಿಕ್ಷಣ ಸಂಪನ್ಮೂಲ ವ್ಯಕ್ತಿ ತನುಜಾ ಮಾತನಾಡಿ, ವಿಕಲಚೇತನರಿಗೆ ನೀಡುವ ಮಾಸಾಶನ ಹೆಚ್ಚಿಸುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಸರಕಾರದ ಮೇಲೆ ಒತ್ತಡ ತರಬೇಕು. ವಿಕಲಚೇತನರಿಗಾಗಿ ಕಾಮಧೇನು ಮಹಿಳಾ ಸಹಕಾರ ಸಂಘ ಹಮ್ಮಿಕೊಂಡಿರುವ ಕಾರ್ಯಕ್ರಮ ಮಾದರಿಯಾಗಿದೆ ಎಂದರು.
ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆಯ ಅಧ್ಯಕ್ಷೆ ಲಾವಣ್ಯ ಬಲ್ಲಾಳ್ ಜೈನ್ ಹಾಗೂ ಆರೋಗ್ಯ ಇಲಾಖೆಯ ಸೆಲಿನಾ ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು.
ಮೆಸ್ಕಾಂ ಅಧ್ಯಕ್ಷ ಹರೀಶ್ಕುಮಾರ್, ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆ ಪ್ರಾಂಶುಪಾಲ ರೆ.ಫಾ.ಡಾ. ವರ್ಗೀಸ್ ಕೈಪನಡ್ಕ, ಎಸ್ಎಲ್ವಿ ಬುಕ್ನ ದಿವಾಕರ ದಾಸ್ ಅವರ ಸಹೋದರ ಸುರೇಶ್, ಜಿ.ಪಂ. ಮಾಜಿ ಸದಸ್ಯರಾದ ಸರ್ವೋತ್ತಮ ಗೌಡ, ಪಿ.ಪಿ.ವರ್ಗೀಸ್, ವಿಜಯಕುಮಾರ್ ಸೊರಕೆ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿಕಲಚೇತನರಿಗೆ ಸನ್ಮಾನ, ಕಿಟ್ ವಿತರಣೆ ಅಂಗವೈಕಲ್ಯತೆಯನ್ನು ಮೆಟ್ಟಿನಿಂತು ಬದುಕು ಸಾಗಿಸುತ್ತಿರುವ ಡಿಸಿಸಿ ಬ್ಯಾಂಕ್ ಕೊಕ್ಕಡ ಶಾಖೆಯ ಸಹಾಯಕ ವ್ಯವಸ್ಥಾಪಕ ಇಸ್ಮಾಯಿಲ್ ಕೆ., ಬಾಬು ಗೌಡ ಹಾಗೂ ಅರುಣಾ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಸುಮಾರು 50 ಮಂದಿ ವಿಕಲಚೇತನರಿಗೆ ವಿವಿಧ ಕಿಟ್ಗಳನ್ನು ವಿತರಿಸಲಾಯಿತು. ‘ಬದುಕಿಗೊಂದು ಸೂರು’ ಕಡಿಮೆ ಬಡ್ಡಿಯ ಸಾಲ ಯೋಜನೆಯಡಿ ₹3 ಲಕ್ಷ ಸಾಲ ಪಡೆದು ಶಿರಾಡಿಯಲ್ಲಿ ಉದ್ದಿಮೆ ಆರಂಭಿಸಿರುವ ವಿನಿತಾ ಎಂ.ಬಿ. ಅವರ ಇಬ್ಬರು ಮಕ್ಕಳ ಯಶೋಗಾಥೆಯ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲಾಯಿತು.
ಶೈಕ್ಷಣಿಕ, ಕ್ರೀಡಾ ಸಾಧಕರಿಗೆ ಗೌರವ ಕಳೆದ ಸಾಲಿನ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕರಾಟೆಯಲ್ಲಿ ಸಾಧನೆ ಮಾಡಿದ ಮಹಮ್ಮದ್ ಇಶಾನ್, ಕಬಡ್ಡಿ ಸಾಧಕ ಕಾರ್ತಿಕ್ ಹಾಗೂ ‘ಗಿಚ್ಚಿ ಗಿಲಿ ಗಿಲಿ’ ರಿಯಾಲಿಟಿ ಶೋದಲ್ಲಿ ಮಿಂಚಿದ ಬಾಲಪ್ರತಿಭೆ ಅದ್ವಿಕಾ ಬಾಕಿಲ ಅವರನ್ನು ಗೌರವಿಸಲಾಯಿತು. ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸೆಲಿನಾ, ಎಸ್ಎಲ್ವಿ ಬುಕ್ನ ದಿವಾಕರ ದಾಸ್ ಅವರ ಪರವಾಗಿ ಅವರ ಸಹೋದರ ಸುರೇಶ್ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ವಿಧಾನಪರಿಷತ್ ಸದಸ್ಯ ಪಿ.ವಿ.ಮೋಹನ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಮತ್ತಿತರರನ್ನೂ ಗೌರವಿಸಲಾಯಿತು. ಉತ್ತಮ ಗ್ರಾಹಕರು, ಉತ್ತಮ ಸಿಬ್ಬಂದಿ, ಉತ್ತಮ ನಿರ್ದೇಶಕಿ ಹಾಗೂ ಉತ್ತಮ ಸೇವಾಪ್ರತಿನಿಧಿಗಳಿಗೆ ಉಡುಗೊರೆ ನೀಡಿ ಪ್ರೋತ್ಸಾಹಿಸಲಾಯಿತು.
ದೇವಸ್ಥಾನದ ಬಯಲು ರಂಗಮಂಟಪಕ್ಕೆ ₹25 ಸಾವಿರ ದೇಣಿಗೆ ನೆಲ್ಯಾಡಿ–ಕೌಕ್ರಾಡಿಯ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಿರ್ಮಾಣವಾಗಲಿರುವ ಬಯಲು ರಂಗಮಂಟಪಕ್ಕೆ ಕಾಮಧೇನು ಮಹಿಳಾ ಸಹಕಾರ ಸಂಘದ ವತಿಯಿಂದ ₹25 ಸಾವಿರ ದೇಣಿಗೆ ನೀಡಲಾಯಿತು. ಸಂಘದ ಸದಸ್ಯರಾಗಿದ್ದು ಇತ್ತೀಚೆಗೆ ನಿಧನರಾದ ರವೀಂದ್ರ ಇಚ್ಲಂಪಾಡಿ ಹಾಗೂ ಭವಾನಿ ನಾಯ್ಕ್ ಆಲಂತಾಯ ಅವರ ಕುಟುಂಬಗಳಿಗೆ ಮರಣ ನಿಧಿ ವಿತರಿಸಲಾಯಿತು.
ಸಂಘದ ಅಧ್ಯಕ್ಷೆ ಉಷಾ ಅಂಚನ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿರ್ದೇಶಕಿ ವಿನೀತಾ ಎಂ.ಬಿ. ವಂದಿಸಿದರು. ಸುಧೀರ್ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಸಂಘದ ಉಪಾಧ್ಯಕ್ಷೆ ಮೇಘನ ಶೈನ್, ನಿರ್ದೇಶಕರಾದ ಶ್ರೀಲತಾ ಸಿ.ಹೆಚ್., ರವಿ ಡಿ., ವಾರಿಜಾಕ್ಷಿ, ಮೈತ್ರಿ, ಪ್ರವೀಣಿ ಸುಧಾಕರ ಶೆಟ್ಟಿ, ಶಾಲಿನಿ, ಸಂಪಾವತಿ, ಜಯಂತಿ ಬಿ.ನಾಯಕ್, ಡೈಸಿ ವರ್ಗೀಸ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚೈತನ್ಯ, ಎಕೌಂಟೆಂಟ್ ರಶ್ಮಿತಾ ಬಿ.ಆರ್., ಗುಮಾಸ್ತರಾದ ಶ್ವೇತಾಕುಮಾರಿ, ಆದರ್ಶ, ಸೇವಾಪ್ರತಿನಿಧಿಗಳಾದ ದಿವ್ಯ ಪಿ., ಕುಸುಮಾವತಿ ಹಾಗೂ ಪಿಗ್ಮಿ ಸಂಗ್ರಾಹಕರಾದ ಸವಿತಾ, ಹೇಮಚಂದ್ರ, ಗಣೇಶ, ಪ್ರಹ್ಲಾದ್ ಶೆಟ್ಟಿ ಮತ್ತಿತರರು ಕಾರ್ಯಕ್ರಮದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದರು.
ವಿಕಲಚೇತನರಿಗೆ ಸವಲತ್ತು ವಿತರಣೆ, ಕ್ರೀಡಾ–ಶೈಕ್ಷಣಿಕ ಸಾಧಕರಿಗೆ ಸನ್ಮಾನ; ‘ಕಾಮಧೇನು ಸಹಕಾರ ಕಿರಣ’ ಕೈಪಿಡಿ ಬಿಡುಗಡೆ ನೆಲ್ಯಾಡಿ: ನಾಲ್ಕು ವರ್ಷಗಳ ಹಿಂದೆ ನೆಲ್ಯಾಡಿಯಲ್ಲಿ ಆರಂಭಗೊಂಡ ಕಾಮಧೇನು ಮಹಿಳಾ ಸಹಕಾರ ...
ಶಿಶಿಲ: ಸೃಷ್ಟಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಒಕ್ಕೂಟದ ಅಧ್ಯಕ್ಷೆ ಮೀನಾಕ್ಷಿ ಬೈರಕಟ್ಟ ಅವರ ಅಧ್ಯಕ್ಷತೆಯಲ್ಲಿ ಶಿಶಿಲ ಗ್ರಾಮ ಪಂಚಾಯಿತಿ ...
ಕೊಕ್ಕಡ: ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಮೂಡುಬೈಲು ಪರಕೆ ಎಂಬಲ್ಲಿ ಶನಿವಾರ ಕೆಎಸ್ಆರ್ಟಿಸಿ ಬಸ್ ಹಾಗೂ ಟಾಟಾ ಸಫಾರಿ ಕಾರು ಮುಖಾಮುಖಿ ಡಿಕ್ಕಿಯಾಗಿ, ಬಸ್ಸಿನಲ್ಲಿದ್ದ ಕೆಲ ಪ್ರಯಾಣಿಕರು ...
ಪುದುವೆಟ್ಟು: ಕಸ್ತೂರಿರಂಗನ್ ವರದಿ ಹಾಗೂ ಅದರ ಆಧಾರದಲ್ಲಿ ಹೊರಡಿಸಿರುವ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮ ವಲಯ ಘೋಷಣೆ ಮಾಡುವ ಕ್ರಮವನ್ನು ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ...
ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಶ್ರಾವಣ ಶುಕ್ರವಾರದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳು ಭಕ್ತಿ ಹಾಗೂ ವಿಜೃಂಭಣೆಯಿಂದ ...
ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕದ ವತಿಯಿಂದ ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ ನಾಯಕತ್ವ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ವಲಯ ತರಬೇತಿದಾರ ಜೆಸಿ ...
ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಡಬ ತಾಲೂಕು, ನೆಲ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ಗಣೇಶೋತ್ಸವದ ಅಂಗವಾಗಿ ನೆಲ್ಯಾಡಿಯ ...
ನೆಲ್ಯಾಡಿ: ಕಸ್ತೂರಿರಂಗನ್ ವರದಿ ಜಾರಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಸೆ.10ರಂದು ಸಂಜೆ ಶಿರಾಡಿ ಗ್ರಾಮ ಪಂಚಾಯತ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಸರಕಾರಕ್ಕೆ ...
ಸಮಾಜಸೇವೆಯಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅವರು ಅಲ್ಪಾಯುಷ್ಯದಲ್ಲೇ ಅಗಲಿರುವುದು ಸಮಾಜಕ್ಕೆ ತುಂಬಲಾರದ ನಷ್ಟ ನೆಲ್ಯಾಡಿ: ಆ.15ರಂದು ನಿಧನರಾದ ನೆಲ್ಯಾಡಿ ಗ್ರಾಮದ ಕೆಳಗಿನಪರಾರಿ ನಿವಾಸಿ ಹಾಗೂ ವಿವಿಧ ಸಂಘಟನೆಗಳಲ್ಲಿ ...
ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರಿ ಸಂಘ, ನೆಲ್ಯಾಡಿ ಇದರ ವಾರ್ಷಿಕ ಮಹಾಸಭೆಯು ಸೆ.12ರಂದು ಶನಿವಾರ ನಡೆಯಲಿದ್ದು, ಮಹಾಸಭೆಯ ಬಳಿಕ ಬೆಳ್ಳಿಗ್ಗೆ 11 ಗಂಟೆಗೆ ವಿಕಲಚೇತನರಿಗಾಗಿ ‘ಆಸರೆ’ ಎಂಬ ...
ಬೆಳ್ತಂಗಡಿ: ತಾಲೂಕಿನ ಪುದುವೆಟ್ಟು ಗ್ರಾಮದ ಮಿಯಾರು ಕಲ್ಲಂಡ ಮನೆ ನಿವಾಸಿ ಯುವತಿಯೊಬ್ಬರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.9ರಂದು ಸಂಜೆ ನಡೆದಿದೆ. ಮೃತರನ್ನು ಅಣ್ಣಿ ...
ನೆಲ್ಯಾಡಿ: ಜೆಸಿ ನೆಲ್ಯಾಡಿ ವತಿಯಿಂದ ಕೊಣಾಲು ಸರ್ಕಾರಿ ಪ್ರೌಢಶಾಲೆಯಲ್ಲಿ “ವ್ಯಸನ ಮುಕ್ತ ಭಾರತ” ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿ ನೆಲ್ಯಾಡಿ ಅಧ್ಯಕ್ಷೆ ...
ಉದನೆ: ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಉದನೆ: ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಯಲ್ಲಿ ಉಪ್ಪಿನಂಗಡಿ ವಲಯ ಮಟ್ಟದ ಬಾಲಕ–ಬಾಲಕಿಯರ ವಾಲಿಬಾಲ್ ಪಂದ್ಯಾಟ ...
ಹೆದ್ದಾರಿ ತಡೆಗೆ ಮುಂದಾದ ಪ್ರತಿಭಟನಾಕಾರರು; ಪೊಲೀಸರೊಂದಿಗೆ ವಾಗ್ವಾದ — ಒಂದು ತಿಂಗಳಲ್ಲಿ ಸುರಕ್ಷತಾ ಪರಿಶೀಲನೆ ನಡೆಸಿ ಕ್ರಮದ ಭರವಸೆ ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನೆಲ್ಯಾಡಿ ...
ಕೊಕ್ಕಡ: ಕರಾವಳಿ ಕೊಂಕಣಿ ಕ್ರೈಸ್ತ ಸಮುದಾಯದ ಪ್ರಮುಖ ಧಾರ್ಮಿಕ ಹಬ್ಬಗಳಲ್ಲಿ ಒಂದಾದ ಮೊಂತಿ ಫೆಸ್ತ್ (ತೆನೆ ಹಬ್ಬ)ವನ್ನು ಸೆ. 8ರಂದು ಕೊಕ್ಕಡ ಸಂತ ಜೋನರ ದೇವಾಲಯದಲ್ಲಿ ಸಾಂಪ್ರದಾಯಿಕ ...
ನೆಲ್ಯಾಡಿ: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯಕ್ಕೆ ಸಂಬಂಧಿಸಿದ 7ನೇ ಕರಡು ಅಧಿಸೂಚನೆಯನ್ನು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಂಪೂರ್ಣವಾಗಿ ಕೈಬಿಡಬೇಕು ಎಂದು ಆಗ್ರಹಿಸಿ ಕೌಕ್ರಾಡಿ ಹಾಗೂ ...
ನೆಲ್ಯಾಡಿ: ಪುತ್ತೂರು ಶಿಶು ಅಭಿವೃದ್ಧಿ ಯೋಜನೆಯ ನೆಲ್ಯಾಡಿ ವಲಯದ ಬೀಡುಬೈಲು ಅಂಗನವಾಡಿ ಕೇಂದ್ರದಲ್ಲಿ ಸುಮಾರು 36 ವರ್ಷಗಳ ಕಾಲ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ಶಾಲಿನಿ ಹಾಗೂ ...
ನೆಲ್ಯಾಡಿ: ಮಲೆನಾಡು ಜನಹಿತ ರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಇದರ ಆಶ್ರಯದಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ ಮಂಗಳವಾರದಂದು ಗೋಳಿತ್ತೋಟ್ಟು ಗ್ರಾಮ ಪಂಚಾಯತ್ ...
ನೆಲ್ಯಾಡಿ: ಪ್ರಾಥಮಿಕ ಆರೋಗ್ಯ ಕೇಂದ್ರ ನೆಲ್ಯಾಡಿಯಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ ಇಬ್ಬರು ಆರೋಗ್ಯ ಇಲಾಖೆಯ ಸಿಬ್ಬಂದಿ ಮುಂಬಡ್ತಿ ಹೊಂದಿ ಬೇರೆಡೆಗೆ ವರ್ಗಾವಣೆಗೊಂಡಿದ್ದಾರೆ. ಪ್ರಾಥಮಿಕ ಆರೋಗ್ಯ ...
51ಕ್ಕೂ ಅಧಿಕ ಸಂಘ-ಸಂಸ್ಥೆಗಳ ಬೆಂಬಲ; ಜಿಲ್ಲಾಧಿಕಾರಿ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೆ ಪ್ರತಿಭಟನೆ ಮುಂದುವರಿಸುವ ಎಚ್ಚರಿಕೆ ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಅಡ್ಡಹೊಳೆ–ಬಿ.ಸಿ.ರೋಡ್ ನಡುವಿನ ...
ಉಪ್ಪಿನಂಗಡಿ: ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಯವರ ಕಚೇರಿಯಲ್ಲಿ ಕಳೆದ ಒಂಬತ್ತು ವರ್ಷಗಳಿಂದ ದ್ವಿತೀಯ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಉಷಾಕಿರಣ. ಬಿ. ಅವರು ಮಂಗಳೂರು ವೃತ್ತ ಅರಣ್ಯ ಕಚೇರಿಗೆ ...
ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕದ ವತಿಯಿಂದ ಜೆಸಿ ಸಪ್ತಾಹದ ಉದ್ಘಾಟನೆ ಹಾಗೂ ನೆಲ್ಯಾಡಿಯ ಆಟೋ ಚಾಲಕರಿಗೆ ಸ್ಟೀಲ್ ಬಾಟಲ್ ವಿತರಿಸುವ ಕಾರ್ಯಕ್ರಮ ಭಾನುವಾರದಂದು ನೆಲ್ಯಾಡಿಯ ಗೌರಿಜಾಲ್ ಆರ್ಕೇಡ್ನಲ್ಲಿ ...
ನೆಲ್ಯಾಡಿ: ಶೌರ್ಯ ವಿಪತ್ತು ನಿರ್ವಹಣಾ ತಂಡ ಉಪ್ಪಿನಂಗಡಿ ಬಜತ್ತೂರು ಘಟಕದ ವತಿಯಿಂದ ಬಜತ್ತೂರು ಗ್ರಾಮದ ಮಣ್ಣಿಮೇರು ಎಂಬಲ್ಲಿ ಏಕಾಂಗಿಯಾಗಿ ವಾಸ್ತವ್ಯವಿದ್ದ ಬಡ ಮಹಿಳೆ ಜಾನಕಿ ಎಂಬವರಿಗೆ ನಿರ್ಮಿಸಲಾದ ...
ತಾಲೂಕು ಮಟ್ಟದ ಪಂದ್ಯಾಟದಲ್ಲಿ ಬಾಲಕ–ಬಾಲಕಿಯರ ತಂಡಕ್ಕೆ ಪ್ರಥಮ ಸ್ಥಾನ; ಪ್ರಾಥಮಿಕ ಶಾಲೆಯ ಬಾಲಕಿಯರಿಗೆ ದ್ವಿತೀಯ ಸ್ಥಾನ ನೆಲ್ಯಾಡಿ: ಶಾಲಾ ಶಿಕ್ಷಣ ಇಲಾಖೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ...
‘ಸಂಕಲ್ಪ @ 75’ ಕಾರ್ಯಕ್ರಮಕ್ಕೆ ಚಾಲನೆ; ಪೂರ್ವ ವಿದ್ಯಾರ್ಥಿಗಳ ಸಮಾಗಮ, ನಿವೃತ್ತ ಶಿಕ್ಷಕರಿಗೆ ಗುರುವಂದನೆ ನೆಲ್ಯಾಡಿ: ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ನ 75ನೇ ವರ್ಷದ ಸಂಭ್ರಮಾಚರಣೆ ಹಾಗೂ ...
ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮ ನೆಲ್ಯಾಡಿ: ಗುರುಗಳನ್ನು ದೇವರ ಸ್ಥಾನದಲ್ಲಿ ಇಟ್ಟು ಗೌರವಿಸಿ ಆರಾಧಿಸಬೇಕು. ಕತ್ತಲೆಯಿಂದ ಬೆಳಕಿನ ಕಡೆಗೆ ಕೊಂಡೊಯ್ಯುವವರೇ ...
23 ವರ್ಷಗಳ ಶೈಕ್ಷಣಿಕ ಸೇವೆ, ಬಡ ವಿದ್ಯಾರ್ಥಿಗಳಿಗೆ ನೆರವು, ಶಾಲಾ ಅಭಿವೃದ್ಧಿಯಲ್ಲಿ ಮಹತ್ವದ ಕೊಡುಗೆ ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನೆಲ್ಯಾಡಿಯ ಸಂತ ಜಾರ್ಜ್ ...
ಕೃತ್ಯಕ್ಕೆ ಬಳಸುತ್ತಿದ್ದ ವಾಹನ ಹಾಗೂ ಪರಿಕರಗಳು ಪೊಲೀಸರ ವಶಕ್ಕೆ ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಲಂಪಾಡಿ ಕ್ರಾಸ್ ಸಮೀಪ ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳವು ...
ನೆಲ್ಯಾಡಿ: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘವು 24ನೇ ವರ್ಷವನ್ನು ಯಶಸ್ವಿಯಾಗಿ ಪೂರೈಸಿ 25ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಹಿನ್ನೆಲೆಯಲ್ಲಿ ನೆಲ್ಯಾಡಿ ಶಾಖೆಯಲ್ಲಿ ಬುಧವಾರ ಸ್ಥಾಪನ ದಿನಾಚರಣೆಯನ್ನು ...
ಕೊಕ್ಕಡ: ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶ್ರೀ ಶಿಶಿಲೇಶ್ವರ ದೇವರ ಸನ್ನಿಧಾನದಲ್ಲಿ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಶ್ರೀ ಶಿಶಿಲೇಶ್ವರ ದೇವರಿಗೆ ವಿಶೇಷ ...
ಮಂಗಳೂರು: ಶಾಲಾ ಮಕ್ಕಳನ್ನು ಸುರಕ್ಷಿತವಾಗಿ ಕರೆದೊಯ್ಯುವ ನಿಟ್ಟಿನಲ್ಲಿ ಕಾನೂನು ನಿಯಮಗಳು ಹಾಗೂ ಸಂಚಾರ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಶಾಲಾ ಬಸ್ ಚಾಲಕರು, ನಿರ್ವಾಹಕರು, ಮಾಲೀಕರು ಹಾಗೂ ...
ಕೊಕ್ಕಡ: ಆನೆಗಳ ಹಾವಳಿಯಿಂದ ಸಾರ್ವಜನಿಕರು, ಕೃಷಿಕರು ಹಾಗೂ ಅವರ ಕೃಷಿ ಮತ್ತು ಆಸ್ತಿಪಾಸ್ತಿಗಳಿಗೆ ಹಾನಿಯಾಗದಂತೆ, ಆನೆ ಹಾವಳಿ ನಿಯಂತ್ರಣಕ್ಕೆ ಬಂದು ಜನರು ನೆಮ್ಮದಿಯಿಂದ ಬದುಕುವಂತಾಗಲಿ ಎಂದು ಪ್ರಾರ್ಥಿಸಿ ...
ಧರ್ಮಸ್ಥಳ ಭಜನಾ ಕಮ್ಮಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರಾರ್ಥಿಗಳು ಭಾಗವಹಿಸಲು ಕರೆ ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಿ.ಸಿ. ಟ್ರಸ್ಟ್, ಕಡಬ ತಾಲೂಕು ಭಜನಾ ...
ನೆಲ್ಯಾಡಿ: ನೆಲ್ಯಾಡಿ, ಶಿರಾಡಿ ಹಾಗೂ ಮರ್ದಾಳ ಗ್ರಾಮ ಪಂಚಾಯಿತಿಗಳಿಗೆ ಮಂಗಳವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಿವಿಧ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಗ್ರಾಮ ಪಂಚಾಯಿತಿಗಳ ಕಚೇರಿಗಳಿಗೆ ಭೇಟಿ ...
ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಅಶ್ವಿನಿ ಆಸ್ಪತ್ರೆ ನೆಲ್ಯಾಡಿ, ಶ್ರೀನಿವಾಸ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಮುಕ್ಕ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ನೆಲ್ಯಾಡಿ ...
ನೆಲ್ಯಾಡಿ: ಪ್ರತಿಯೊಬ್ಬರ ಜೀವನದಲ್ಲಿಯೂ ಹೊಸ ಕನಸುಗಳು, ಹೊಸ ಭರವಸೆಗಳು ಹಾಗೂ ಹೊಸ ಆಲೋಚನೆಗಳು ಇರುತ್ತವೆ. ಸಂಸ್ಥೆಗೆ ನೂತನವಾಗಿ ಆಗಮಿಸಿರುವ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಹೊಸ ಕನಸು, ಹೊಸ ಯೋಜನೆ, ...
ನೆಲ್ಯಾಡಿ: ಶ್ರೀ ರಾಮ ವಿದ್ಯಾಲಯ, ನೆಲ್ಯಾಡಿಯಲ್ಲಿ ನಡೆದ ಅಂಡರ್–14 ಉಪ್ಪಿನಂಗಡಿ ವಲಯ ಮಟ್ಟದ ಖೋ-ಖೋ ಸ್ಪರ್ಧೆಯಲ್ಲಿ ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ನೆಲ್ಯಾಡಿಯ ಬಾಲಕ ಹಾಗೂ ...
ನೆಲ್ಯಾಡಿ: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ನೆಲ್ಯಾಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಕಡಬ ತಾಲೂಕು ವ್ಯಾಪ್ತಿಯ ನೆಲ್ಯಾಡಿ ಶೌರ್ಯ ...
₹45 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಂಗಮಂಟಪಕ್ಕೆ ನಳಿನ್ ಕುಮಾರ್ ಕಟೀಲ್ ಚಾಲನೆ ನೆಲ್ಯಾಡಿ: ಶ್ರೀ ಶಬರೀಶ ಬಯಲು ರಂಗಮಂಟಪಕ್ಕೆ ಶಿಲಾನ್ಯಾಸ ನೆಲ್ಯಾಡಿ: ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ...
ಗಾಂಧಿ ಮೈದಾನದ ಬಳಿ ಯು-ಟರ್ನ್ ಕಲ್ಪಿಸುವಂತೆ ಆಗ್ರಹ; ನೂರಕ್ಕೂ ಅಧಿಕ ಮಂದಿ ಸಭೆಯಲ್ಲಿ ಮಹತ್ವದ ನಿರ್ಧಾರ ಸೆ.9ರಂದು ನೆಲ್ಯಾಡಿಯಲ್ಲಿ ಯು-ಟರ್ನ್ಗಾಗಿ ಬೃಹತ್ ಪ್ರತಿಭಟನೆ ನೂರಕ್ಕೂ ಅಧಿಕ ಮಂದಿ ...
ಕೊಕ್ಕಡ: ಇಲ್ಲಿನ ಪ್ರಸಿದ್ಧ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ನೂತನ ಗರ್ಭಗುಡಿಗಳ ಶಿಲಾನ್ಯಾಸ ಕಾರ್ಯಕ್ರಮವು ಗುರುವಾರ ಧಾರ್ಮಿಕ ವಿಧಿವಿಧಾನಗಳೊಂದಿಗೆ ...
ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆಸಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಆರೋಪದ ಹಿನ್ನೆಲೆಯಲ್ಲಿ, ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರಿಗೆ ಟಾಟಾ ಸುಮೊದಿಂದ ಡಿಕ್ಕಿ ಹೊಡೆದ ಪ್ರಕರಣಕ್ಕೆ ...
ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಎಂಬಲ್ಲಿ ಕಾರೊಂದು ಹೆದ್ದಾರಿ ಮಧ್ಯದಲ್ಲಿ ತಾತ್ಕಾಲಿಕವಾಗಿ ಅಳವಡಿಸಲಾಗಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಭಾನುವಾರ ...
ಇಚ್ಲಂಪಾಡಿ: ಕ್ರಿಶ್ಚಿಯನ್ ಬ್ರದರ್ಸ್ ಟ್ರಸ್ಟ್ ಇದರ ವತಿಯಿಂದ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಸಹಯೋಗದಲ್ಲಿ ಭಾನುವಾರದಂದು ಇಚ್ಲಂಪಾಡಿಯ ಸಂತ ಜಾರ್ಜ್ ಅರ್ಥೋಡೊಕ್ಸ್ ಸಿರಿಯನ್ ಚರ್ಚ್ ಸಭಾಂಗಣದಲ್ಲಿ ...
ಪುತ್ತೂರು: ಆನಡ್ಕ ಕಡೆಯಿಂದ ಪಡೀಲ್ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಪಿಕ್ಅಪ್ ವಾಹನವನ್ನು ಪುತ್ತೂರು ನಗರ ಠಾಣಾ ಪೊಲೀಸರು ಜಿಡೆಕಲ್ಲು ಬಳಿ ತಡೆದು, ಮೂರು ಜಾನುವಾರುಗಳನ್ನು ...
ಇಚ್ಲಂಪಾಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನೇರ್ಲ–ಇಚ್ಲಂಪಾಡಿಯ ಶಾಲಾ ಆವರಣದ ಭದ್ರತೆ ಹಾಗೂ ಮೂಲಸೌಕರ್ಯವನ್ನು ಗಮನದಲ್ಲಿಟ್ಟುಕೊಂಡು ಹಳೆ ವಿದ್ಯಾರ್ಥಿನಿ ಕುಮಾರಿ ಆದಿರಾ ಉದಯಕುಮಾರ್ ...
ನೆಲ್ಯಾಡಿ: ನೆಲ್ಯಾಡಿ ಹಾಗೂ ಸುತ್ತಮುತ್ತ ಬೈಕ್ ಕಳ್ಳತನ ಪ್ರಕರಣಗಳು ಮತ್ತೆ ಮುಂದುವರಿದಿರುವ ಶಂಕೆ ವ್ಯಕ್ತವಾಗಿದ್ದು, ಹೊಸಮಜಲು ಸಮೀಪದ ಗ್ಯಾರೇಜ್ನಲ್ಲಿ ಲಾಕ್ ಮಾಡಿ ನಿಲ್ಲಿಸಿದ್ದ ಪಲ್ಸರ್ ...
ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಮಳೆಗಾಲದಲ್ಲಿ ಆಗಮಿಸುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಬ್ಯಾಂಕ್ ಆಫ್ ಬರೋಡಾ ವತಿಯಿಂದ ₹5 ಲಕ್ಷ ವೆಚ್ಚದಲ್ಲಿ ನಿರ್ಮಿಸಿಕೊಡಲಾದ ರೂಫಿಂಗ್ ...
ಅರಸಿನಮಕ್ಕಿ: ಚೈತನ್ಯ ಮಿತ್ರ ಕಲಾವೃಂದ, ಅರಸಿನಮಕ್ಕಿ ಇದರ ಆಶ್ರಯದಲ್ಲಿ 23ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣಜನ್ಮಾಷ್ಟಮಿ ಉತ್ಸವವು ಸೆ.5ರಂದು ನಡೆಯಲಿದೆ. ಉತ್ಸವದ ಅಂಗವಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ...
ಗುಂಡ್ಯ: ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮಣಿಭಾಂಡ ಬಳಿ ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಏಕಾಏಕಿ ಮರವೊಂದು ಸ್ಕೂಟಿ ಮೇಲೆ ಉರುಳಿಬಿದ್ದ ಪರಿಣಾಮ ಸಹಪ್ರಯಾಣಿಕ ಗಂಭೀರವಾಗಿ ಗಾಯಗೊಂಡ ...
ನೆಲ್ಯಾಡಿ: ಕ್ರಿಶ್ಚಿಯನ್ ಬ್ರದರ್ಸ್ ಟ್ರಸ್ಟ್, ಇಚಿಲಂಪಾಡಿ ಇದರ ವತಿಯಿಂದ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಸಹಯೋಗದಲ್ಲಿ ಆ.23ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಇಚಿಲಂಪಾಡಿಯ ಸಂತ ...
ಕೊಕ್ಕಡ: ಗ್ರಾಮ ಪಂಚಾಯಿತಿನ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಆ.20ರಂದು ಕೊಕ್ಕಡ ಅಂಬೇಡ್ಕರ್ ಭವನದಲ್ಲಿ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಪಿಡಬ್ಲ್ಯುಡಿ ಇಲಾಖೆಯ ಸೂರಜ್ ...
ಕೊಕ್ಕಡ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ರೆಖ್ಯಾ ಗ್ರಾಮದ ಸರ್ವೆ ನಂಬರ್ 69/1ರ ವ್ಯಾಪ್ತಿಯಲ್ಲಿರುವ ಅರಣ್ಯ ಹಾಗೂ ಕಂದಾಯ ಭೂಮಿಯ ಸಕ್ರಮೀಕರಣ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ, ಹಲವು ವರ್ಷಗಳಿಂದ ...
ನೆಲ್ಯಾಡಿ: ನೆಲ್ಯಾಡಿ ವಲಯ ಬಂಟರ ಸಂಘದ ಮಹಾಸಭೆಯು ನೆಲ್ಯಾಡಿ ಹಾಲು ಉತ್ಪಾದಕರ ಸಂಘದ ಕ್ಷೀರ ಸಂಗಮ ಸಭಾಂಗಣದಲ್ಲಿ ನಡೆಯಿತು. ಪ್ರತಾಪ್ ಚಂದ್ರ ರೈ ಕುದ್ಮಾರುಗುತ್ತು ಅವರ ಅಧ್ಯಕ್ಷತೆಯಲ್ಲಿ ...
ನೆಲ್ಯಾಡಿ: ನೆಲ್ಯಾಡಿ ಪೇಟೆ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಬಾಲ ವಿಕಾಸ ಸಮಿತಿಯ ಅಧ್ಯಕ್ಷರ ನೇತೃತ್ವದಲ್ಲಿ ನೆಲ್ಯಾಡಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ...
ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗ ಸನ್ನಿಧಿಯಲ್ಲಿ ನಾಗರಪಂಚಮಿ ಆಚರಣೆಯು ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ನಡೆಯಿತು. ನಾಗರಪಂಚಮಿ ಹಿನ್ನೆಲೆಯಲ್ಲಿ ಸೀಮೆಯ ವಿವಿಧೆಡೆಯಿಂದ ಆಗಮಿಸಿದ ಭಕ್ತರು ಬೆಳಗ್ಗಿನಿಂದಲೇ ...
ನೆಲ್ಯಾಡಿ: ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಿದವು. ನಾಗರಪಂಚಮಿ ಅಂಗವಾಗಿ ನಾಗದೇವರಿಗೆ ವಿಶೇಷ ತಂಬಿಲ, ಕ್ಷೀರಾಭಿಷೇಕ, ಸೀಯಾಳಾಭಿಷೇಕ ಸೇರಿದಂತೆ ...
ನೆಲ್ಯಾಡಿ: ಕೌಕ್ರಾಡಿ ಗ್ರಾಮದ ದೊಂತಿಲ ಕ್ಷೇತ್ರದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು. ದೊಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕರಾದ ...
ಗೋಳಿತೊಟ್ಟು: ಸರಕಾರಿ ಶಾಲೆಯಲ್ಲಿ ಆಟಿ ತಿಂಗಳ ವಿಶೇಷತೆ, ತುಳುನಾಡಿನ ಸಾಂಪ್ರದಾಯಿಕ ಆಚರಣೆ ಹಾಗೂ ಗ್ರಾಮೀಣ ಬದುಕಿನ ಸೊಗಡನ್ನು ಪರಿಚಯಿಸುವ ‘ಆಟಿದೊಂಜಿ ದಿನ’ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮಕ್ಕೆ ...
ನೆಲ್ಯಾಡಿ: ಯುವಜನರಲ್ಲಿ ವ್ಯಕ್ತಿತ್ವ ವಿಕಸನದ ಜೊತೆಗೆ ನಾಯಕತ್ವ ಗುಣಗಳನ್ನು ಬೆಳೆಸುವ ಹಾಗೂ ಸಮಾಜಮುಖಿ ಸೇವಾ ಚಟುವಟಿಕೆಗಳ ಮೂಲಕ ಜನರೊಂದಿಗೆ ಬೆರೆಯುವ ಉದ್ದೇಶದಿಂದ ನೆಲ್ಯಾಡಿ ಜೇಸಿಐ ವತಿಯಿಂದ ಆಯೋಜಿಸಲಾದ ...
ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ ಆಗಸ್ಟ್ ತಿಂಗಳ ಸಾಮಾನ್ಯ ಸಭೆಯು ಕೊಕ್ಕಡದ ಎಜುನೆಸ್ಟ್ ಅಕಾಡೆಮಿ ಕೇಂದ್ರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ರಿತೇಶ್ ಎಂ.ಸ್ಟ್ರೆಲ್ಲಾ ...
ನೆಲ್ಯಾಡಿ: ಮರಾಟಿ ಸಮಾಜ ಸೇವಾ ಸಂಘ ನೆಲ್ಯಾಡಿ–ಕೌಕ್ರಾಡಿ ಇದರ ಆಶ್ರಯದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮವು ಸಂಭ್ರಮದಿಂದ ಯಶಸ್ವಿಯಾಗಿ ನಡೆಯಿತು. ಕೋಡಿಮನೆ ರಾಮಣ್ಣ ನಾಯ್ಕ ಅವರು ದೀಪ ಬೆಳಗಿಸಿ ...
ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಡಬ ತಾಲೂಕು, ನೆಲ್ಯಾಡಿ ವಲಯದ ಕೌಕ್ರಾಡಿ ಕಾರ್ಯಕ್ಷೇತ್ರದ ವತಿಯಿಂದ ದೊಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯ ...
ಧಾರ್ಮಿಕ ಹಾಗೂ ಸಾಂಸ್ಕೃತಿಕ 📅 ಆಗಸ್ಟ್ 16, 2026 ರಾಮಾಯಣ ಪಾರಾಯಣ ಸಮಾಪ್ತಿ ದಿನಾಚರಣೆ: ನೆಲ್ಯಾಡಿ ಕೆ.ಎನ್.ಎಸ್.ಎಸ್. ಕಚೇರಿಯಲ್ಲಿ ಭಕ್ತಿಭಾವದ ಸಂಭ್ರಮ ಶ್ರೀ ಚಂದ್ರಶೇಖರನ್ ನಾಯರ್ ಅವರ ...