ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ 50 ಸಾವಿರಕ್ಕೂ ಅಧಿಕ ಭಕ್ತರ ಭೇಟಿ; 108 ಕಾಯಿ ಗಣಹೋಮ, ರಂಗಪೂಜೆ, ಮಹಾಪೂಜೆ ಹಾಗೂ ಅನ್ನಸಂತರ್ಪಣೆ
ಕೊಕ್ಕಡ: ಬಯಲು ಆಲಯ ಗಣಪ ಎಂದೇ ಪ್ರಸಿದ್ಧಿ ಪಡೆದ ಬೆಳ್ತಂಗಡಿ ತಾಲೂಕಿನ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಮಹೋತ್ಸವವು ಭಕ್ತಿಭಾವ ಹಾಗೂ ಸಂಭ್ರಮದಿಂದ ಅದ್ದೂರಿಯಾಗಿ ನಡೆಯಿತು.
ಗಣೇಶ ಚತುರ್ಥಿ ಅಂಗವಾಗಿ ಬೆಳಗ್ಗೆ 108 ಕಾಯಿ ಗಣಹೋಮ, ರಂಗಪೂಜೆ ಹಾಗೂ ಮಹಾಪೂಜೆ ನೆರವೇರಿತು. ಬಳಿಕ ಅನ್ನಸಂತರ್ಪಣೆ ನಡೆಯಿತು. ಸುಮಾರು 50 ಸಾವಿರಕ್ಕೂ ಅಧಿಕ ಭಕ್ತರು ದಿನವಿಡೀ ಕ್ಷೇತ್ರಕ್ಕೆ ಆಗಮಿಸಿ ಶ್ರೀ ಮಹಾಗಣಪತಿಯ ದರ್ಶನ ಪಡೆದು ಪುನೀತರಾದರು. ಬೆಳಗಿನ ಜಾವ 5 ಗಂಟೆಯಿಂದಲೇ ನಾಡಿನ ವಿವಿಧೆಡೆಯಿಂದ ಭಕ್ತರ ದಂಡು ಸೌತಡ್ಕದತ್ತ ಹರಿದುಬಂದಿದ್ದು, ಮಧ್ಯಾಹ್ನ 2 ಗಂಟೆಯವರೆಗೂ ಭಕ್ತರ ಸಂಖ್ಯೆ ಹೆಚ್ಚಾಗಿತ್ತು.
ಗಣೇಶ ಚತುರ್ಥಿ ಪ್ರಯುಕ್ತ ಬೆಳಗ್ಗೆ ಶ್ರೀ ಮಹಾಗಣಪತಿ ದೇವರನ್ನು ಮಲ್ಲಿಗೆ ಹೂಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು. ಮಧ್ಯಾಹ್ನದ ಮಹಾಪೂಜೆಯ ಸಂದರ್ಭದಲ್ಲಿ ವಿವಿಧ ಬಗೆಯ ಹೂಗಳಿಂದ ದೇವರ ಸನ್ನಿಧಿ ಹಾಗೂ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶವನ್ನು ಆಕರ್ಷಕವಾಗಿ ಅಲಂಕರಿಸಲಾಗಿತ್ತು.
ದಿನವಿಡೀ ದೇವಸ್ಥಾನದ ವಿವಿಧ ಸೇವಾ ಕೌಂಟರ್ಗಳಲ್ಲಿ ಭಕ್ತರು ಅಪಾರ ಸಂಖ್ಯೆಯಲ್ಲಿ ಸೇವೆ ಸಲ್ಲಿಸಿದರು. 12,500 ಅವಲಕ್ಕಿ ಪಂಚಕಜ್ಜಾಯ, 10,000 ಅಪ್ಪ ಪ್ರಸಾದ, 5,000 ಲಾಡು ಪ್ರಸಾದ, 4,300 ಮೋದಕ ಪ್ರಸಾದ ಹಾಗೂ 3,000 ಕಡ್ಲೆ ಪಂಚಕಜ್ಜಾಯ ಸೇರಿದಂತೆ ವಿವಿಧ ಪ್ರಸಾದಗಳನ್ನು ಭಕ್ತರಿಗೆ ವಿತರಿಸಲಾಯಿತು. ಮಧ್ಯಾಹ್ನದ ಅನ್ನಸಂತರ್ಪಣೆಯಲ್ಲಿ ಸುಮಾರು 8ಸಾವಿರಕ್ಕೂ ಅಧಿಕ ಭಕ್ತರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಯುವ ಉದ್ಯಮಿ ಹಾಗೂ ಸಮಾಜಸೇವಕ ಕಿರಣ್ ಚಂದ್ರ ಪುಷ್ಪಗಿರಿ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಅಧ್ಯಕ್ಷ ಪ್ರಶಾಂತ್ ರೈ ಗೋಳಿತೊಟ್ಟು, ಮಾಜಿ ಸದಸ್ಯರುಗಳು ಸೇರಿದಂತೆ ನಾಡಿನ ಹಲವಾರು ಗಣ್ಯರು ಹಾಗೂ ಭಕ್ತಾದಿಗಳು ಕ್ಷೇತ್ರಕ್ಕೆ ಆಗಮಿಸಿ ಶ್ರೀ ಮಹಾಗಣಪತಿಯ ವಿಶೇಷ ದರ್ಶನ ಪಡೆದರು.
ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಕೆ., ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಯೇಸುರಾಜ್, ವ್ಯವಸ್ಥಾಪನ ಸಮಿತಿ ಸದಸ್ಯರು, ಪ್ರಧಾನ ಅರ್ಚಕ ಸತ್ಯಪ್ರಿಯ ಕಲ್ಲೂರಾಯ, ವಿಶ್ವನಾಥ ಕೊಲ್ಲಾಜೆ, ಪ್ರಮೋದ್ ಕುಮಾರ್ ಶೆಟ್ಟಿ, ಗಣೇಶ್ ಕಾಶಿ, ಪ್ರಶಾಂತ್ ಮಚ್ಚಿನ, ಹರಿಶ್ಚಂದ್ರ ಜಿ., ಸಿನಿ ಗುರುದೇವನ್ ಹಾಗೂ ದೇವಸ್ಥಾನದ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದು, ಮಹೋತ್ಸವದ ವಿವಿಧ ವ್ಯವಸ್ಥೆಗಳನ್ನು ನಿರ್ವಹಿಸಿದರು.
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...

72ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಪಂಜ ವಲಯ ಅರಣ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ನೆಲ್ಯಾಡಿ: “ಆವಾಸ ಸ್ಥಾನಗಳ ಜೋಡಣೆ ಹಾಗೂ ವನ್ಯಜೀವಿಗಳ ಅಭಿವೃದ್ಧಿ” ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿರುವ ...
ಉಪ್ಪಿನಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕ್ರೀಡಾಕೂಟ ಹಿರೆಬಂಡಾಡಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಇಂದ್ರಪ್ರಸ್ಥ ...
ಕೊಕ್ಕಡ: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಶಿಶಿಲ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಹೀ ಸೇವಾ ಸಮಾರೋಪ ಸಮಾರಂಭದೊಂದಿಗೆ ವಿಶೇಷ ಗ್ರಾಮ ಸಭೆ ನಡೆಯಿತು. ಪಂಚಾಯತ್ ಆಡಳಿತಾಧಿಕಾರಿ ಭರತ್ ...
ಕೊಕ್ಕಡ: ಸಂತ ಜೋನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ನೂತನ ಯಾಜಕರಾಗಿ ಗುರುದೀಕ್ಷೆ ಸ್ವೀಕರಿಸಿದ ರೆ| ಫಾ| ವಿಲ್ಫ್ರೆಡ್ ಸ್ಟೀವನ್ ರೊಡ್ರಿಗಸ್ ಹಾಗೂ ಡಾಕ್ಟರೇಟ್ ಪದವಿ ಪಡೆದ ಡಾ| ಸೈಮನ್ ...
ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪ ಎಫ್ಐಆರ್ನಲ್ಲಿ ಸೇರಿಸಿಲ್ಲ: ಬಣಕಲ್ ಪೊಲೀಸರ ವಿರುದ್ಧ ಗಾಯಾಳುಗಳ ಆಕ್ರೋಶ ಕೊಕ್ಕಡ: ಮಂತ್ರಾಲಯಕ್ಕೆ ತೆರಳುತ್ತಿದ್ದ ಶಿಶಿಲದ ಸ್ನೇಹಿತರಿದ್ದ ಕಾರಿಗೆ ಎದುರಿನಿಂದ ಬಂದ ...