ನೆಲ್ಯಾಡಿ: ವಿಶ್ವವಿದ್ಯಾಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ 2026-27ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು.
ಕಾಲೇಜಿನ ಸಂಯೋಜಕ ಡಾ.ಸುರೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿ ಶಿಕ್ಷಕ-ರಕ್ಷಕ ಸಂಘವು ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳು ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಶೈಕ್ಷಣಿಕ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಶಿಕ್ಷಕರು, ಪೋಷಕರು ಹಾಗೂ ಕಾಲೇಜಿನ ಆಡಳಿತ ಒಗ್ಗೂಡಿ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಕಾಲೇಜಿನ ವಿವಿಧ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.
ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಶಿಕ್ಷಕ-ರಕ್ಷಕ ಸಂಘದ ಖಜಾಂಚಿ ವೆರೋನಿಕಾ ಪ್ರಭಾ ವಿ.ಪಿ. ಅವರು 2025-26ನೇ ಸಾಲಿನ ಲೆಕ್ಕಪತ್ರವನ್ನು ಮಂಡಿಸಿದರು. ಸಭೆಯು ಲೆಕ್ಕಪತ್ರವನ್ನು ಅನುಮೋದಿಸಿತು. ಬಳಿಕ 2026-27ನೇ ಸಾಲಿನ ಪೋಷಕರ ಕಾರ್ಯಕಾರಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಕಾರ್ಯಾಧ್ಯಕ್ಷರಾಗಿ ಉಮ್ಮರ್ ಬೈಲಂಗಡಿ ಅವರು ಎಲ್ಲರ ಸಹಮತದೊಂದಿಗೆ ಮರು ಆಯ್ಕೆಯಾದರು. ಉಪಾಧ್ಯಕ್ಷರಾಗಿ ಅಶ್ವಿತಾ ರೈ, ಸಹ ಕಾರ್ಯದರ್ಶಿಯಾಗಿ ಕೇಶವತಿ ಆಯ್ಕೆಯಾದರು. ಸದಸ್ಯರಾಗಿ ಧನಂಜಯ್, ಮೋಹಿನಿ ಹಾಗೂ ಯಶೋಧ ಆಯ್ಕೆಯಾದರು. ನೂತನ ಪದಾಧಿಕಾರಿಗಳ ಆಯ್ಕೆ ಅವಿರೋಧವಾಗಿ ನಡೆಯಿತು. ನೂತನ ಪದಾಧಿಕಾರಿಗಳಿಗೆ ಕಾಲೇಜಿನ ಸಂಯೋಜಕ ಡಾ. ಸುರೇಶ್ ಹೂ ನೀಡಿ ಅಭಿನಂದಿಸಿದರು. ಇದೇ ವೇಳೆ ಪೂರ್ವ ಸಹ ಕಾರ್ಯದರ್ಶಿ ಸೇಸಮ್ಮ ಹಾಗೂ ಸದಸ್ಯರಾದ ಲಿಂಗಪ್ಪ, ಉಮ್ಮರ್ ಮುಸ್ಲಿಯಾರ್ ಮತ್ತು ಪಾರ್ವತಿ ಅವರು ತಮ್ಮ ಸ್ಥಾನದಿಂದ ನಿರ್ಗಮಿಸಿದರು.
ಕಾರ್ಯಕ್ರಮದಲ್ಲಿ ನೂತನ ಹಾಗೂ ಪೂರ್ವ ಪದಾಧಿಕಾರಿಗಳು, ಹೆತ್ತವರು ಮತ್ತು ಪೋಷಕರು ಕಾಲೇಜಿನ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿವಿಧ ಸಲಹೆ-ಸೂಚನೆಗಳನ್ನು ನೀಡಿದರು. ನೂತನ ಕಾರ್ಯಾಧ್ಯಕ್ಷ ಉಮ್ಮರ್ ಬೈಲಂಗಡಿ ಮಾತನಾಡಿ, ವಿಶ್ವವಿದ್ಯಾಲಯ ಕಾಲೇಜು ನೆಲ್ಯಾಡಿಯಲ್ಲಿ ಮುಂದುವರಿಯಬೇಕಾದ ಅಗತ್ಯತೆ ಮತ್ತು ಅದರ ಮಹತ್ವವನ್ನು ವಿವರಿಸಿದರು. ಕಾಲೇಜಿನ ಉಳಿವಿಗಾಗಿ ಅಗತ್ಯ ಪ್ರಯತ್ನಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು.
ಡಾ. ಸೀತಾರಾಮ ಪಿ. ಅವರು ಸ್ವಾಗತಿಸಿ, ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಶ್ರುತಿ ಕಾರ್ಯಕ್ರಮ ನಿರೂಪಿಸಿದರು. ಪ್ರಜ್ಞಾ ವಂದಿಸಿದರು. ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...

72ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಪಂಜ ವಲಯ ಅರಣ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ನೆಲ್ಯಾಡಿ: “ಆವಾಸ ಸ್ಥಾನಗಳ ಜೋಡಣೆ ಹಾಗೂ ವನ್ಯಜೀವಿಗಳ ಅಭಿವೃದ್ಧಿ” ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿರುವ ...
ಉಪ್ಪಿನಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕ್ರೀಡಾಕೂಟ ಹಿರೆಬಂಡಾಡಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಇಂದ್ರಪ್ರಸ್ಥ ...
ಕೊಕ್ಕಡ: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಶಿಶಿಲ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಹೀ ಸೇವಾ ಸಮಾರೋಪ ಸಮಾರಂಭದೊಂದಿಗೆ ವಿಶೇಷ ಗ್ರಾಮ ಸಭೆ ನಡೆಯಿತು. ಪಂಚಾಯತ್ ಆಡಳಿತಾಧಿಕಾರಿ ಭರತ್ ...
ಕೊಕ್ಕಡ: ಸಂತ ಜೋನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ನೂತನ ಯಾಜಕರಾಗಿ ಗುರುದೀಕ್ಷೆ ಸ್ವೀಕರಿಸಿದ ರೆ| ಫಾ| ವಿಲ್ಫ್ರೆಡ್ ಸ್ಟೀವನ್ ರೊಡ್ರಿಗಸ್ ಹಾಗೂ ಡಾಕ್ಟರೇಟ್ ಪದವಿ ಪಡೆದ ಡಾ| ಸೈಮನ್ ...
ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪ ಎಫ್ಐಆರ್ನಲ್ಲಿ ಸೇರಿಸಿಲ್ಲ: ಬಣಕಲ್ ಪೊಲೀಸರ ವಿರುದ್ಧ ಗಾಯಾಳುಗಳ ಆಕ್ರೋಶ ಕೊಕ್ಕಡ: ಮಂತ್ರಾಲಯಕ್ಕೆ ತೆರಳುತ್ತಿದ್ದ ಶಿಶಿಲದ ಸ್ನೇಹಿತರಿದ್ದ ಕಾರಿಗೆ ಎದುರಿನಿಂದ ಬಂದ ...