ಕಡಬ: ಮಂಗಳೂರಿನಲ್ಲಿ ಶುಕ್ರವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯು ಕರಾವಳಿ ಭಾಗದ ಅಭಿವೃದ್ಧಿಗೆ ಹೊಸ ದಿಕ್ಕು ತೋರಿಸಲಿದೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ. ಹೇಳಿದರು.
ಬುಧವಾರ ಕಡಬದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ಇಲ್ಲಿ ನಡೆಯುತ್ತಿರುವುದು ಐತಿಹಾಸಿಕ ಹೆಜ್ಜೆಯಾಗಿದೆ. ಈ ಸಭೆಯ ಮೂಲಕ ಜಿಲ್ಲೆಯಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡುವ ನಿರೀಕ್ಷೆಯಿದ್ದು, ಸಭೆಯನ್ನು ಆಯೋಜಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಅಭಿನಂದಿಸುವುದಾಗಿ ಹೇಳಿದರು.
ಕರಾವಳಿ ಭಾಗದಲ್ಲಿ ಬಿಜೆಪಿ ನಾಯಕರು ಕೋಮು ಭಾವನೆಗಳನ್ನು ಕೆರಳಿಸಿ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ಅಭಿವೃದ್ಧಿಯ ವಿಚಾರದಲ್ಲಿ ಹೆಚ್ಚಿನ ಗಮನ ಹರಿಸುವ ಅಗತ್ಯವಿದೆ ಎಂದರು. ಕರಾವಳಿಯಲ್ಲಿ ನಡೆಯುತ್ತಿರುವ ಕೋಮು ಗಲಭೆಗಳು ಹಾಗೂ ರಾಜಕೀಯ ಕೆಸರೆಚಾಟಗಳಿಗೆ ಅಂತ್ಯ ಹಾಡಲು ಅಭಿವೃದ್ಧಿಯ ಮೂಲಕ ದಿಟ್ಟ ಉತ್ತರ ನೀಡುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ಮಹತ್ವದ ವೇದಿಕೆಯಾಗಲಿದೆ ಎಂದು ಅಭಿಪ್ರಾಯಪಟ್ಟರು.
ಕರಾವಳಿ ಭಾಗವು ಸುಶಿಕ್ಷಿತರ ನಾಡಾಗಿದ್ದು, ಹಲವು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳನ್ನು ಹೊಂದಿದೆ. ಭೂ, ವಾಯು ಹಾಗೂ ಜಲ ಮಾರ್ಗಗಳ ಮೂಲಕ ವಿದೇಶಗಳೊಂದಿಗೆ ಸಂಪರ್ಕ ಹೊಂದಿರುವ ಕರಾವಳಿಯಲ್ಲಿ ಪ್ರವಾಸೋದ್ಯಮ ಮತ್ತು ಕೈಗಾರಿಕೋದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡಿದರೆ ಯುವಕ-ಯುವತಿಯರಿಗೆ ಉದ್ಯೋಗಾವಕಾಶಗಳು ಹೆಚ್ಚಲಿದ್ದು, ಸಮಗ್ರ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಹೇಳಿದರು.
ಕರಾವಳಿ ಭಾಗದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಪ್ರಮುಖ ವಿಚಾರಗಳು ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬರುವ ನಿರೀಕ್ಷೆಯಿದೆ. ಕರಾವಳಿಯ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಧರ್ಮಾಧಾರಿತ ರಾಜಕೀಯಕ್ಕಿಂತ ಅಭಿವೃದ್ಧಿಯ ರಾಜಕೀಯಕ್ಕೆ ಒತ್ತು ನೀಡಬೇಕು ಎಂದು ಅಭಿಲಾಷ್ ಪಿ.ಕೆ. ಹೇಳಿದರು.
ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಡಬ ತಾಲೂಕು ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಪಿ. ವರ್ಗೀಸ್ ಮಾತನಾಡಿ, ಜಿಲ್ಲೆಗೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸದಿರಲು ಈಗಾಗಲೇ ರಾಜ್ಯ ಸರ್ಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲೂ ಈ ಕುರಿತು ಮತ್ತೊಮ್ಮೆ ವಿರೋಧಿ ನಿರ್ಣಯ ಕೈಗೊಳ್ಳಬೇಕೆಂದು ಒತ್ತಾಯಿಸಿರುವುದಾಗಿ ತಿಳಿಸಿದರು.
ತುಳು ಭಾಷೆಯನ್ನು ದ್ವಿತೀಯ ಭಾಷೆಯಾಗಿ ಘೋಷಿಸಬೇಕು, ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಅಗತ್ಯವಿರುವ ಎಲ್ಲಾ ಸರ್ಕಾರಿ ಕಚೇರಿಗಳನ್ನು ಶೀಘ್ರ ಆರಂಭಿಸಬೇಕು, ಪ್ಲಾಟಿಂಗ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಹಾಗೂ ನೆನೆಗುದಿಗೆ ಬಿದ್ದಿರುವ ಕುಮ್ಕಿ ಹಕ್ಕನ್ನು ಜಾರಿಗೊಳಿಸಬೇಕು ಸೇರಿದಂತೆ ಹತ್ತಾರು ಬೇಡಿಕೆಗಳ ಮನವಿಯನ್ನು ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಲ್ಲಿಸಲಾಗಿದೆ. ಈ ಬೇಡಿಕೆಗಳಿಗೆ ಸಚಿವ ಸಂಪುಟ ಸಭೆಯಲ್ಲಿ ಪೂರಕ ಸ್ಪಂದನೆ ದೊರೆಯುವ ಭರವಸೆ ಇದೆ ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡ ಬಳ್ಳೇರಿ, ಕಡಬ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಸತೀಶ್ ನಾಯಕ್ ಮೇಲಿನಮನೆ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಶ್ರಫ್ ಶೇಡಿಗುಂಡಿ, ಪ್ರಚಾರ ಸಮಿತಿ ಅಧ್ಯಕ್ಷ ಯತೀಶ್ ಕುಮಾರ್ ಬಾನಡ್ಕ, ಕಡಬ ಬ್ಲಾಕ್ ಉಪಾಧ್ಯಕ್ಷ ಎ.ಎಸ್. ಶರೀಫ್, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸತೀಶ್ ಗೌಡ ಮೀನಾಡಿ ಹಾಗೂ ಕಡಬ ಪಟ್ಟಣ ಪಂಚಾಯಿತಿ ಸದಸ್ಯೆ ಶಾಲಿನಿ ಸತೀಶ್ ನಾಯಕ್ ಉಪಸ್ಥಿತರಿದ್ದರು.
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...

72ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಪಂಜ ವಲಯ ಅರಣ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ನೆಲ್ಯಾಡಿ: “ಆವಾಸ ಸ್ಥಾನಗಳ ಜೋಡಣೆ ಹಾಗೂ ವನ್ಯಜೀವಿಗಳ ಅಭಿವೃದ್ಧಿ” ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿರುವ ...
ಉಪ್ಪಿನಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕ್ರೀಡಾಕೂಟ ಹಿರೆಬಂಡಾಡಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಇಂದ್ರಪ್ರಸ್ಥ ...
ಕೊಕ್ಕಡ: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಶಿಶಿಲ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಹೀ ಸೇವಾ ಸಮಾರೋಪ ಸಮಾರಂಭದೊಂದಿಗೆ ವಿಶೇಷ ಗ್ರಾಮ ಸಭೆ ನಡೆಯಿತು. ಪಂಚಾಯತ್ ಆಡಳಿತಾಧಿಕಾರಿ ಭರತ್ ...
ಕೊಕ್ಕಡ: ಸಂತ ಜೋನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ನೂತನ ಯಾಜಕರಾಗಿ ಗುರುದೀಕ್ಷೆ ಸ್ವೀಕರಿಸಿದ ರೆ| ಫಾ| ವಿಲ್ಫ್ರೆಡ್ ಸ್ಟೀವನ್ ರೊಡ್ರಿಗಸ್ ಹಾಗೂ ಡಾಕ್ಟರೇಟ್ ಪದವಿ ಪಡೆದ ಡಾ| ಸೈಮನ್ ...
ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪ ಎಫ್ಐಆರ್ನಲ್ಲಿ ಸೇರಿಸಿಲ್ಲ: ಬಣಕಲ್ ಪೊಲೀಸರ ವಿರುದ್ಧ ಗಾಯಾಳುಗಳ ಆಕ್ರೋಶ ಕೊಕ್ಕಡ: ಮಂತ್ರಾಲಯಕ್ಕೆ ತೆರಳುತ್ತಿದ್ದ ಶಿಶಿಲದ ಸ್ನೇಹಿತರಿದ್ದ ಕಾರಿಗೆ ಎದುರಿನಿಂದ ಬಂದ ...