ನೆಲ್ಯಾಡಿ: ಪ್ರವಾದಿ ಮಹಮ್ಮದ್ ಅವರ 1501ನೇ ಜನ್ಮದಿನದ ಅಂಗವಾಗಿ ನೆಲ್ಯಾಡಿಯ ಅಲ್ ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ‘ಬ್ರೇಜ್ ಆಫ್ ಮದೀನಾ ಮಿಲಾದ್ ಫೆಸ್ಟ್ 2026’ ಕಾರ್ಯಕ್ರಮವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ನಡೆಯಿತು.
ಬೆಳಗ್ಗೆ 8 ಗಂಟೆಗೆ ಮೌಲಿದ್ ಪಾರಾಯಣದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಬದ್ರಿಯಾ ಜುಮಾ ಮಸೀದಿಯ ಖತೀಬ್ ಕಲಂದರ್ ಷಾ ಸಹದಿ ಕಾರ್ಯಕ್ರಮ ಉದ್ಘಾಟಿಸಿ, ಪ್ರವಾದಿ ಮಹಮ್ಮದ್ ಅವರ ಮೇಲಿನ ಪ್ರೀತಿ, ಅವರ ಜೀವನಶೈಲಿ ಹಾಗೂ ಆದರ್ಶಗಳನ್ನು ವಿವರಿಸಿದರು.
ಜಲಾಲಿಯಾ ಮಸೀದಿ ಹೊಸಮಜಲಿನ ಖತೀಬ್ ಶಂಶೀರ್ ಸಖಾಫಿ ಮಾತನಾಡಿ ಅಲ್ ಬದ್ರಿಯಾ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳು ಪ್ರತಿಭಾವಂತರಾಗಿದ್ದು, ತಮ್ಮ ಮದರಸದಲ್ಲಿ ಕಲಿಯುತ್ತಿರುವ ಇತರ ಮಕ್ಕಳೊಂದಿಗೆ ಹೋಲಿಸಿದರೂ ಉತ್ತಮ ಸಾಧನೆ ಮಾಡುತ್ತಿದ್ದಾರೆ ಎಂದು ಶಾಲೆಯ ಶೈಕ್ಷಣಿಕ ಚಟುವಟಿಕೆಗಳನ್ನು ಮೆಚ್ಚಿಕೊಂಡರು.
ಪಡುಬೆಟ್ಟು ಬಿಲಾಲ್ ಜುಮಾ ಮಸೀದಿಯ ಖತೀಬ್ ಮಾತನಾಡಿ ಧಾರ್ಮಿಕ ಹಾಗೂ ಲೌಕಿಕ ಶಿಕ್ಷಣವನ್ನು ಸಮನ್ವಯಗೊಳಿಸಿ ನೀಡುತ್ತಿರುವ ಸಂಸ್ಥೆಗಳಿಗೆ ಪ್ರೋತ್ಸಾಹ ನೀಡಿದರೆ ಮಕ್ಕಳ ಭವಿಷ್ಯ ಉತ್ತಮವಾಗಲಿದೆ. ಧಾರ್ಮಿಕ ಮೌಲ್ಯಗಳೊಂದಿಗೆ ಶಿಕ್ಷಣ ನೀಡುವುದರಿಂದ ಸಮಾಜಕ್ಕೆ ಉತ್ತಮ ಪೀಳಿಗೆಯನ್ನು ರೂಪಿಸಲು ಸಾಧ್ಯ ಎಂದು ಹೇಳಿದರು.
ಎಂ.ಕೆ.ಇಬ್ರಾಹಿಂ ಹಾಗೂ ಶಾಕಿರ್ ಹಕ್, ಎನ್.ಎಸ್.ಸುಲೈಮಾನ್, ನೆಲ್ಯಾಡಿಯ ಬಿ.ಜೆ.ಎಂ. ಅಧ್ಯಕ್ಷ ಇಸ್ಮಾಯಿಲ್ ಎನ್.ಕೆ., ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಲ್ ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲೆಯ ಅಧ್ಯಕ್ಷ ನಾಝೀಂ ಸಾಹೇಬ್ ಅವರು ವಹಿಸಿ ಮಾತನಾಡಿ ಅಲ್ ಬದ್ರಿಯಾ ಶಾಲೆಗೆ ಮಕ್ಕಳನ್ನು ಸೇರಿಸಿ ಅವರಿಗೆ ಉತ್ತಮ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡುವ ಮೂಲಕ ಸಮಾಜಕ್ಕೆ ಉತ್ತಮ ನಾಗರಿಕರನ್ನಾಗಿ ರೂಪಿಸುವಲ್ಲಿ ಪೋಷಕರು ಹಾಗೂ ಶಿಕ್ಷಕರು ಸಹಕರಿಸಬೇಕು ಎಂದು ಕರೆ ನೀಡಿದರು.
ಸಭಾ ಕಾರ್ಯಕ್ರಮದ ಬಳಿಕ ಬಿ.ಜೆ.ಎಂ. ನೆಲ್ಯಾಡಿಯ ಅಧ್ಯಕ್ಷ ಇಸ್ಮಾಯಿಲ್ ಎನ್.ಕೆ. ಅವರು ಸಂಸ್ಥೆಯ ಮುಖ್ಯೋಪಾಧ್ಯಾಯರ ಕಚೇರಿಯನ್ನು ಉದ್ಘಾಟಿಸಿದರು. ಅಲ್ ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲೆಯ ಮುಖ್ಯೋಪಾಧ್ಯಾಯರಾದ ಸೀಮಾ ಡೆನ್ನೀಸ್ ಅವರು ಸಹಶಿಕ್ಷಕರ ಕಚೇರಿಯನ್ನು ಉದ್ಘಾಟಿಸಿದರು. ಶಾಲೆಯ ಆಟದ ಮೈದಾನದಲ್ಲಿ ಮಕ್ಕಳಿಗಾಗಿ ಅಳವಡಿಸಲಾದ ಆಟೋಪಕರಣಗಳನ್ನು ಶಿಹಾಬ್ ತಂಙಳ್ ಉದ್ಘಾಟಿಸಿದರು.
ನಂತರ ನಡೆದ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನವು ಗಮನ ಸೆಳೆಯಿತು. ಮಕ್ಕಳು ವಿವಿಧ ಪ್ರತಿಭೆಗಳನ್ನು ಪ್ರದರ್ಶಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು. ಫಾಯೀಜಾ ಕಾರ್ಯಕ್ರಮದ ನಿರೂಪಣೆ ಮಾಡಿದರು. ಪ್ರತಿಭಾ ಪ್ರದರ್ಶನದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ನೀಡಿ ಪುರಸ್ಕರಿಸಲಾಯಿತು.
ಸಾಹುಲ್ ಹಮೀದ್ ಸಖಾಫಿ ಸ್ವಾಗತಿಸಿದರು, ಅಲ್ ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲೆಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಕೆ.ವಂದಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು, ಸಂಸ್ಥೆಯ ಪದಾಧಿಕಾರಿಗಳು ಹಾಗೂ ಗಣ್ಯರು ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ, ಮಧ್ಯಾಹ್ನ, ಸಂಜೆ ಹಾಗೂ ರಾತ್ರಿ ಊಟ ಮತ್ತು ಪಾನೀಯದ ವ್ಯವಸ್ಥೆಯನ್ನು ಮಾಡಲಾಗಿತ್ತು.
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...