






ನೆಲ್ಯಾಡಿ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ನೆಲ್ಯಾಡಿ ಮಹಾಶಕ್ತಿ ಕೇಂದ್ರದ ವತಿಯಿಂದ ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ಅ.4ರಂದು ನೆಲ್ಯಾಡಿಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ನೆಲ್ಯಾಡಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ಸಭಾಭವನದಲ್ಲಿ ಬೆಳಗ್ಗೆ 9.30ರಿಂದ ರಕ್ತದಾನ ಶಿಬಿರ ನಡೆಯಲಿದೆ. ರಕ್ತದಾನವು ಅತ್ಯಂತ ಮಹತ್ವದ ಸಾಮಾಜಿಕ ಸೇವೆಯಾಗಿದ್ದು, ಅಗತ್ಯ ಸಂದರ್ಭದಲ್ಲಿ ರಕ್ತದ ಕೊರತೆಯಿಂದ ಸಂಕಷ್ಟಕ್ಕೊಳಗಾಗುವ ರೋಗಿಗಳಿಗೆ ನೆರವಾಗುವ ಉದ್ದೇಶದಿಂದ ಶಿಬಿರವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡುವ ಮೂಲಕ ಮಾನವೀಯ ಸೇವೆಯಲ್ಲಿ ಕೈಜೋಡಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.
ಶಿಬಿರವನ್ನು ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಉದ್ಘಾಟಿಸಲಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಉಪಸ್ಥಿತರಿರುವರು. ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷ ವೆಂಕಟ್ ವಳಲಂಬೆ ಅಧ್ಯಕ್ಷತೆ ವಹಿಸಲಿದ್ದಾರೆ.
ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್, ಪುತ್ತೂರು ಇವರ ಸಹಯೋಗದಲ್ಲಿ ಶಿಬಿರ ನಡೆಯಲಿದ್ದು, ಸುಳ್ಯ ಮಂಡಲ ಸಮಿತಿ, ಮಂಡಲದ ವಿವಿಧ ಮೋರ್ಚಾಗಳು, ನೆಲ್ಯಾಡಿ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಭೂ ಅಭಿವೃದ್ಧಿ ಬ್ಯಾಂಕ್, ಪುತ್ತೂರು ಸೇರಿದಂತೆ ವಿವಿಧ ಸಂಸ್ಥೆಗಳು ಸಹಕಾರ ನೀಡಲಿವೆ.
‘ಸೇವಾ ಸಂಕಲ್ಪ ಅಭಿಯಾನ’ದ ಎಂಬ ಸಂದೇಶದೊಂದಿಗೆ ನಡೆಯಲಿರುವ ಈ ಶಿಬಿರದಲ್ಲಿ ಯುವಕರು, ಸಾರ್ವಜನಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ರಕ್ತದಾನ ಮಾಡುವಂತೆ ಆಯೋಜಕರು ಕರೆ ನೀಡಿದ್ದಾರೆ.








































































































