






ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕು, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಗೋಳಿತ್ತೊಟ್ಟು ವಲಯ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಸಹಯೋಗದಲ್ಲಿ ಪರಮಪೂಜ್ಯ ಪದ್ಮವಿಭೂಷಣ ರಾಜರ್ಷಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಅ.11ರಂದು ಬೆಳಿಗ್ಗೆ ಗೋಳಿತ್ತೊಟ್ಟು ಶ್ರೀ ಸಿದ್ಧಿವಿನಾಯಕ ಕಲಾ ಮಂದಿರದಲ್ಲಿ ನಡೆಯಲಿದೆ.
ಬೆಳಿಗ್ಗೆ 8 ಗಂಟೆಗೆ ಶ್ರೀ ಸತ್ಯನಾರಾಯಣ ಪೂಜೆ ಆರಂಭಗೊಳ್ಳಲಿದೆ. 10.30ಕ್ಕೆ ಸಭಾ ಕಾರ್ಯಕ್ರಮ ಆರಂಭಗೊಳ್ಳಲಿದ್ದು ಗೋಳಿತ್ತೊಟ್ಟು ವಲಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ವಲಯಾಧ್ಯಕ್ಷ ಬಾಲಕೃಷ್ಣ ಅಲೆಕ್ಕಿ ಅಧ್ಯಕ್ಷತೆ ವಹಿಸಲಿದ್ದಾರೆ. ಸುಳ್ಯ ಶಾಸಕಿ ಕು| ಭಾಗೀರಥಿ ಮುರುಳ್ಯ ಉದ್ಘಾಟಿಸಲಿದ್ದಾರೆ. ಶ್ರೀ ಕ್ಷೇ.ಧ.ಗ್ರಾ.ಯೋಜನೆ ದ.ಕ.ಜಿಲ್ಲೆ ನಿರ್ದೇಶಕರಾದ ಬಾಬು ನಾಯ್ಕ್ ಜವಾಬ್ದಾರಿ ಹಸ್ತಾಂತರ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಪ್ಪಿನಂಗಡಿ ಪೊಲೀಸ್ ಠಾಣೆ ಪೊಲೀಸ್ ಉಪನಿರೀಕ್ಷಕ ಸುತೇಶ್ ಕೆ.ಪಿ., ಗೋಳಿತ್ತೊಟ್ಟು ಗ್ರಾ.ಪಂ.ಪಿಡಿಒ ಲಲಿತಾ ಜಿ.ಡಿ., ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಸದಸ್ಯ ಅಜಿತ್‍ಕುಮಾರ್ ಪಾಲೇರಿ, ಗೋಳಿತ್ತೊಟ್ಟು ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಅಧ್ಯಕ್ಷ ನಾಗೇಶ ಶೆಟ್ಟಿ ಸಮರಗುಂಡಿ, ಶ್ರೀ ಕ್ಷೇ.ಧ.ಗ್ರಾ.ಯೋ.ಕೇಂದ್ರ ಒಕ್ಕೂಟ ಕಡಬ ತಾಲೂಕು ಇದರ ಅಧ್ಯಕ್ಷ ಸಂತೋಷ್‍ಕುಮಾರ್ ಬಿಳಿನೆಲೆ ಭಾಗವಹಿಸಲಿದ್ದಾರೆ. ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಕುಶಾಲಪ್ಪ ಗೌಡ ಅನಿಲ, ಗೋಳಿತ್ತೊಟ್ಟು ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ನೋಣಯ್ಯ ಪೂಜಾರಿ ಅಂಬರ್ಜೆ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಮಹೇಶ್ ಪಿ., ಗೋಳಿತ್ತೊಟ್ಟು ವಲಯ ಭಜನಾ ಪರಿಷತ್ ಅಧ್ಯಕ್ಷ ಲಿತಿನ್ ಕುಮಾರ್, ಗೋಳಿತ್ತೊಟ್ಟು ವಲಯ ಶೌರ್ಯ ವಿಪತ್ತು ಘಟಕದ ಅಧ್ಯಕ್ಷ ಜನಾರ್ದನ ಪೂಜಾರಿ ಉಪಸ್ಥಿತರಿರುವರು. ಮಧ್ಯಾಹ್ನ 1 ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.








































































































