ಒತ್ತಡದ ಬದುಕಿನಲ್ಲಿ ಕ್ರೀಡೆ ಮಾನಸಿಕ ಮತ್ತು ದೈಹಿಕ ಉಲ್ಲಾಸಕ್ಕೆ ಪೂರಕ: ಯೋಜನಾಧಿಕಾರಿ ಪ್ರಕಾಶ್ ಕುಮಾರ್
ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಡಬ ತಾಲೂಕು, ನೆಲ್ಯಾಡಿ ವಲಯದ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ನೆಲ್ಯಾಡಿ ವಲಯದ ಸಂಯುಕ್ತ ಆಶ್ರಯದಲ್ಲಿ ವಲಯದ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮತ್ತು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಪದಗ್ರಹಣದ ಪ್ರಯುಕ್ತ ಶುಕ್ರವಾರ ನೆಲ್ಯಾಡಿಯ ಗಾಂಧಿ ಮೈದಾನದಲ್ಲಿ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ನೆಲ್ಯಾಡಿ ವಲಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ವಲಯಾಧ್ಯಕ್ಷ ಕುಶಾಲಪ್ಪ ಗೌಡ ಪಿ.ಎನ್. ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು ನೆಲ್ಯಾಡಿ ವಲಯದಲ್ಲಿ ಸುಮಾರು 2,500ಕ್ಕೂ ಅಧಿಕ ಮಂದಿ ಸದಸ್ಯರಿದ್ದಾರೆ. ಪದಗ್ರಹಣದ ಪ್ರಯುಕ್ತ ಸಂಘದ ಸದಸ್ಯರಲ್ಲಿ ಪರಸ್ಪರ ಬಾಂಧವ್ಯ ಬೆಳೆಸುವ ಹಾಗೂ ಕ್ರೀಡಾಸಕ್ತಿಯನ್ನು ಉತ್ತೇಜಿಸುವ ಉದ್ದೇಶದಿಂದ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಇಡೀ ದೇಶದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸ್ವಸಹಾಯ ಸಂಘಗಳ ಪೈಕಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘಗಳು ಪ್ರಮುಖ ಸ್ಥಾನ ಪಡೆದಿವೆ. ಸಂಘಗಳ ಮೂಲಕ ಸದಸ್ಯರ ಆರ್ಥಿಕ ಪ್ರಗತಿಯ ಜತೆಗೆ ಸಾಮಾಜಿಕ ಮತ್ತು ವೈಯಕ್ತಿಕ ಬೆಳವಣಿಗೆಗೂ ಪ್ರೋತ್ಸಾಹ ದೊರೆಯುತ್ತಿದೆ ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಮಾತನಾಡಿ ಇಂದಿನ ದಿನಗಳಲ್ಲಿ ಮನುಷ್ಯರಿಗೆ 24 ಗಂಟೆಗಳ ಸಮಯವಿದ್ದರೂ ಕೆಲಸಗಳು ಮುಗಿಯುವುದಿಲ್ಲ. ಉದ್ಯೋಗ, ಕುಟುಂಬದ ಜವಾಬ್ದಾರಿ ಹಾಗೂ ದಿನನಿತ್ಯದ ಕಾರ್ಯಗಳ ಒತ್ತಡದ ನಡುವೆ ಮಾನಸಿಕ ನೆಮ್ಮದಿಯನ್ನು ಕಾಪಾಡಿಕೊಳ್ಳುವುದು ಅತ್ಯಗತ್ಯ. ಸಂಘದ ಸದಸ್ಯರಲ್ಲಿ ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವವರಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಅವಕಾಶ ಕಲ್ಪಿಸುವುದರ ಜತೆಗೆ ಅವರಲ್ಲಿ ಉತ್ಸಾಹ ಮೂಡಿಸುವ ಉದ್ದೇಶದಿಂದ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಆರೋಗ್ಯ ವೃದ್ಧಿಸುವುದರ ಜತೆಗೆ ಮಾನಸಿಕ ಉಲ್ಲಾಸವೂ ದೊರೆಯುತ್ತದೆ. ಸದಸ್ಯರು ದೈನಂದಿನ ಒತ್ತಡಗಳನ್ನು ಮರೆತು ಪರಸ್ಪರ ಬೆರೆಯಲು ಇಂತಹ ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗಿವೆ ಎಂದು ಹೇಳಿದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ನ ಕಡಬ ತಾಲೂಕು ಸದಸ್ಯ ತುಕಾರಾಮ ರೈ ಹಾಗೂ ಅಂತರರಾಜ್ಯ ಕ್ರೀಡಾ ನಿರೂಪಕ ಸುರೇಶ್ ಪಡಿಪಂಡ ಅವರು ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ನೆಲ್ಯಾಡಿ ವಲಯಾಧ್ಯಕ್ಷೆ ಸುಪ್ರೀತಾ ರವಿಚಂದ್ರ, ಕಡಬ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಕ್ಯಾಪ್ಟನ್ ರಮೇಶ್ ಬಾಣಜಾಲು, ಪಡುಬೆಟ್ಟು ಒಕ್ಕೂಟದ ಅಧ್ಯಕ್ಷ ಜಾನ್ ಮೊಂತೇರೋ, ಶಿರಾಡಿ ಒಕ್ಕೂಟದ ಅಧ್ಯಕ್ಷ ಸುಕುಮಾರ್ ಕೆ.ಆರ್., ಅಡ್ಡಹೊಳೆ ಒಕ್ಕೂಟದ ಅಧ್ಯಕ್ಷ ಸಣ್ಣಿ ಪಿ.ಎಸ್., ಮಾದೇರಿ ಒಕ್ಕೂಟದ ಅಧ್ಯಕ್ಷ ಸೆಬಾಸ್ಟಿಯನ್ ಪಿ.ಜೆ., ನೆಲ್ಯಾಡಿ ಒಕ್ಕೂಟದ ಅಧ್ಯಕ್ಷೆ ಸುಮಿತ್ರ, ಕೌಕ್ರಾಡಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ ಹಾಗೂ ಕಟ್ಟೆಮಜಲು ಒಕ್ಕೂಟದ ಅಧ್ಯಕ್ಷ ಮಾರ್ಸಲ್ ಡಿ’ಸೋಜಾ ಉಪಸ್ಥಿತರಿದ್ದರು.
ಸೇವಾ ಪ್ರತಿನಿಧಿಗಳಾದ ನಮಿತಾ ಎಸ್. ಶೆಟ್ಟಿ, ಹೇಮಾವತಿ ಜೆ., ವೇದಾ ಪಿ., ಮೋಹಿನಿ, ಸುಮನ ಎಸ್., ಪ್ರಿಯಲತಾ, ಸಂತೋಷ್ ಹಾಗೂ ಸುನಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಸೇವಾ ಪ್ರತಿನಿಧಿ ನಮಿತಾ ಶೆಟ್ಟಿ ಪ್ರಾರ್ಥಿಸಿದರು. ನೆಲ್ಯಾಡಿ ಒಕ್ಕೂಟದ ನಿಯೋಜಿತ ಅಧ್ಯಕ್ಷ ನಾರಾಯಣ ಹೆಗ್ಡೆ ಸ್ವಾಗತಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ನೆಲ್ಯಾಡಿ ವಲಯದ ಮೇಲ್ವಿಚಾರಕಿ ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಮಾದೇರಿ ಒಕ್ಕೂಟದ ಅಧ್ಯಕ್ಷ ಸೆಬಾಸ್ಟಿಯನ್ ಪಿ.ಜೆ. ವಂದಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಸ್ವಸಹಾಯ ಸಂಘಗಳ ಒಕ್ಕೂಟದ ಸದಸ್ಯ ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕವಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ಅಂತರರಾಜ್ಯ ಕ್ರೀಡಾ ನಿರೂಪಕ ಸುರೇಶ್ ಪಡಿಪಂಡ ಅವರು ಸ್ಪರ್ಧೆಗಳ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು, ಶಿಕ್ಷಕಿ ನ್ಯಾನ್ಸಿ ಸಹಕರಿಸಿದರು. ಸದಸ್ಯರು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಂಡರು.
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
72ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಪಂಜ ವಲಯ ಅರಣ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ನೆಲ್ಯಾಡಿ: “ಆವಾಸ ಸ್ಥಾನಗಳ ಜೋಡಣೆ ಹಾಗೂ ವನ್ಯಜೀವಿಗಳ ಅಭಿವೃದ್ಧಿ” ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿರುವ ...
ಉಪ್ಪಿನಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕ್ರೀಡಾಕೂಟ ಹಿರೆಬಂಡಾಡಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಇಂದ್ರಪ್ರಸ್ಥ ...
ಕೊಕ್ಕಡ: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಶಿಶಿಲ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಹೀ ಸೇವಾ ಸಮಾರೋಪ ಸಮಾರಂಭದೊಂದಿಗೆ ವಿಶೇಷ ಗ್ರಾಮ ಸಭೆ ನಡೆಯಿತು. ಪಂಚಾಯತ್ ಆಡಳಿತಾಧಿಕಾರಿ ಭರತ್ ...
ಕೊಕ್ಕಡ: ಸಂತ ಜೋನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ನೂತನ ಯಾಜಕರಾಗಿ ಗುರುದೀಕ್ಷೆ ಸ್ವೀಕರಿಸಿದ ರೆ| ಫಾ| ವಿಲ್ಫ್ರೆಡ್ ಸ್ಟೀವನ್ ರೊಡ್ರಿಗಸ್ ಹಾಗೂ ಡಾಕ್ಟರೇಟ್ ಪದವಿ ಪಡೆದ ಡಾ| ಸೈಮನ್ ...
ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪ ಎಫ್ಐಆರ್ನಲ್ಲಿ ಸೇರಿಸಿಲ್ಲ: ಬಣಕಲ್ ಪೊಲೀಸರ ವಿರುದ್ಧ ಗಾಯಾಳುಗಳ ಆಕ್ರೋಶ ಕೊಕ್ಕಡ: ಮಂತ್ರಾಲಯಕ್ಕೆ ತೆರಳುತ್ತಿದ್ದ ಶಿಶಿಲದ ಸ್ನೇಹಿತರಿದ್ದ ಕಾರಿಗೆ ಎದುರಿನಿಂದ ಬಂದ ...
ಅರಸಿನಮಕ್ಕಿ: ಮಹಾತ್ಮಗಾಂಧಿ ಜಯಂತಿಯ ಅಂಗವಾಗಿ ಅರಸಿನಮಕ್ಕಿ ಗ್ರಾಮ ಪಂಚಾಯಿತಿ ವತಿಯಿಂದ ಗಾಂಧಿ ಜಯಂತಿ ಆಚರಣೆ ಹಾಗೂ ‘ಸ್ವಚ್ಛತಾ ಹೀ ಸೇವಾ’ ಅಭಿಯಾನದ ಸಮಾರೋಪ ಸಮಾರಂಭ ನಡೆಯಿತು. ಇದೇ ...
ನೆಲ್ಯಾಡಿ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ನೆಲ್ಯಾಡಿ ಮಹಾಶಕ್ತಿ ಕೇಂದ್ರದ ವತಿಯಿಂದ ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ಅ.4ರಂದು ನೆಲ್ಯಾಡಿಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ನೆಲ್ಯಾಡಿಯ ...
ನೆಲ್ಯಾಡಿ: ಕಡಬ ತಾಲೂಕಿನ ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಅನಿಲ ಸಮೀಪ ಶುಕ್ರವಾರ ಸಂಜೆ ಚಲಿಸುತ್ತಿದ್ದ ಕಾರಿಗೆ ಕಡವೆಯೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸುಬ್ರಹ್ಮಣ್ಯದಿಂದ ...
ನೆಲ್ಯಾಡಿ: ನೆಲ್ಯಾಡಿಯ ಲೈಫ್ ಫಾರ್ಮಾ ಸಂಸ್ಥೆಯಲ್ಲಿ ಔಷಧ ವಿತರಣೆ ಹಾಗೂ ಕಂಪ್ಯೂಟರ್ ಬಿಲ್ಲಿಂಗ್ ಕೆಲಸ ನಿರ್ವಹಿಸಲು ಸಿಬ್ಬಂದಿ ತುರ್ತಾಗಿ ಅಗತ್ಯವಿದ್ದಾರೆ. ಅಭ್ಯರ್ಥಿಗಳು ಎಸ್ಎಸ್ಎಲ್ಸಿ, ಪಿಯುಸಿ ಅಥವಾ ಯಾವುದೇ ...
ಶಿರಾಡಿ: ಕಡಬ ತಾಲೂಕು ಶಿರಾಡಿ ಗ್ರಾಮದ ಎಸ್.ಆರ್.ಎಸ್. ಪೆಟ್ರೋಲ್ ಪಂಪ್ ಸಮೀಪ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಬೊಲೆರೋ ಪಿಕ್ಅಪ್ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ...
ಕೊಕ್ಕಡ: ನಿಡ್ಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ 2026-27ನೇ ಸಾಲಿನ ಕೊಕ್ಕಡ, ನಿಡ್ಲೆ ಹಾಗೂ ಪೆರ್ಲ ಕ್ಲಸ್ಟರ್ಗಳ ವಲಯ ಮಟ್ಟದ 14ರ ವಯೋಮಾನದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಶಿಶಿಲದ ಮಹರ್ಷಿ ...
ಕೊಕ್ಕಡ: ನಾಲ್ಕು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ಮೂಲಕ ಪೂರ್ಣ ಪ್ರಮಾಣದ ಪ್ರಯತ್ನ ನಡೆಸಲಾಗುವುದು ಎಂದು ಮಂಗಳೂರು ಲೋಕಸಭಾ ...
ನೆಲ್ಯಾಡಿ: ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ನಾಟೆಕಲ್–ಮಂಗಳೂರು ಹಾಗೂ ಬದ್ರಿಯಾ ಜುಮಾ ಮಸೀದಿ ನೆಲ್ಯಾಡಿಯ ಅಧೀನ ಸಂಸ್ಥೆಯಾದ ನುಸ್ರತುಲ್ ಮಸಾಕೀನ್ ಯಂಗ್ ಮೆನ್ಸ್ ...
ಕಡಬ: ಪೊಲೀಸ್ ಇಲಾಖೆಯ ಸಿವಿಲ್ ಪರೀಕ್ಷೆ ಕಾನ್ಸ್ಟೇಬಲ್ ನೇಮಕಾತಿಯ ದೈಹಿಕ ಪರೀಕ್ಷೆಗೆ ಹಾಜರಾಗಲು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ದುರ್ಬಳಕೆ ಮಾಡಿಕೊಂಡು ನಕಲಿ ಪ್ರವೇಶ ಪತ್ರ ಸೃಷ್ಟಿಸಿ ವಂಚಿಸಲು ...
ನೆಲ್ಯಾಡಿ: ಉದನೆ ಸಮೀಪದ ನೆಲ್ಯಡ್ಕ ನಿವಾಸಿ ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರಿ ಜನರಲ್ ಆಗಿ ಸೇವೆ ಸಲ್ಲಿಸುತ್ತಿದ್ದ ವಂ.ಡಾ.ಮಾಣಿ ವೆಳುತ್ತೇಡತ್ತುಪರಂಬಿಲ್(64) ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರದಂದು ನಿಧನರಾದರು. ಧರ್ಮಗುರುಗಳಾಗಿ, ...
ನೆಲ್ಯಾಡಿ: ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಅಟೋರಿಕ್ಷಾ ಚಲಾಯಿಸಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಕಡಬ ತಾಲೂಕು ಶಿರಿಬಾಗಿಲು ಗ್ರಾಮದ ದೇರಣೆ ಎಂಬಲ್ಲಿ ಭಾನುವಾರದಂದು ...
ನೆಲ್ಯಾಡಿ: ಸರ್ ಪ್ರಕ್ರಿಯೆಯ ಸಂದರ್ಭದಲ್ಲಿ ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ನಿಮಿತ್ತ ವಿದೇಶ ಹಾಗೂ ಬೆಂಗಳೂರಿನಲ್ಲಿ ತಾತ್ಕಾಲಿಕವಾಗಿ ವಾಸಿಸುತ್ತಿರುವ ಸ್ಥಳೀಯ ನಿವಾಸಿಗಳ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ...
ಕೊಕ್ಕಡ: ಹಲವು ವರ್ಷಗಳಿಂದ ಗ್ರಾಮಸ್ಥರ ಬೇಡಿಕೆಯಾಗಿರುವ ಶಿಶಿಲ-ಬೈರಾಪುರ ಅಂತರ ಜಿಲ್ಲಾ ಗ್ರಾಮೀಣ ರಸ್ತೆಯನ್ನು ಹಸಿರು ಮಾದರಿ ರಸ್ತೆಯಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮಂಗಳವಾರ ಸ್ಥಳ ಪರಿಶೀಲನೆ ನಡೆಯಿತು. ಪ್ರಧಾನಮಂತ್ರಿ ...
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪತ್ರಡ್ಕದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ...
ನೆಲ್ಯಾಡಿ: ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಸಮಾಜ ಸೇವಕ ಹಾಗೂ ಯಕ್ಷಗಾನ ಸಂಘಟಕ, ನೆಲ್ಯಾಡಿ ಕೆಳಗಿನಪರಾರಿ ನಿವಾಸಿ ದಿ.ಜಯಾನಂದ ಬಂಟ್ರಿಯಾಲ್ ಅವರಿಗೆ ಯಕ್ಷಗಾನ ತಾಳಮದ್ದಳೆಯ ಮೂಲಕ ನುಡಿನಮನ ...
ಕಳೆಂಜ: ಗ್ರಾಮದ ಶಾಲೆತ್ತಡ್ಕ ಎಂಬಲ್ಲಿ ಕೇಂದ್ರ ಸರಕಾರದ ಅನುದಾನದಡಿಯಲ್ಲಿ ಸುಮಾರು ರೂ. 65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಆಯುಷ್ಮಾನ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡದ ಶಿಲಾನ್ಯಾಸ ...
ಶಿಶಿಲ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ ವತಿಯಿಂದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಶಿಶಿಲದಲ್ಲಿ ...
ಉಜಿರೆ: ಮೌಲ್ಯ ನಾಯಕ್ ಅವರು ದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯವು ಆಯೋಜಿಸಿದ್ದ ಭಾರತೀಯ ಜ್ಞಾನ ಪರಂಪರೆ (ಇಂಡಿಯನ್ ನಾಲೆಡ್ಜ್ ಸಿಸ್ಟಮ್ ) ಸಂಸ್ಕೃತ ಒಲಂಪಿಯಾಡ್ನಲ್ಲಿ ಸ್ವರ್ಣ ಪದಕ ...
ಕೊಕ್ಕಡ: ನಾಡಿನ ಪ್ರಸಿದ್ಧ ಬಯಲು ಗಣಪತಿ ಕ್ಷೇತ್ರವಾಗಿರುವ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ...
ಕಡಬ: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ಬಯೋ ಮೆಡಿಕಲ್ ಎಂಜಿನಿಯರಿಂಗ್ ಅಂತಿಮ ಪರೀಕ್ಷೆಯಲ್ಲಿ ಬೆಂಗಳೂರಿನ ಡಾ| ಎಸಿಎಸ್ ಇಂಜಿನಿಯರಿಂಗ್ ಕಾಲೇಜಿನ (2022-26 ಬ್ಯಾಚ್) ವಿದ್ಯಾರ್ಥಿ ಕಡಬದ ...
ನೇಲ್ಯಡ್ಕ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳ್ತಂಗಡಿ ಹಾಗೂ ರೆಖ್ಯಾ-ನೇಲ್ಯಡ್ಕ ಅಂಗನವಾಡಿ ಕೇಂದ್ರದ ವತಿಯಿಂದ ಸುಮಾರು 36 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಅಂಗನವಾಡಿ ...
ರಾಮಕುಂಜ: ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕು. ರಕ್ಷಾ ಡಿ. ಅವರು 30 ನಿಮಿಷದಲ್ಲಿ ಕೈಗಳನ್ನು ಸೊಂಟದಲ್ಲಿ ಜೊತೆಯಾಗಿ ಹಿಡಿದು ಮುಂದಕ್ಕೆ ಹಾಗೂ ...
ಉಜಿರೆ: ಶಿಕ್ಷಣ ಮತ್ತು ಆರೋಗ್ಯ ಎಲ್ಲರಿಗೂ ಸಿಗುವುದೇ ಸರಕಾರದ ಆಶಯ. ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕಾಣುತ್ತಿದೆ. ನಾಡಿನ ಬೆಳಕಾಗುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಎಲ್ಲ ಶಿಕ್ಷಕರಿಗೆ ...
ನೂಜಿಬಾಳ್ತಿಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಡಬ ವಲಯದ ನೂಜಿಬಾಳ್ತಿಲ ನವಚೇತನ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಸಮಾರಂಭವು ನೂಜಿಬಾಳ್ತಿಲ ಗ್ರಾಮ ...
ಬಜತ್ತೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೈಕ್ವೊಂದು ಟ್ಯಾಂಕರ್ಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೆ.25ರ ರಾತ್ರಿ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ...
ಸೆ.29ರಂದು ಶಿಶಿಲ ವಾಲ್ಮೀಕಿ ಆಶ್ರಮ ಶಾಲೆ ಕಟ್ಟಡ ಉದ್ಘಾಟನೆ ವಿದ್ಯುತ್ ಕೈಕೊಟ್ಟರೆ ವಿದ್ಯಾರ್ಥಿಗಳಿಗೆ ಮಂದ ಬೆಳಕಿನಲ್ಲೇ ಪಾಠ ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಆದಿವಾಸಿ ಹಾಗೂ ಪರಿಶಿಷ್ಟ ಪಂಗಡ ...
ಬಂಟ್ವಾಳ: ತಲವಾರು ಹಾಗೂ ಕಬ್ಬಿಣದ ರಾಡ್ನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ತೀವ್ರವಾಗಿ ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ತೆಂಕಬೆಳ್ಳೂರು ...
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥಗೊಂಡ ಬಳಿಕ ನೆಲ್ಯಾಡಿ ಬಸ್ ನಿಲ್ದಾಣಕ್ಕೆ ಎಕ್ಸ್ಪ್ರೆಸ್ ಬಸ್ಗಳು ಪ್ರವೇಶಿಸದೆ ಓವರ್ಬ್ರಿಡ್ಜ್ ಮೂಲಕ ನೇರವಾಗಿ ಸಂಚರಿಸುತ್ತಿರುವುದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಎಕ್ಸ್ಪ್ರೆಸ್ ಹಾಗೂ ಸರ್ವಿಸ್ ...
ಬಂಟ್ವಾಳ: ತಾಲೂಕಿನ ತುಂಬೆ ಗ್ರಾಮದ ಕೆಳಗಿನ ತುಂಬೆ ಎಂಬಲ್ಲಿ ನದಿ ಕಿನಾರೆಯಿಂದ ಅಕ್ರಮವಾಗಿ ಮರಳು ತೆಗೆದು ಟಿಪ್ಪರ್ ಲಾರಿಗಳಿಗೆ ತುಂಬಿಸುತ್ತಿದ್ದ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಸೆ.25ರಂದು ...
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನೆಲ್ಯಾಡಿಯ ಸೇಂಟ್ ಜಾರ್ಜ್ ಹಾಗೂ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಗಳ ನಡುವೆ ಯು-ಟರ್ನ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ನಡೆದ ಹೋರಾಟದ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ...
ಕೊಕ್ಕಡ: ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗಾಗಿ ನಡೆಯುತ್ತಿರುವ ಹೋರಾಟವನ್ನು ಮುಂದುವರಿಸುವ ನಿಟ್ಟಿನಲ್ಲಿ ಶಿಶಿಲ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಶಿಶಿಲ–ಬೈರಾಪುರ ರಸ್ತೆ ಹೋರಾಟ ಸಮಿತಿಯ ಸಭೆ ಗುರುವಾರ ನಡೆಯಿತು. ಸಭೆಯಲ್ಲಿ ...
ನೆಲ್ಯಾಡಿ: ವಳಯಿಲ್ ನಿವಾಸಿ, ದಿ. ವಿ.ಟಿ. ಜೋಸೆಫ್ ಅವರ ಪತ್ನಿ ಚಿನ್ನಮ್ಮ (56) ಅವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ. 24ರಂದು ನಿಧನರಾದರು. ಮೃತರು ...
ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್–ಅಶ್ವಿನಿ ಆಸ್ಪತ್ರೆ ಸಹಯೋಗದಲ್ಲಿ ತಜ್ಞ ವೈದ್ಯರಿಂದ ತಪಾಸಣೆ ಹಾಗೂ ಸಲಹೆ ನೆಲ್ಯಾಡಿ: ಮಂಗಳೂರಿನ ಪ್ರತಿಷ್ಠಿತ ಬಂಜೆತನ ನಿವಾರಣಾ ಸಂಸ್ಥೆಯಾದ ಬಿರ್ಲಾ ಫರ್ಟಿಲಿಟಿ ಮತ್ತು ...
ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಜಿಲ್ಲಾ ಹಾಗೂ ತಾಲೂಕು ಮಹಿಳಾ ಒಕ್ಕೂಟಗಳ ಸದಸ್ಯರಿಗೆ ಲಿಂಗ ಸಮಾನತಾ ಕುರಿತು ಸಾಮರ್ಥ್ಯ ವರ್ಧನಾ ತರಬೇತಿ ಕಾರ್ಯಕ್ರಮ ಬೆಳ್ತಂಗಡಿಯ ಸಾನ್ತೋಮ್ ...
ವಿಕಾಸ ಸೌಧದಲ್ಲಿ ಕರ್ನಾಟಕ ರಾಜ್ಯದ ಮಾಜಿ ಸೈನಿಕರ ಸಂಘದ ಪ್ರತಿನಿಧಿಗಳೊಂದಿಗೆ ಗೃಹ ಸಚಿವ ಪ್ರಿಯಾಂಕ ಖರ್ಗೆ ಸಭೆ; ಭೂಮಿ, ಮೀಸಲಾತಿ, ಉದ್ಯೋಗ, ನಿವೇಶನ ಸೇರಿದಂತೆ ವಿವಿಧ ಬೇಡಿಕೆಗಳ ...
ಶಿಶಿಲ: ಗ್ರಾಮದ ಗುಂಡಿಕ್ಕಾಡು ನಿವಾಸಿ ತನಿಯಪ್ಪ ಗೌಡ ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೆ.23ರಂದು ಬೆಳಕಿಗೆ ಬಂದಿದೆ. ಕೆಲ ದಿನಗಳ ಹಿಂದಷ್ಟೇ ಅವರ ...
ನೆಲ್ಯಾಡಿ: ಗ್ರಾಮದ ತೋಟದಮನೆ ನಿವಾಸಿ, ನಿವೃತ್ತ ಉಪತಹಶೀಲ್ದಾರ್ ಹಾಗೂ ನೆಲ್ಯಾಡಿ ವಲಯ ಬಂಟರ ಸಂಘದ ಸ್ಥಾಪಕ ಕಾರ್ಯದರ್ಶಿ ಗುಡ್ಡಪ್ಪ ಶೆಟ್ಟಿ(68) ಅವರು ಸೆ. 23ರಂದು ಮುಂಜಾನೆ ಸ್ವಗೃಹದಲ್ಲಿ ...
ನೆಲ್ಯಾಡಿ: ಕಸ್ತೂರಿ ರಂಗನ್ ವರದಿ ಕುರಿತಂತೆ ಗ್ರಾಮಸ್ಥರ ಸಲಹೆ, ಸೂಚನೆ, ಅಭಿಪ್ರಾಯ ಸಂಗ್ರಹಕ್ಕೆ ಸಂಬಂಧಿಸಿ ಗೋಳಿತ್ತೊಟ್ಟು ಗ್ರಾ.ಪಂ.ನ ವಿಶೇಷ ಗ್ರಾಮಸಭೆ ಸೆ.22ರಂದು ಬೆಳಗ್ಗೆ ಗ್ರಾ.ಪಂ.ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ...
ಸರಕಾರಿ ಶಾಲೆಗಳ ಉಳಿವಿಗೆ ಸಮುದಾಯದ ಸಹಕಾರ ಅಗತ್ಯ:ಬೆಳ್ಳಿಪ್ಪಾಡಿ ರಾಜೇಂದ್ರ ರೈ ಕಡಬ: ಕಡಬ ತಾಲೂಕಿನ ಮರ್ದಾಳದ ಪಾಲೆತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬ್ಯಾಂಕ್ ಆಫ್ ಬರೋಡ ...
ನೆಲ್ಯಾಡಿ: ನಿವೃತ್ತ ಅರಣ್ಯ ರಕ್ಷಕ ಶೀನಪ್ಪ ಗೌಡ(64ವ.)ರವರು ಅಲ್ಪಕಾಲದ ಅನಾರೋಗ್ಯದಿಂದ ಸೆ.22ರಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು. ಮೂಲತ: ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮದ ಕುದ್ಕೋಳಿ ...
ಪಠ್ಯದ ಜೊತೆಗೆ ಕೃಷಿಯ ಬಗ್ಗೆ ಕಲಿಕೆಯೂ ಅಗತ್ಯ: ಬೆಳ್ಳಿಪ್ಪಾಡಿ ರಾಜೇಂದ್ರ ರೈ ಕಡಬ: ಶಿಕ್ಷಣದ ಜೊತೆಗೆ ಮಕ್ಕಳಿಗೆ ಕೃಷಿ ಸಂಸ್ಕೃತಿಯತ್ತ ಒಲವು ಮೂಡಿಸುವ ಕಾರ್ಯಕ್ರಮಗಳು ನಡೆಯಬೇಕು. ಗ್ರಾಮೀಣ ...
ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಅಪಘಾತ; ಮಂಗಳೂರು ಆಸ್ಪತ್ರೆಗೆ ದಾಖಲು ನೆಲ್ಯಾಡಿ: ಕಡಬ ತಾಲೂಕಿನ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಬೈಕ್ವೊಂದು ನಿಯಂತ್ರಣ ...