ನೆಲ್ಯಾಡಿ: ದಕ್ಷಿಣ ಕನ್ನಡ ಹಾಲು ಒಕ್ಕೂಟ ಮಂಗಳೂರು ಹಾಗೂ ರಾಮನಗರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ರಾಸುಗಳಲ್ಲಿ ಉಣುಗು ನಿರ್ಮೂಲನಾ ಕಾರ್ಯಕ್ರಮವು ಸಂಘದ ವಠಾರದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಕೊಡವೂರು ಅವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ರಾಮನಗರ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘವು ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಮಹಿಳೆಯರ ನೇತೃತ್ವದಲ್ಲಿ ಸಂಘವು ಅಚ್ಚುಕಟ್ಟಾಗಿ ಮುನ್ನಡೆಯುತ್ತಿರುವುದು ಶ್ಲಾಘನೀಯ. ಕಷ್ಟಪಟ್ಟು ದುಡಿಯುವುದೇ ಸ್ವಾವಲಂಬಿ ಬದುಕಿಗೆ ತಳಪಾಯವಾಗಿದೆ. ಹೈನುಗಾರರ ಹಿತದೃಷ್ಟಿಯಿಂದ ಸರಕಾರ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 7 ರೂ. ಹೆಚ್ಚಿಸಿದೆ. ರೈತರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸಂಸ್ಕಾರಯುತರನ್ನಾಗಿ ಬೆಳೆಸಬೇಕು. ಉಣುಗು ನಿರ್ಮೂಲನಾ ಕಾರ್ಯಕ್ರಮದ ಸಂಪೂರ್ಣ ಪ್ರಯೋಜನವನ್ನು ಹೈನುಗಾರರು ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದಕ್ಷಿಣ ಕನ್ನಡ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ರಂಗಸ್ವಾಮಿ ಪಿ.ಎಚ್. ಮಾತನಾಡಿ ರೈತರು ಉತ್ಪಾದಿಸುವ ಹಾಲಿಗೆ ಸರಕಾರ ಉತ್ತಮ ದರ ನಿಗದಿಪಡಿಸಿದೆ. ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡು ಹೆಚ್ಚಿನ ಪ್ರಮಾಣದಲ್ಲಿ ಹಾಲು ಉತ್ಪಾದನೆ ಮಾಡಲು ಅವಕಾಶವಿದೆ. ಹೊಸ ಪೀಳಿಗೆಯ ಯುವಜನರೂ ಹಾಲು ಉತ್ಪಾದನಾ ಚಟುವಟಿಕೆಗಳಲ್ಲಿ ಆಸಕ್ತಿ ವಹಿಸಿ ತೊಡಗಿಸಿಕೊಳ್ಳಬೇಕು. ರೈತರ ಜಾನುವಾರುಗಳ ಆರೋಗ್ಯ ಕಾಪಾಡುವ ಉದ್ದೇಶದಿಂದ ಒಕ್ಕೂಟದ ವತಿಯಿಂದ ಉಣುಗು ನಿರ್ಮೂಲನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷೆ ರೂಪಾ ಪಿ. ಮಾತನಾಡಿ ಒಕ್ಕೂಟದಿಂದ ಹೈನುಗಾರಿಕೆಗೆ ದೊರೆಯುವ ವಿವಿಧ ಸೌಲಭ್ಯ ಹಾಗೂ ಅನುದಾನಗಳನ್ನು ಸದಸ್ಯರು ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು. ಸಂಘವು ಸದಸ್ಯರಿಗೆ ನಿರಂತರ ಸೇವೆ ನೀಡಲು ಸದಾ ಸಿದ್ಧವಿದೆ. ಸದಸ್ಯರ ಸಹಕಾರದಿಂದ ಸಂಘವು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಉತ್ತಮ ಮಹಿಳಾ ಹಾಲು ಉತ್ಪಾದಕರ ಸಂಘ ಪ್ರಶಸ್ತಿಗೆ ಭಾಜನವಾಗಿದೆ. ಪ್ರಸ್ತುತ ನಡೆಯುತ್ತಿರುವ ಉಣುಗು ನಿರ್ಮೂಲನಾ ಕಾರ್ಯಕ್ರಮವೂ ಯಶಸ್ವಿಯಾಗಲಿ ಎಂದು ಹಾರೈಸಿದರು.
ವೇದಿಕೆಯಲ್ಲಿ ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕರಾದ ಎಸ್.ಬಿ. ಜಯರಾಮ ರೈ ಬಳಜ್ಜ, ಕೆ. ಚಂದ್ರಶೇಖರ್ ರಾವ್, ಭರತ್ ಎನ್., ಜಗನ್ನಾಥ ಶೆಟ್ಟಿ ಹಾಗೂ ವ್ಯವಸ್ಥಾಪಕ ಡಾ. ರವಿರಾಜ ಉಡುಪ ಉಪಸ್ಥಿತರಿದ್ದರು. ಒಕ್ಕೂಟದ ಉಪವ್ಯವಸ್ಥಾಪಕರಾದ ಡಾ.ಸತೀಶ್ ರಾವ್, ಡಾ.ಚಂದ್ರಶೇಖರ್ ಭಟ್, ಕಡಬದ ಪಶುವೈದ್ಯಾಧಿಕಾರಿ ಡಾ.ಸಚಿನ್ ಕುಮಾರ್ ಹಾಗೂ ವಿಸ್ತರಣಾಧಿಕಾರಿ ಆದಿತ್ಯ ಚಿದ್ಗಲ್ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ರಾಸುಗಳಿಗೆ ಉಣುಗು ಬಾಧೆಯಿಂದ ಉಂಟಾಗುವ ವಿವಿಧ ರೋಗಗಳು, ಅವು ಹರಡುವ ವಿಧಾನ ಹಾಗೂ ಅವುಗಳಿಂದ ಜಾನುವಾರುಗಳ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಕುರಿತು ಡಾ.ಚಂದ್ರಶೇಖರ್ ಭಟ್ ಅವರು ಪ್ರಾತ್ಯಕ್ಷಿಕೆಯ ಮೂಲಕ ಮಾಹಿತಿ ನೀಡಿದರು. ಡಾ.ಸಚಿನ್ ಕುಮಾರ್ ಅವರು ಉಣುಗು ನಿರ್ಮೂಲನಾ ಔಷಧಿಯನ್ನು ಯಾವ ಪ್ರಮಾಣದಲ್ಲಿ ಮತ್ತು ಯಾವ ರೀತಿಯಲ್ಲಿ ಸಿಂಪಡಿಸಬೇಕು ಎಂಬುದನ್ನು ವಿವರಿಸಿದರು. ಬಳಿಕ ಅಧಿಕಾರಿಗಳ ಸಮ್ಮುಖದಲ್ಲಿ ಡೈರಿ ಆವರಣದಲ್ಲಿ ಜಾನುವಾರುಗಳಿಗೆ ಔಷಧಿ ಸಿಂಪಡಿಸುವ ಪ್ರಾತ್ಯಕ್ಷಿಕೆ ನಡೆಸಲಾಯಿತು.
ಸಂಘದ ವ್ಯಾಪ್ತಿಯ 150 ಮನೆಗಳಿಗೆ ಭೇಟಿ ನೀಡಿ, ಮೂರು ಬ್ಯಾಚ್ಗಳಲ್ಲಿ ಒಟ್ಟು 500 ರಾಸುಗಳಿಗೆ ಉಣುಗು ನಿರ್ಮೂಲನಾ ಔಷಧಿಯನ್ನು ಉಚಿತವಾಗಿ ಸಿಂಪಡಿಸಲಾಯಿತು. ಈ ಮೂಲಕ ಮನೆಮನೆಗೆ ತೆರಳಿ ಹೈನುಗಾರರ ಜಾನುವಾರುಗಳ ಆರೋಗ್ಯ ಸಂರಕ್ಷಣೆಗೆ ವಿಶೇಷ ಆದ್ಯತೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಸಂಘದ ಎಲ್ಲಾ ನಿರ್ದೇಶಕಿಯರು, ಸಿಬ್ಬಂದಿ, ಕೃತಕ ಗರ್ಭಧಾರಣಾ ಕಾರ್ಯಕರ್ತ ಜಯರಾಮ, ಹೈನುಗಾರರು, ರೈತರು, ಕಡಬ ಕ್ಯಾಂಪ್ ಆಫೀಸ್ ಸಿಬ್ಬಂದಿ ಹಾಗೂ ವಿವಿಧ ಹಾಲು ಉತ್ಪಾದಕರ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಭಾಗವಹಿಸಿದ್ದರು.
ಸಂಘದ ನಿರ್ದೇಶಕಿಯರಾದ ಭವಾನಿ ಜಿ. ಮತ್ತು ಚೈತ್ರಾ ಎಂ. ಪ್ರಾರ್ಥಿಸಿದರು. ನಿರ್ದೇಶಕಿ ರಜನಿ ಜೆ. ಸ್ವಾಗತಿಸಿದರು. ಶೀನಪ್ಪ ಬರೆಮೇಲು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...

72ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಪಂಜ ವಲಯ ಅರಣ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ನೆಲ್ಯಾಡಿ: “ಆವಾಸ ಸ್ಥಾನಗಳ ಜೋಡಣೆ ಹಾಗೂ ವನ್ಯಜೀವಿಗಳ ಅಭಿವೃದ್ಧಿ” ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿರುವ ...
ಉಪ್ಪಿನಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕ್ರೀಡಾಕೂಟ ಹಿರೆಬಂಡಾಡಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಇಂದ್ರಪ್ರಸ್ಥ ...
ಕೊಕ್ಕಡ: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಶಿಶಿಲ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಹೀ ಸೇವಾ ಸಮಾರೋಪ ಸಮಾರಂಭದೊಂದಿಗೆ ವಿಶೇಷ ಗ್ರಾಮ ಸಭೆ ನಡೆಯಿತು. ಪಂಚಾಯತ್ ಆಡಳಿತಾಧಿಕಾರಿ ಭರತ್ ...
ಕೊಕ್ಕಡ: ಸಂತ ಜೋನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ನೂತನ ಯಾಜಕರಾಗಿ ಗುರುದೀಕ್ಷೆ ಸ್ವೀಕರಿಸಿದ ರೆ| ಫಾ| ವಿಲ್ಫ್ರೆಡ್ ಸ್ಟೀವನ್ ರೊಡ್ರಿಗಸ್ ಹಾಗೂ ಡಾಕ್ಟರೇಟ್ ಪದವಿ ಪಡೆದ ಡಾ| ಸೈಮನ್ ...
ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪ ಎಫ್ಐಆರ್ನಲ್ಲಿ ಸೇರಿಸಿಲ್ಲ: ಬಣಕಲ್ ಪೊಲೀಸರ ವಿರುದ್ಧ ಗಾಯಾಳುಗಳ ಆಕ್ರೋಶ ಕೊಕ್ಕಡ: ಮಂತ್ರಾಲಯಕ್ಕೆ ತೆರಳುತ್ತಿದ್ದ ಶಿಶಿಲದ ಸ್ನೇಹಿತರಿದ್ದ ಕಾರಿಗೆ ಎದುರಿನಿಂದ ಬಂದ ...