


ನೆಲ್ಯಾಡಿ: ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ದೊಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಎರಡು ಗರ್ಭಗುಡಿಗಳ ಜೀರ್ಣೋದ್ಧಾರ ಕಾಮಗಾರಿ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಜೀರ್ಣೋದ್ಧಾರ ಕಾರ್ಯದ ಕುರಿತು ಮಾಹಿತಿ ನೀಡಿ, ವಿಜ್ಞಾಪನ ಪತ್ರ ಸಲ್ಲಿಸಿದರು.
ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಸಂಬಂಧಿಸಿದಂತೆ ಸಮಿತಿಯ ಪದಾಧಿಕಾರಿಗಳು ಡಾ.ಡಿ.ವೀರೇಂದ್ರ ಹೆಗ್ಗಡೆಯವರೊಂದಿಗೆ ಚರ್ಚಿಸಿ, ಜೀರ್ಣೋದ್ಧಾರ ಕಾರ್ಯದ ಯಶಸ್ವಿ ಅನುಷ್ಠಾನಕ್ಕೆ ಸಹಕಾರ ಕೋರಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಮೊಕ್ತೇಸರರಾದ ಸುಬ್ರಹ್ಮಣ್ಯ ಬಾಳ್ತಿಲ್ಲಾಯ, ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ಅನುದೀಪ್ ಬಾಳ್ತಿಲ್ಲಾಯ, ಖ್ಯಾತ ಜ್ಯೋತಿಷಿ ಶ್ರೀಧರ ಗೋರೆ, ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಮಹಾಬಲ ಶೆಟ್ಟಿ, ಸದಸ್ಯರಾದ ಸುಂದರ ಬಾಣಜಾಲು, ಶಶಿಧರ ತೋಟ, ಬಾಲಕೃಷ್ಣ ಗೌಡ, ಪದ್ಮನಾಭ ಶೆಟ್ಟಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾಪ್ರತಿನಿಧಿಗಳಾದ ಸುಮನಾ ಮತ್ತು ನಮಿತಾ ಶೆಟ್ಟಿ ಉಪಸ್ಥಿತರಿದ್ದರು.








































































































