


ನೆಲ್ಯಾಡಿ: ನಮ್ಮ ನಾಡಿನ ಸಂಸ್ಕೃತಿ, ಸಂಪ್ರದಾಯ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಪೂರ್ವಜರಿಂದ ಬಳುವಳಿಯಾಗಿ ಬಂದಿರುವ ಸಾಂಪ್ರದಾಯಿಕ ಕಲೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದರ ಜೊತೆಗೆ ಮಕ್ಕಳಲ್ಲಿ ಭಕ್ತಿ, ಶಿಸ್ತು ಹಾಗೂ ಸಾಂಸ್ಕೃತಿಕ ಅಭಿರುಚಿಯನ್ನು ಬೆಳೆಸುವ ಸದುದ್ದೇಶದಿಂದ ನೆಲ್ಯಾಡಿ–ಕೌಕ್ರಾಡಿಯ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಕ್ಕಳಿಗೆ ಕುಣಿತ ಭಜನೆ ತರಬೇತಿ ನಡೆಯಲಿದೆ.
ಕುಣಿತ ಭಜನೆಯು ಭಕ್ತಿ ಮತ್ತು ಕಲೆಯ ಸುಂದರ ಸಂಗಮವಾಗಿದ್ದು, ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆ, ಲಯಬದ್ಧತೆ, ಶಿಸ್ತು, ಆತ್ಮವಿಶ್ವಾಸ ಹಾಗೂ ತಂಡಭಾವನೆಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಇಂದಿನ ಆಧುನಿಕತೆಯ ನಡುವೆಯೂ ನಮ್ಮ ಸಾಂಪ್ರದಾಯಿಕ ಕಲೆಗಳು ಮರೆಯಾಗದಂತೆ ಅವುಗಳನ್ನು ಮಕ್ಕಳಿಗೆ ಕಲಿಸಿ, ಸಂಸ್ಕೃತಿಯ ಪರಂಪರೆಯನ್ನು ಮುಂದುವರಿಸುವ ನಿಟ್ಟಿನಲ್ಲಿ ಈ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ತರಬೇತಿಯನ್ನು ಐಶ್ವರ್ಯ ರೈ ನೆಲ್ಯಾಡಿ ಅವರು ನೀಡಲಿದ್ದಾರೆ. ಆಸಕ್ತ ಮಕ್ಕಳು ಈ ತರಬೇತಿಯ ಸದುಪಯೋಗ ಪಡೆದುಕೊಳ್ಳುವಂತೆ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ನೆಲ್ಯಾಡಿ ವಲಯ ಅಧ್ಯಕ್ಷೆ ಸುಪ್ರೀತಾ ರವಿಚಂದ್ರ ಹೊಸವಕ್ಲು ವಿನಂತಿಸಿದ್ದಾರೆ.
ತರಬೇತಿ ಸ್ಥಳ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ, ನೆಲ್ಯಾಡಿ–ಕೌಕ್ರಾಡಿ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:8453351897, 9686016088, 9880951935








































































































