


ಉಜಿರೆ: ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು, ಉಜಿರೆಯ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ನ.24 ರಿಂದ 26ರವರೆಗೆ ವಿವಿಧ ಸಮಾಜಮುಖಿ ಸರಣಿ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ನ.24ರಂದು ದಯಾ ವಿಶೇಷ ಶಾಲೆ ಲಾಯಿಲ ಇಲ್ಲಿಗೆ ಭೇಟಿ ನೀಡುವ ಕಾರ್ಯಕ್ರಮ ಆಯೋಜಿಸಲಾಗಿದೆ. ನ.25ರಂದು ಸ್ವಚ್ಛ ಉಜಿರೆ–ಸ್ವಸ್ಥ ಉಜಿರೆ ಅಭಿಯಾನ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಗೀತೆ ಗಾಯನ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ನ.26ರಂದು ಸಂಚಾರಿ ನಿಯಮಗಳ ಕುರಿತು ಜಾಗೃತಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.
ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ, ಸೇವಾ ಮನೋಭಾವ, ಪರಿಸರ ಕಾಳಜಿ, ಆರೋಗ್ಯ ಜಾಗೃತಿ ಹಾಗೂ ಶಿಸ್ತು ಮತ್ತು ಸಂಚಾರ ನಿಯಮಗಳ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಈ ಸರಣಿ ಸೇವಾ ಕಾರ್ಯಕ್ರಮಗಳಲ್ಲಿ ಕಾಲೇಜಿನ ಎನ್ಎಸ್ಎಸ್ ಸ್ವಯಂಸೇವಕರು ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.








































































































