ನೇಸರ ಎ.01: ದ.ಕ.ಜಿ.ಪಂ.ಉ.ಹಿ.ಪ್ರಾ. ಶಾಲೆ ನೆಲ್ಯಾಡಿಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ವಾಲಿಬಾಲ್ ಪಂದ್ಯಾಟದ ಬೇಸಿಗೆ ಶಿಬಿರದ ತರಬೇತಿ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.
ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಜಯಾನಂದ ಬಂಟ್ರಿಯಾಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಈ ಬೇಸಿಗೆ ಶಿಬಿರ ಮಕ್ಕಳಿಗೆ ಬಹಳ ಪ್ರಾಮುಖ್ಯತೆಯನ್ನು ಪಡೆದಿದೆ, ನೀವು ವಾಲಿಬಾಲ್ ಕ್ರೀಡಾಪಟುಗಳಾಗಿ, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಹುಡುಗರ ಹಾಗೂ ಹುಡುಗಿಯರ ಎರಡು ತಂಡಗಳು ಪ್ರಶಸ್ತಿಗೆ ಭಾಜನರಾಗಬೇಕು, ಎರಡು ತಂಡಗಳಿಗೂ ಪೂರ್ವ ವಿದ್ಯಾರ್ಥಿ ಸಂಘದ ವತಿಯಿಂದ ಟೀಶರ್ಟ್ ಹಾಗೂ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಭರವಸೆ ಈ ಸಂದರ್ಭದಲ್ಲಿ ನೀಡಿ, ಶಿಬಿರಕ್ಕೆ ಶುಭವನ್ನು ಹಾರೈಸಿದರು.
ಶಾಲಾ ದೈಹಿಕ ಶಿಕ್ಷಕ ಹಾಗೂ ಬೇಸಿಗೆ ಶಿಬಿರದ ತರಬೇತುದಾರರಾದ ಜನಾರ್ಧನ. ಟಿ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶೀನಪ್ಪ. ಎಸ್ ಮತ್ತು ವಿಮಲ್ ಕುಮಾರ್ ರವರು ತರಬೇತಿಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು. ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರು ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಆನಂದ ಅಜಿಲ ಸ್ವಾಗತಿಸಿದರು. ಶ್ರೀಮತಿ ಪ್ರಸನ್ನರವರು ದನ್ಯವಾದ ನೆರವೇರಿಸಿದರು.