ಎಸ್.ಡಿ.ಎಂ ಉಜಿರೆ ಕಾಲೇಜಿನ ಅಲ್ಯುಮ್ನಿ ಅಸೋಸಿಯೇಷನ್ ವತಿಯಿಂದ ಆನ್ಲೈನ್ ಮೀಟ್

ಶೇರ್ ಮಾಡಿ

ನೇಸರ ಎ.30: ಪ್ರತಿ ವರ್ಷ ಮೇ 1ರಂದು ಎಸ್.ಡಿ.ಎಂ ಕಾಲೇಜಿನ ಅಲ್ಯುಮ್ನಿ ಅಸೋಸಿಯೇಷನ್ ವತಿಯಿಂದ ನಡೆಯುವ ಅಲ್ಯುಮ್ನಿ ಮೀಟ್ ಈ ಬಾರಿ ಆನ್ಲೈನ್ ಮುಖಾಂತರ ನಡೆಯಲಿದೆ.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿ, ಜ್ಞಾನವಿಕಾಸ ಕಾರ್ಯಕ್ರಮಗಳ ಅಧ್ಯಕ್ಷೆ ಮಾತೃಶ್ರೀ ಡಾ.ಹೇಮಾವತಿ ವಿ ಹೆಗ್ಗಡೆಯವರು ಪಾಲ್ಗೊಳ್ಳಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕಾಲೇಜಿನ ಪ್ರಾಂಶುಪಾಲ ಡಾ.ಪಿ.ಎನ್.ಉದಯಚಂದ್ರ, ಎಸ್.ಡಿ.ಎಂ ಗ್ಲೋಬಲ್ ಅಲ್ಯುಮ್ನಿ ಅಸೋಸಿಯೇಷನ್ ನ ಅಧ್ಯಕ್ಷರಾದ ಅಬ್ದುಲ್ ಮಾಡುಮೂಲೆ, ಎಸ್.ಡಿ.ಎಂ ಬೆಂಗಳೂರು ಚಾಪ್ಟರ್ ಅಧ್ಯಕ್ಷ ಸತ್ಯನಾರಾಯಣ ಹೊಳ್ಳ, ಉಜಿರೆ ಅಲ್ಯುಮ್ನಿ ಅಸೋಸಿಯೇಷನ್ ನ ಅಧ್ಯಕ್ಷ ಪೀತಾಂಬರ ಹೇರಾಜೆ ಹಾಗೂ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮ ಮೇ.1ರಂದು ಸಂಜೆ 6.30ಕ್ಕೆ ಪ್ರಾರಂಭವಾಗಿ 8.30ಕ್ಕೆ ಮುಕ್ತಾಯಗೊಳ್ಳಲಿದ್ದು. ಎಲ್ಲಾ ಎಸ್.ಡಿ.ಎಂ ಉಜಿರೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಎಸ್.ಡಿ.ಎಂ. ಮಲ್ಟಿ ಮೀಡಿಯಾ ಸ್ಟುಡಿಯೋದ ಯುಟ್ಯೂಬ್ ಚಾನೆಲ್ ಮುಖಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ತಿಳಿಸಿದರು.

ವೀಕ್ಷಿಸಿ SUBSCRIBERS ಮಾಡಿ

 

🌸 ಜಾಹೀರಾತು 🌸

Leave a Reply

error: Content is protected !!