ಉಜಿರೆಯ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಕೊಕ್ಕಡದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಶೇರ್ ಮಾಡಿ

ನೇಸರ ಮೇ‌.16: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಕ್ಕಡದಲ್ಲಿ 7 ದಿನಗಳ ವಿಶೇಷ ವಾರ್ಷಿಕ ಶಿಬಿರ ಆಯೋಜಿಸಲಾಗಿದೆ. ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಮೇ 14ರಂದು ಕೊಕ್ಕಡ ಶಾಲಾ ಆವರಣದಲ್ಲಿ ಗ್ರಾಮಸ್ಥರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸಲಾಯಿತು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆ ಉಜಿರೆ, ಕೆ.ವಿ.ಜಿ ದಂತ ವೈದ್ಯಕೀಯ ಕಾಲೇಜು ಸುಳ್ಯ ಹಾಗೂ ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಉಜಿರೆ ಇವರುಗಳ ಸಂಯುಕ್ತಾಶ್ರಯದಲ್ಲಿ ನಡೆಸಿದ ಉಚಿತ ಆರೋಗ್ಯ ಶಿಬಿರವು ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಯಿತು. ಶಿಬಿರವನ್ನು ಕೊಕ್ಕಡದ ಪಂಚಮಿ ಹಿತಾಯುರ್ಧಾಮದ ನಿರ್ದೇಶಕರಾದ ಡಾ.ಬಿ ಮೋಹನದಾಸ್ ಗೌಡ ರವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಧ.ಮಂ.ಆಸ್ಪತ್ರೆಯ ನಿರ್ದೇಶಕರಾದ ಶ್ರೀ ಜನಾರ್ಧನ್ ಎಂ, ಕೆ.ವಿ.ಜಿ ದಂತ ವೈದ್ಯಕೀಯ ಕಾಲೇಜು ಸುಳ್ಯದ ಪೀರಿಡಯೋಡಾಂಟಿಕ್ಸ್ ವಿಭಾಗದ ಮುಖ್ಯಸ್ಥರಾದ ಡಾ.ದಯಾಕರ್ ಎಂ.ಎಂ ಇನ್ನಿತರರು ಉಪಸ್ಥಿತರಿದ್ದರು.

ಶಿಬಿರದಲ್ಲಿ ರಕ್ತದೊತ್ತಡ, ಮಧುಮೇಹ, ಉಬ್ಬಸ, ಅಸ್ತಮಾ, ಹೃದಯರೋಗ, ಕಣ್ಣು, ಕಿವಿ, ಮೂಗಿನ ಪರೀಕ್ಷೆ, ದಂತ ತಪಾಸಣೆ ಮುಂತಾದ ಚಿಕಿತ್ಸೆಗಳು ಲಭ್ಯವಿದ್ದವು. ಆರೋಗ್ಯ ಚಿಕಿತ್ಸಾ ಸಮಾಲೋಚನೆ ಹಾಗೂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಾಹಿತಿಗಳನ್ನು ಒದಗಿಸಲಾಯಿತು. ಅಗತ್ಯ ಔಷಧಗಳನ್ನು ಮತ್ತು ಕನ್ನಡಕಗಳನ್ನು ಉಚಿತವಾಗಿ ನೀಡಲಾಯಿತು. ಒಟ್ಟು 343 ಜನರು ಶಿಬಿರದ ಲಾಭ ಪಡೆದುಕೊಂಡರು. ಕಣ್ಣಿನ ಪರೀಕ್ಷೆಗೆ 62, ಇ.ಎನ್.ಟಿ ತಪಾಸಣೆ 07, ದಂತ ಚಿಕಿತ್ಸೆ 85, ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಚಿಕಿತ್ಸಾ ಮಾಹಿತಿ 34, ರಕ್ತಪರೀಕ್ಷೆ 64, ಸಾಮಾನ್ಯ ಆರೋಗ್ಯತಪಾಸಣೆ 55, ಮೂಳೆ ಪರೀಕ್ಷೆ ಮತ್ತು ಚಿಕಿತ್ಸೆಗೆ 36 ಜನರು ಒಳಪಟ್ಟರು.
ಕಾರ್ಯಕ್ರಮದ ನೇತೃತ್ವವನ್ನು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿಗಳಾದ ಡಾ.ಲಕ್ಷ್ಮೀನಾರಾಯಣ್ ಮತ್ತು ದೀಪಾ ಆರ್ ಪಿ ರವರು ವಹಿಸಿದ್ದರು. ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ವೀಕ್ಷಿಸಿ SUBSCRIBERS ಮಾಡಿ

🌺 ಜಾಹೀರಾತು 🌺

Leave a Reply

error: Content is protected !!