ರಾಷ್ಟ್ರ ನಿರ್ಮಾಣದಲ್ಲಿ ಯುವಶಕ್ತಿಯ ಪಾತ್ರ ಅತಿ ಮುಖ್ಯ, ಅದರಲ್ಲೂ ಕೈಗಾರಿಕಾ ಬೆಳವಣಿಗೆಯಲ್ಲಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಕಲಿತ ವಿದ್ಯಾರ್ಥಿಗಳ ಸೇವೆ ಅಮೂಲ್ಯವಾದದ್ದು – ಸತ್ಯನಾರಾಯಣ ಸಿ.ಕೆ

ಶೇರ್ ಮಾಡಿ

ನೇಸರ ಮೇ‌ 21: ರಾಷ್ಟ್ರ ನಿರ್ಮಾಣದಲ್ಲಿ ಯುವಶಕ್ತಿಯ ಪಾತ್ರ ಅತಿ ಮುಖ್ಯ, ಅದರಲ್ಲೂ ಕೈಗಾರಿಕಾ ಬೆಳವಣಿಗೆಯಲ್ಲಿ ಕೈಗಾರಿಕ ತರಬೇತಿ ಸಂಸ್ಥೆಗಳಲ್ಲಿ ಕಲಿತ ವಿದ್ಯಾರ್ಥಿಗಳ ಸೇವೆ ಅಮೂಲ್ಯವಾದದ್ದು, ಸಾವಿರಾರು ಮಂದಿಗೆ ಉದ್ಯೋಗ ಕೊಡಬಲ್ಲ ಸಂಸ್ಥೆ ಐಟಿಐ, ಜೀವನದಲ್ಲಿ ಸ್ವರಕ್ಷಣೆ ಹೇಗೆ ಮುಖ್ಯವೊ, ಅದೇ ಸಂದರ್ಭದಲ್ಲಿ ಕೈಗಾರಿಕೆಗಳಲ್ಲಿಯೂ ವೈಯಕ್ತಿಕ ಜಾಗ್ರತೆ ಕೂಡ ಅತಿಮುಖ್ಯವಾಗಿ ಪಾಲನೆಯದಾಗ ಜೇವನವು ಪಾವನವಾಗುವುದು ಎಂದು ಮೆಸ್ಕಾಂ ಕಡಬದ ಸಹಾಯಕ ಇಂಜಿನಿಯರ್ ಆಗಿರುವ ಸತ್ಯನಾರಾಯಣ ಸಿ.ಕೆ. ಯವರು ನೆಲ್ಯಾಡಿ ಬೆಥನಿ ಐಟಿಐ ನೆಲ್ಯಾಡಿ ಇದರ 26ನೇ ವಾರ್ಷಿಕೋತ್ಸವದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ನಿರ್ಧೇಶಕರಾದ ರೆ|ಫಾ| ಸತ್ಯನ್ ತೋಮಸ್ ಒಐಸಿ ವಹಿಸಿದ್ದರು. ವೇದಿಕೆಯಲ್ಲಿ ಮಾಜಿ ಜಿಲ್ಲಾ ಪಂಚಾಯಿತ್ ಸದಸ್ಯರಾದ ಸರ್ವೋತ್ತಮ ಗೌಡ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಉಷಾ ಅಂಚನ್, ನೆಲ್ಯಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಜಯಾನಂದ ಬಟ್ರಿಯಾಲ್, ನೋಟರಿ ಹಾಗೂ ವಕೀಲರಾದ ಇಸ್ಮಾಯಿಲ್ ಎನ್, ಜ್ಞಾನೋದಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರೆ|ಫಾ|ತೋಮಸ್ ಬಿಜಿಲಿ, ಸಂಸ್ಥೆಯ ಪ್ರಾಚಾರ್ಯರಾದ ಸಜಿ ಕೆ ತೋಮಸ್, ಸಂಸ್ಥೆಯ ತರಬೇತಿ ಅಧಿಕಾರಿ ಜೋನ್ ಪಿ.ಎಸ್., ಉಪಸ್ಥಿತರಿದ್ದು ಶುಭ ಹಾರೈಸಿದರು.
ಸನ್ಮಾನ:
ಸಂಸ್ಥೆಯಲ್ಲಿ 25 ವರ್ಷ ಪೂರೈಸಿದ ಕಿರಿಯ ತರಬೇತಿ ಅಧಿಕಾರಿಗಳಾದ ಸುಬ್ರಾಯ ನಾಯಕ್, ಅನಂತ ಕೃಷ್ಣ, ವಿನ್ಸೆಂಟ್ ಸಿ.ಎಸ್., ತೋಮಸ್ ಪಿ.ಜೆ., ಮುಂತಾದವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮಗಳಿಗೆ ಕಿರಿಯ ತರಬೇತಿ ಅಧಿಕಾರಿಗಳಾದ ಸುಬ್ರಾಯ ನಾಯಕ್ ಸ್ವಾಗತಿಸಿ, ವಿದ್ಯಾರ್ಥಿ ಸಂಘದ ನಾಯಕ ದಿಶಾಂತ್ ವಂದಿಸಿದರು. ಸಂಸ್ಥೆಯ ಪ್ರಾಚಾರ್ಯರಾದ ಸಜಿ ಕೆ ತೋಮಸ್ ವಾರ್ಷಿಕ ವರದಿ ಮಂಡಿಸಿದರು. ವಿದ್ಯಾರ್ಥಿನಿಯರಾದ ರಮ್ಯ ಮತ್ತು ಬಳಗ ಪ್ರಾರ್ಥಿಸಿದರು. ಕಿರಿಯ ತರಬೇತಿ ಅಧಿಕಾರಿಗಳಾದ ಜ್ಯೋತಿಲಕ್ಷ್ಮಿ ಕೆ ಹಾಗೂ ಹರಿಪ್ರಸಾದ್ ರೈ ಬಿ. ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಐಟಿಐ ವಿದ್ಯಾರ್ಥಿಗಳಿಂದ, ವಿವಿಧ ಮನರಂಜನಾ ಕಾರ್ಯಕ್ರಮಗಳು ನಡೆದವು.

ವೀಕ್ಷಿಸಿ SUBSCRIBERS ಮಾಡಿ

ಜಾಹೀರಾತು

Leave a Reply

error: Content is protected !!