ಎನ್ನೆಂಸಿ: ಯುವ ರೆಡ್ ಕ್ರಾಸ್ ಘಟಕ ಹಾಗೂ ಐಕ್ಯೂಎಸಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವನಮಹೋತ್ಸವ

ಶೇರ್ ಮಾಡಿ

ನೇಸರ ಜೂ.05: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ಆಂತರಿಕ ಗುಣಮಟ್ಟ ಖಾತರಿ ಕೋಶ, ಗ್ರಾಮ ಪಂಚಾಯತ್ ಅಜ್ಜಾವರ ಇವರ ಜಂಟಿ ಆಶ್ರಯದಲ್ಲಿ ಅರಣ್ಯ ಇಲಾಖೆ ಸುಳ್ಯ ಇವರ ಸಹಯೋಗದೊಂದಿಗೆ ವಿಶ್ವ ಪರಿಸರ ದಿನದ ಪ್ರಯುಕ್ತ ಅಜ್ಜಾವರ ಗ್ರಾಮದ ಅರಣ್ಯ ಪ್ರದೇಶದಲ್ಲಿ ಪ್ರಕೃತಿಯೊಂದಿಗೆ ಸಾಮರಸ್ಯಕ್ಕಾಗಿ ಎಂಬ ಶೀರ್ಷಿಕೆಯಡಿಯಲ್ಲಿ ವನಮಹೋತ್ಸವ ಹಾಗೂ ಬೀಜಬಿತ್ತನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಸುಳ್ಯದ ಅರಣ್ಯ ವಲಯಾಧಿಕಾರಿ ಗಿರೀಶ್ ಆರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, “ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ, ಪ್ರಸ್ತುತ ವರ್ಷ ಬಿತ್ತೋತ್ಸವ ಎಂಬ ಧ್ಯೇಯವನ್ನು ಇಟ್ಟುಕೊಂಡು ಹಣ್ಣಿನ ಬೀಜ ಬಿತ್ತನೆಯ ಕೆಲಸ ಎಲ್ಲಾ ಅರಣ್ಯಗಳಲ್ಲಿ ನಡೆಯಲಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಜ್ಜಾವರ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಲೀಲಾ ಮನಮೋಹನ್ ಮಾತನಾಡಿ, ಗಿಡಗಳನ್ನು ನೆಡುವುದರೊಂದಿಗೆ ಅದನ್ನು ಪೋಷಿಸುವ ಕೆಲಸ ಕೂಡ ಆಗಬೇಕಾಗಿದೆ. ಮನುಷ್ಯನ ಅಗತ್ಯಕ್ಕೆ ಮರಗಳನ್ನು ಬಳಸಿದಾಗ ಅಲ್ಲಿ ಮತ್ತೆ ಗಿಡಗಳನ್ನು ನೆಡುವ ಮನೋಭಾವ ಇರಬೇಕು ಎಂದರು. ಕಾರ್ಯಕ್ರಮದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲ ರುದ್ತಕುಮಾರ್ ಎಂ ಎಂ, ಅಜ್ಜಾವರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಜಯಮಾಲ ಕೆ ವಿ, ಪಂಚಾಯತ್ ಸದಸ್ಯ ರವಿರಾಜ್ ಕೆ, ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಶ್ರೀಮತಿ ರತ್ನಾವತಿ ಡಿ, ಐಕ್ಯೂಎಸಿ ಸಂಚಾಲಕಿ ಶ್ರೀಮತಿ ಮಮತಾ ಕೆ, ಉಪನ್ಯಾಸಕರಾದ ತಿಪ್ಪೇಸ್ವಾಮಿ ಡಿ ಹೆಚ್, ವಿಷ್ಣುಪ್ರಶಾಂತ್, ಅರಣ್ಯ ಇಲಾಖೆಯ ದಿವಿಶ್ ಮತ್ತು ಸಿಬ್ಬಂದಿ ವರ್ಗದವರು ರೆಡ್ ಕ್ರಾಸ್ ಘಟಕ ನಾಯಕರಾದ ನಿರಂಜನ್ ಕೆ, ಲಿಮಿತಾ ಪಿ ಜೆ ಹಾಗೂ ರೆಡ್ ಕ್ರಾಸ್ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮಾಧಿಕಾರಿ ಡಾ.ಅನುರಾಧಾ ಕುರುಂಜಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಸುಮಾರು 100ಕ್ಕೂ ಅಧಿಕ ಗಿಡಗಳನ್ನು ನೆಟ್ಟು, 1000 ಅಧಿಕ ಬೀಜಗಳನ್ನು ಬಿತ್ತನೆ ಮಾಡಲಾಯಿತು.

ವೀಕ್ಷಿಸಿ SUBSCRIBERS ಮಾಡಿ

ಜಾಹೀರಾತು

Leave a Reply

error: Content is protected !!