ನೇಸರ ಜೂ.07: 2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇದೇ ತಿಂಗಳು ನಾಲ್ಕನೇ ವಾರದಲ್ಲಿ ಬಿಡುಗಡೆಯಾಗಲಿದೆ. ಈ ಮೊದಲು ದ್ವಿತೀಯ ಪಿಯುಸಿ ಫಲಿತಾಂಶವನ್ನು ಜೂನ್ ಮೂರನೇ ವಾರದಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಮೌಲ್ಯಮಾಪನ ಕಾರ್ಯ ವಿಳಂಭವಾದ ಹಿನ್ನಲೆಯಲ್ಲಿ, ಜೂನ್ ನಾಲ್ಕನೇ ವಾರದಲ್ಲಿ ಫಲಿತಾಂಶವನ್ನು ಬಿಡುಗಡೆ ಮಾಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ.
2021-22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ, ಏಪ್ರಿಲ್ 22 ರಿಂದ ಆರಂಭವಾಗಿ ಮೇ 18 ಕ್ಕೆ ಮುಕ್ತವಾಗಿದ್ದವು. ರಾಜ್ಯಾದಂತ ಒಟ್ಟು 1,076 ಪರೀಕ್ಷಾ ಕೇಂದ್ರಗಳಲ್ಲಿ ಈ ಬಾರಿ ಪರೀಕ್ಷೆ ನಡೆಸಲಾಗಿತ್ತು. ಈ ಬಾರಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಇದರಲ್ಲಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ 6,00,519 ರೆಗ್ಯುಲರ್ ವಿದ್ಯಾರ್ಥಿಗಳಿದ್ದರೆ, 61,808 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ.
ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ www.karresults.nic.in ಗೆ ಭೇಟಿ ನೀಡಿ ಫಲಿತಾಂಶವನ್ನು ಫಲಿತಾಂಶ ಬಿಡುಗಡೆ ದಿನ ಪಡೆಯಬಹುದು.
ಜಾಹೀರಾತು