
ನೇಸರ ಜೂ.16: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ರಕ್ತದಾನದ ಮಹತ್ವದ ಕುರಿತ ಕರಪತ್ರವನ್ನು ಅನಾವರಣಗೊಳಿಸಲಾಯಿತು. ರಕ್ತದಾನ ಏಕೆ ಮಾಡಬೇಕು? ಯಾವೆಲ್ಲಾ ಸಂದರ್ಭದಲ್ಲಿ ರಕ್ತದಾನ ಮಾಬಹುದು? ಮತ್ತು ಯಾವ ಸಂದರ್ಭದಲ್ಲಿ ರಕ್ತದಾನ ಮಾಡಬಾರದು.?, ಯಾರು ಯಾರಿಗೆ ರಕ್ತದಾನ ಮಾಡಬಹುದು? ಮೊದಲಾದ ವಿಷಯಗಳನ್ನು ತಿಳಿಸುವ ಕರಪತ್ರವನ್ನು ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ.ನೀಲಂಬಿಕೈ ನಟರಾಜನ್ ಅನಾವರಣಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ (ರಿ) ನ ಅಧ್ಯಕ್ಷರಾದ ಡಾ.ಕೆ ವಿ ಚಿದಾನಂದ, ಬ್ಲಡ್ ಬ್ಯಾಂಕ್ ಅಧಿಕಾರಿ ಡಾ.ಮಹಂತದೇವರು, ನೆಹರೂ ಮೆಮೋರಿಯಲ್ ಕಾಲೇಜಿನ ಶೈಕ್ಷಣಿಕ ಸಲಹೆಗಾರ ಬಾಲಚಂದ್ರ ಗೌಡ ಕೆ, ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಮತಿ ರತ್ನಾವತಿ ಡಿ, ಕೆವಿಜಿ ಮೆಡಿಕಲ್ ಕಾಲೇಜಿನ ಪೆಥಾಲಜಿ ವಿಭಾಗದ ಪ್ರೊಪೆಸರ್ ಡಾ.ರಾಜೇಶ್ ಗೋಪಿನಾಥ್, ಅರ್ಪಿತಾ, ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ.ಅನುರಾಧಾ ಕುರುಂಜಿ ಮೊದಲಾದವರು ಉಪಸ್ಥಿತರಿದ್ದರು.
ಜಾಹೀರಾತು





