ನೆಲ್ಯಾಡಿ: ಸಂತ ಜಾರ್ಜ್ ವಿದ್ಯಾಸಂಸ್ಥೆಯ ಪದವಿ ಪೂರ್ವ ಕಾಲೇಜಿಗೆ ವಾರ್ಷಿಕ ಪರೀಕ್ಷೆಯಲ್ಲಿ ಶೇ.97% ಫಲಿತಾಂಶ ಲಭಿಸಿದೆ

ಶೇರ್ ಮಾಡಿ

ವಾಣಿಜ್ಯ ವಿಭಾಗದಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು

ಕಲಾವಿಭಾಗದಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು

ನೇಸರ ಜೂ.18: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾಸಂಸ್ಥೆಯ ಪದವಿ ಪೂರ್ವ ಕಾಲೇಜಿಗೆ ಶೇ.97% ಫಲಿತಾಂಶ ಲಭಿಸಿದೆ.
ಕಲಾವಿಭಾಗಕ್ಕೆ ಶೇ.95%, ವಾಣಿಜ್ಯ ವಿಭಾಗಕ್ಕೆ ಶೇ.98.48% ಫಲಿತಾಂಶ ದೊರೆತಿದೆ. ಕಾಲೇಜಿನಿಂದ ಒಟ್ಟು 127 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 123 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ.
ವಾಣಿಜ್ಯ ವಿಭಾಗದಲ್ಲಿ ಕುಮಾರಿ ತೇಜಸ್ವಿನಿ(587) ಅಂಕ ಪಡೆದು ಪ್ರಥಮ ಸ್ಥಾನವನ್ನು, ಕುಮಾರಿ ಅಪೂರ್ವ(575) ಅಂಕ ಪಡೆದು ದ್ವಿತೀಯ ಸ್ಥಾನ ಗಳಿಸಿದ್ದಾರೆ. ಕಲಾ ವಿಭಾಗದಲ್ಲಿ ಸಚಿನ್ ಕೆ.ಎಸ್.(573)ಅಂಕ ಪಡೆದು ಪ್ರಥಮ ಸ್ಥಾನವನ್ನು, ಕುಮಾರಿ ಭವಿಷ್ಯ(565) ಅಂಕ ಪಡೆದು ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.
ಕೊರೋನ ಸಂಕಷ್ಟ ಕಾಲದಲ್ಲೂ ಸಂಸ್ಥೆಯು ಉತ್ತಮ ಫಲಿತಾಂಶ ದಾಖಲಿಸುವಲ್ಲಿ ಶ್ರಮಿಸಿದ ಸಂತ ಜಾರ್ಜ್ ವಿದ್ಯಾಸಂಸ್ಥೆಯ ಉಪನ್ಯಾಸಕ ವೃಂದದವರಿಗೆ ಹಾಗೂ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸ್ಥೆಯ ಸಂಚಾಲಕ ಅಬ್ರಹಾಂ ವರ್ಗೀಸ್ ಶುಭಾಶಯ ತಿಳಿಸಿದ್ದಾರೆ.

ವೀಕ್ಷಿಸಿ SUBSCRIBERS ಮಾಡಿ🙏🏻

ಜಾಹೀರಾತು

Leave a Reply

error: Content is protected !!