ನೇಸರ ಜೂ.20: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಹಗ್ಗ ಜಗ್ಗಾಟ ಸ್ಪರ್ಧೆಯು ಇದೇ ಬರುವ 23 ಜೂನ್ 2022ರಂದು ನಡೆಯಲಿದೆ.
ಈ ಪಂದ್ಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜನೆಗೊಳಪಟ್ಟ ಸುಮಾರು 32 ಪುರುಷರ ಮತ್ತು 30 ಮಹಿಳಾ ತಂಡಗಳು ಭಾಗವಹಿಸಲಿವೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.