ನೇಸರ ಜೂ.24: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಹಗ್ಗ ಜಗ್ಗಾಟ ಸ್ಪರ್ಧೆಯು 23-06-2002ರಂದು ನಡೆಯಿತು.
CEN ಪೋಲೀಸ್ ಸ್ಟೇಷನ್ ಮಂಗಳೂರು ಇಲ್ಲಿಯ ಪೋಲೀಸ್ ಇನ್ಸ್ ಪೆಕ್ಟರ್ ಸತೀಶ್ ಮಜಿಕೋಡಿ ಪಂದ್ಯಾಟವನ್ನು ಉದ್ಘಾಟಿಸಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್(ರಿ) ನ ಅಧ್ಯಕ್ಷರಾದ ಡಾ.ಕೆ ವಿ ಚಿದಾನಂದ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ. ಜೆರಾಲ್ಡ್ ಸಂತೋಷ್ ಡಿ’ಸೋಜ ಹಾಗೂ ನೆಹರೂ ಮೆಮೋರಿಯಲ್ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ.ಎಂ.ಬಾಲಚಂದ್ರ ಗೌಡ ಗೌರವ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ರುದ್ರಕುಮಾರ್ ಎಂ ಎಂ ಪಂದ್ಯಾಟಕ್ಕೆ ಶುಭ ಹಾರೈಸಿದರು. ಅಂತಿಮ ಬಿ ಎಸ್ಸಿ ವಿದ್ಯಾರ್ಥಿನಿಯರಾದ ರಶ್ಮಿ ಹಾಗೂ ರೇಷ್ಮಾ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಲೆಫ್ಟಿನೆಂಟ್ ಸೀತಾರಾಮ ಎಂ ಡಿ ಸ್ವಾಗತಿಸಿ, ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕಿ ಶ್ರೀಮತಿ ಮಮತಾ ಕೆ ವಂದಿಸಿದರು. ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥೆ ಭವ್ಯಾ ಪಿ ಎಂ ಕಾರ್ಯಕ್ರಮ ನಿರೂಪಿಸಿದರು.
ಸಮಾರೋಪ ಸಮಾರಂಭ:
ಸಮಾರಂಭದಲ್ಲಿ ಸಂಜೆ ನಡೆಯಿತು, ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಜಗದೀಶ್ ಅಡ್ತಲೆ, ಕೆವಿಜಿ ಮೆಡಿಕಲ್ ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್, ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶೇಷಪ್ಪ ಗೌಡ, ನೆಹರೂ ಮೆಮೋರಿಯಲ್ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ರಾಧಾಕೃಷ್ಣ ಮಾಣಿಬೆಟ್ಟು, ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಮೊದಲಾದವರು ಉಪಸ್ಥಿತರಿದ್ದರು.
ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಸಂಜೀವ ಕುದ್ಪಾಜೆ ಸ್ವಾಗತಿಸಿ, ಐಕ್ಯೂಎಸಿ ಸಂಚಾಲಕಿ ಮಮತಾ ಕೆ ವಂದಿಸಿದರು. ಸರಕಾರಿ ಪ್ರಥಮ ದರ್ಜೆ ಕಾಲೇಜು, ಅಜ್ಜರಕಾಡಿನ ದೈಹಿಕ ಶಿಕ್ಷಣ ನಿರ್ದೇಶಕ ರೋಷನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಪದ್ಯಾಂಟದ ಫಲಿತಾಂಶ:
ಪುರುಷರ ವಿಭಾಗ:
ಪ್ರಥಮ: ನೆಹರೂ ಮೆಮೋರಿಯಲ್ ಕಾಲೇಜು, ಸುಳ್ಯ
ದ್ವಿತೀಯ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಸುಳ್ಯ,
ತೃತೀಯ: ಆಳ್ವಾಸ್ ಕಾಲೇಜು, ಮೂಡುಬಿದ್ರೆ
ಚತುರ್ಥ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಉಪ್ಪಿನಂಗಡಿ
ಮಹಿಳಾ ವಿಭಾಗ:
ಪ್ರಥಮ: ಆಳ್ವಾಸ್ ಕಾಲೇಜು, ಮೂಡಬಿದಿರೆ
ದ್ವಿತೀಯ: ನೆಹರೂ ಮೆಮೋರಿಯಲ್ ಕಾಲೇಜು, ಸುಳ್ಯ
ತೃತೀಯ: ಸರಕಾರಿ ಪ್ರಥಮ ದರ್ಜೆ ಕಾಲೇಜು, ವಾಮದಪದವು
ಚತುರ್ಥ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಸುಳ್ಯ