ನೇಸರ ಜು.07: ಮುಂದಿನ 4-5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾದ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ಜು.08 ಮತ್ತು ಜು.09 ಎರಡು ದಿನ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಕರಾವಳಿ ಭಾಗದಲ್ಲಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ಮತ್ತು ರಜೆ ಘೋಷಿಸಿ ಆದೇಶಿಸಿದ್ದಾರೆ.