ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲೂಕು ಪತ್ರಕರ್ತರ ಸಂಘದಿಂದ ನಾಲ್ಕು ಸರಕಾರಿ ಶಾಲಾ ಮಕ್ಕಳಿಗೆ ಪುಸ್ತಕಗಳ ವಿತರಣೆ

ಶೇರ್ ಮಾಡಿ

ನೇಸರ ನ18: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಕೊಂಬಾರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿಂದು ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿರುವ ಸಿರಿಬಾಗಿಲು-ಕೊಂಬಾರು ಗ್ರಾಮಗಳ ವ್ಯಾಪ್ತಿಗೊಳಪಟ್ಟ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಿಲಿಕಜೆ-ಗುಂಡ್ಯ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೊಗೇರಡ್ಕ, ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕೊಂಬಾರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿರಿಬಾಗಿಲು. ನಾಲ್ಕು ಶಾಲೆಗಳ ಮಕ್ಕಳಿಗೆ ಕೆಐಒಸಿಎಲ್‍ನ ಸಿಎಸ್‍ಆರ್ ನಿಧಿಯಿಂದ ಒದಗಿಸಲಾದ ಬರೆಯುವ ಪುಸ್ತಕಗಳ ವಿತರಣೆ ಮಾಡಿ ಮಾತನಾಡಿದ ದ.ಕ.ಜಿ.ಪಂ.ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್.
ಪ್ರಜಾಪ್ರಭುತ್ವದ ನಾಲ್ಕನೆ ಅಂಗವಾದ ಪತ್ರಿಕಾ ರಂಗ ಜನರ ಸಮಸ್ಯೆ, ನಿವಾರಣೆಗೆ ಗ್ರಾಮದ ಜನರ ಬಳಿ ತೆರಳಿ ಸಮಾಜ ಮುಖಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದು ಪತ್ರಕರ್ತರು ಮಾದರಿಯಾಗಿದ್ದಾರೆ. ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಪತ್ರಕರ್ತರ ಕೆಲಸ ಶ್ಲಾಘನೀಯ ಎಂದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.
ಕೆಐಒಸಿಎಲ್ ಸಂಸ್ಥೆಯ ಜನರಲ್ ಮ್ಯಾನೇಜರ್ ರಾಮಕೃಷ್ಣ, ಸೀನಿಯರ್ ಮ್ಯಾನೇಜರ್ ಮುರುಗೇಶ್, ಕಡಬ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಾಧಿಕಾರಿ ರವಿರಾಜ್ ಎಚ್.ಜಿ, ಕೊಂಬಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡ, ಕಡಬ ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ವಿಜಯ ಕುಮಾರ್, ಕಾರ್ಯಕಾರಿ ಸಮಿತಿ ಸದಸ್ಯರಾದ ಭಾಸ್ಕರ ರೈ ಕಟ್ಟ, ಸಿದ್ಧಿಕ್ ನೀರಾಜೆ ಉಪಸ್ಥಿತರಿದ್ದರು.ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಸ್ವಾಗತಿಸಿದರು.ಕಡಬ ತಾಲೂಕು ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷ ಬಾಲಕೃಷ್ಣ ಕೊಯ್ಲ ವಂದಿಸಿದರು. ಜಿಲ್ಲಾ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು.

Leave a Reply

error: Content is protected !!