ಎನ್ನೆಂಸಿ: ಯುವ ರೆಡ್ ಕ್ರಾಸ್ ಘಟಕದಿಂದ ವಿಶ್ವ ಜನಸಂಖ್ಯಾ ದಿನಾಚರಣೆ

ಶೇರ್ ಮಾಡಿ

ನೇಸರ ಜು.16: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಜನಸಂಖ್ಯೆ ಮಿತಿ ಮೀರಿ ಏರುತ್ತಿರುವ ಇಂದಿನ ದಿನದಲ್ಲಿ ಅದರ ನಿಯಂತ್ರಣದ ಬಗ್ಗೆ ಅರಿವು ಮೂಡಿಸುವ ಕೆಲಸ ಆಗಬೇಕಾಗಿದೆ. ರೆಡ್ ಕ್ರಾಸ್ ಘಟಕ ಈ ಕಾರ್ಯವನ್ನು ಮಾಡುತ್ತಿದೆ ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಸುಳ್ಯ ತಾಲೂಕು ಉದ್ಯಾನವನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸಾಯಿ ಗೀತಾ ಜ್ಞಾನೇಶ್ ಮಾತನಾಡಿ, ಜನಸಂಖ್ಯೆ ಹೆಚ್ಚಾದಂತೆ ಆರ್ಥಿಕ ಸಮಸ್ಯೆ ಉಂಟಾಗುವುದರ ಜೊತೆಗೆ ಹಲವು ಸಮಸ್ಯೆಗಳು ತಲೆದೋರುತ್ತವೆ. ಇಂತಹ ಸಂದರ್ಭದಲ್ಲಿ ಜನಸಂಖ್ಯಾ ನಿಯಂತ್ರಣದ ಅರಿವಿನ ಜೊತೆಗೆ ಮಾನವನೇ ಸಂಪತ್ತಿನ ಮೂಲವಾಗಬೇಕಾದ ಅಗತ್ಯವಿದೆ ಎಂದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಶ್ರೀಮತಿ ರತ್ನಾವತಿ ಡಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಶುಭಹಾರೈಸಿದರು.

ರೆಡ್ ಕ್ರಾಸ್ ಕಾರ್ಯಕ್ರಮಾಧಿಕಾರಿ ಡಾ.ಅನುರಾಧಾ ಕುರುಂಜಿ ಪ್ರಾಸ್ತಾವಿಕವಾಗಿ ಮಾತನಾಡಿ, ಜನಸಂಖ್ಯೆ ಏರುತ್ತಿರುವ ಇಂದಿನ ದಿನದಲ್ಲಿ ಮಾನವ ಮಾನವನಾಗಿ ಉಳಿಯದೇ ಮಾನವ ಸಂಪನ್ಮೂಲವಾಗಬೇಕಾದ ಅಗತ್ಯವಿದೆ ಎನ್ನುವ ನಿಟ್ಟಿನಲ್ಲಿ ಯುವ ಜನತೆಗೆ ಜಾಗೃತಿ ಮೂಡಿಸಲು ಇಂತಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು. ರೆಡ್ ಕ್ರಾಸ್ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮ ದಲ್ಲಿ ರೆಡ್ ಕ್ರಾಸ್ ಸದಸ್ಯರಾದ ನಿರೀಕ್ಷಾ ಸ್ವಾಗತಿಸಿ, ಕೃಷ್ಣವೇಣಿ ವಂದಿಸಿದರು, ಅಮೃತಾ ಹೆಚ್ ಪಿ ಕಾರ್ಯಕ್ರಮ ನಿರೂಪಿಸಿದರು. ರೆಡ್ ಕ್ರಾಸ್ ನಾಯಕರಾದ ಲತಾಶ್ರೀ ಡಿ ಹಾಗೂ ಶುಭಾ ಸಹಕರಿಸಿದರು.

Leave a Reply

error: Content is protected !!