

ನೇಸರ ಜು.17: ಶಿಬಾಜೆ ರಕ್ಷಿತಾರಣ್ಯದ ಕಜೆ ಎಂಬಲ್ಲಿ ಅಕ್ರಮ ಮತ್ತಿ(ಬಣ್ಪು) ಮತ್ತು ಹೆಬ್ಬಲಸು ಮರ ಕಡಿತಲೆ ಬಗ್ಗೆ ಖಚಿತ ಮಾಹಿತಿ ಮೇರೆಗೆ ಶಿಬಾಜೆ ಗ್ರಾಮದ ಕಜೆ ನಿವಾಸಿ ದಿನೇಶ್ ಹಾಗೂ ಕಳೆಂಜ ಗ್ರಾಮದ ಕಾಯಡ ನಿವಾಸಿ ಜಿತೇಂದ್ರನನ್ನು ಬಂಧಿಸಿ ಪ್ರಕರಣ ದಾಖಲಿಸಿದ ಘಟನೆ ಭಾನುವಾರ ಸಂಜೆ ಸಂಭವಿಸಿದೆ.
ಮತ್ತೋರ್ವ ಆರೋಪಿ ಶಿಬಾಜೆಯ ಉಮೇಶ್ ತಲೆ ಮರೆಸಿಕೊಂಡಿದ್ದು ಆತನ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ. ಆರೋಪಿಗಳಿಂದ ಮರಗಳ ದಿಮ್ಮಿ ಮತ್ತು ಸೈಜುಗಳನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಉಪ ವಲಯರಣ್ಯಾಧಿಕಾರಿ ಸಂತೋಷ್ ತಡ್ಲಗಿ ಹಾಗೂ ಅರಣ್ಯ ರಕ್ಷಕ ನಿಂಗಪ್ಪ ಅವಾರಿ, ಪ್ರಶಾಂತ್ ಮಾಳಗಿ, ರಸೂಲ್, ಸುನಿಲ್ ನಾಯಕ್, ಅರಣ್ಯ ವೀಕ್ಷಕ ದಾಮೋದರ್ ಬಾಗಿಯಾಗಿದ್ದು, ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಉಪ್ಪಿನಂಗಡಿ ವಲಯಾರಣ್ಯಾದಿಕಾರಿ ಎದುರು ಹಾಜರು ಪಡಿಸಲಾಗಿದೆ.


