
ನೇಸರ ಜು.20: ಮುಂಡಾಜೆ ರಾಷ್ಟ್ರೀಯ ಹೆದ್ದಾರಿಯ ನಿಡಿಗಲ್ ನಲ್ಲಿ ಕಳೆದ ಮೇ 23ರಂದು ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದು ತೀವ್ರ ಗಾಯಗೊಂಡಿದ್ದ ಮುಂಡಾಜೆ ಕಾಯರ್ತೋಡಿ ನಿವಾಸಿ ಗೋಪಾಲಕೃಷ್ಣ ಜೋಶಿ(57) ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು. ಅಪಘಾತದಿಂದ ಬೆನ್ನು ಮೂಳೆಯ ತೀವ್ರ ಪೆಟ್ಟಾಗಿದ್ದು, ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು.
ಅವರು ಕೃಷಿಯ ಜತೆ ಪೌರೋಹಿತ್ಯವನ್ನು ಮಾಡುತ್ತಿದ್ದು ಹಲವು ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದರು. ಪ್ರಸ್ತುತ ಅವರು ಮುಂಡಾಜೆ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.
ಮೃತರು ಪತ್ನಿ, ಪುತ್ರ ಹಾಗೂ ಪುತ್ರಿ ಯನ್ನು ಅಗಲಿದ್ದಾರೆ.





