ನೇಸರ ಜು.22:ಕುಕ್ಕೆಶ್ರೀ ಸುಬ್ರಮಣ್ಯೇಶ್ವರ ಮಹಾವಿದ್ಯಾಲಯ ಸಮಾಜಶಾಸ್ತ್ರ ವಿಭಾಗ, ಆಂತರಿಕ ಗುಣಮಟ್ಟ ಖಾತ್ರಿ ಕೋಶ, ದಿನಾಂಕ 21.7.2022 ರಂದು ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಸವಾಲುಗಳು ಎಂಬ ವಿಷಯದ ಕುರಿತು ಪ್ರಬಂಧ ಮಂಡನಾ ಸ್ಪರ್ಧೆಯನ್ನು ಏರ್ಪಡಿಸಿತು.
ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ದಿನೇಶ್ ಪಿ.ಟಿ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದರು. ಎಸ್ ಡಿ ಎಂ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಗಳಾದ ಡಾ.ಅಕ್ಷತಾ ಕಾರಂತ್, ಸ್ವಾತಿ.ಬಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಸ್ಪರ್ಧೆಯ ತೀರ್ಪುಗಾರರಾಗಿ ಭಾಗವಹಿಸಿದರು. IQAC ಸಂಯೋಜಕರಾದ ಡಾ.ಪ್ರಸಾದ. ಉಪಸ್ಥಿತರಿದ್ದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಮನೋಹರ ಸ್ವಾಗತಿಸಿದರು. ಸಮಾಜ ಶಾಸ್ತ್ರ ವಿಭಾಗದ ವಿದ್ಯಾರ್ಥಿ ಕಾರ್ಯದರ್ಶಿ ಕುಮಾರಿ ಪ್ರಜ್ಞ ಧನ್ಯವಾದ ಸಮರ್ಪಿಸಿ, ಅನುಶ್ರೀ ಕಾರ್ಯಕ್ರಮ ನಿರೂಪಿಸಿದರು. ಸಮಾಜಶಾಸ್ತ್ರ ಉಪನ್ಯಾಸಕಿ, ಶ್ರೀಮತಿ ಆರತಿ ಉಪಸ್ಥಿತರಿದ್ದರು.ಒಟ್ಟು 18 ತಂಡಗಳು ಪ್ರಬಂಧ ಮಂಡನೆ ಸ್ಪರ್ಧೆಯಲ್ಲಿ ಭಾಗವಹಿಸಿದರು.