ಮುಂಡಾಜೆ ಕಾಲೇಜಿನಲ್ಲಿ “ಆಟಿಡೊಂಜಿ ದಿನ”

ಶೇರ್ ಮಾಡಿ

ನೇಸರ ಜು.25: ಮುಂಡಾಜೆ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ದಿನಾಂಕ 23-07-2022ನೇ ಶನಿವಾರದಂದು ಕಾಲೇಜಿನ ಸಾಂಸ್ಕೃತಿಕ ಸಂಘದ ವತಿಯಿಂದ “ಆಟಿಡೊಂಜಿ ದಿನ” ಕಾರ್ಯಕ್ರಮವನ್ನು ಏರ್ಪಡಸಲಾಯಿತು.
ಆಟಿ ತಿಂಗಳ ಮಹತ್ವದ ಕುರಿತು ಉದ್ಘಾಟಕರಾದ ಶ್ರೀನಿವಾಸ್ ರಾವ್ ಕಲ್ಮಂಜ ಮಕ್ಕಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯಚಂದ್ರ ರವರು ತುಳು ಭಾಷೆ, ಸಂಸ್ಕೃತಿಯ ಬಗ್ಗೆ ತಿಳಿಸಿ, ಆಟಿ ತಿಂಗಳ ತಿಂಡಿ ತಿನಿಸು ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿಯಾದ ನಾರಾಯಣ ಗೌಡ ರವರು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಚಾರ್ಯರಾದ ಜಾಲಿ ಒ ಎ., ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದ ಅಂಗವಾಗಿ ತುಳು ನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ನಡೆಸಿಕೊಟ್ಟರು. ಕನ್ನಡ ಭಾಷಾ ಉಪನ್ಯಾಸಕಿ ವಸಂತಿ ಕಾರ್ಯಕ್ರಮವನ್ನು ನಿರೂಪಿಸಿ, ಇತಿಹಾಸ ಉಪನ್ಯಾಸಕಿ ಗೀತಾ ಸ್ವಾಗತಿಸಿದರು ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾದ ಸಂದೀಪ್ ಐ ವಂದಿಸಿದರು. ಕಾಲೇಜಿನ ಎಲ್ಲಾ ಉಪನ್ಯಾಸಕ ವೃಂದ, ಸಿಬ್ಬಂದಿ ವರ್ಗ, ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

error: Content is protected !!