ನೇಸರ ಜು.30: ಅರಂತೋಡು ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಸರ್ಕಾರಿ ಪದವಿ ಪೂರ್ವ ಕಾಲೇಜು ಸುಳ್ಯದ ಸಮಾಜಶಾಸ್ತ್ರ ಉಪನ್ಯಾಸಕರಾದ ಶಿವರಾಮ ದೀಪ ಬೆಳಗಿಸಿ ಉದ್ಘಾಟಸಿ, ಮಾತನಾಡಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ವಿವಿಧ ಸಂಘಗಳು ಪ್ರಮುಖ ಪಾತ್ರ ವಹಿಸುತ್ತವೆ. ಪಠ್ಯದ ಜೊತೆ ಇಂತಹ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ರಮೇಶ್ ವಹಿಸಿ, ಮಾತನಾಡಿ, ಕಾಲೇಜು ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವಾದ ಕಲಾ, ವಾಣಿಜ್ಯ, ವಿಜ್ಞಾನ, ಕ್ರೀಡಾ, ಲಲಿತ ಕಲಾ ಸಂಘಗಳನ್ನು ಉಪನ್ಯಾಸಕರ ನೇತೃತ್ವದಲ್ಲಿ ಆರಂಭಿಸಲಾಗಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು. ವೇದಿಕೆಯಲ್ಲಿ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಗೌರಿ ಶಂಕರ, ವಿವಿಧ ಸಂಘದ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ನಿರ್ದೇಶಕಿ ಶ್ರೀಮತಿ ಶಾಂತಿ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಪದ್ಮಕುಮಾರ್ ವಂದಿಸಿದರು. ಶ್ರೀಮತಿ ನಂದಿನಿ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಮೋಹನ್ ಚಂದ್ರ, ಲಿಂಗಪ್ಪ, ಶ್ರೀಮತಿ ಭಾಗ್ಯ ಶ್ರೀ, ಶ್ರೀಮತಿ ವಿದ್ಯಾ ಶಾಲಿ, ಕುಮಾರಿ ನಯನಾ ಸಹಕರಿಸಿದರು.