ಉಜಿರೆ: ಎಸ್.ಡಿ.ಎಂ. ಕಾಲೇಜಿನಲ್ಲಿ ಬೌದ್ಧಿಕ ಆಸ್ತಿ ಹಕ್ಕು ಕಾರ್ಯಾಗಾರ

ಶೇರ್ ಮಾಡಿ

ನೇಸರ ಜು.30: ಬೌದ್ಧಿಕ ಆಸ್ತಿ ಹಕ್ಕುಗಳ ನಿರ್ವಹಣೆಯು ಸುಸ್ಥಿರ ಬೆಳವಣಿಗೆಯ ಪರಿಕಲ್ಪನೆಯ ಆಧಾರದಲ್ಲಿ ನಡೆದಾಗ ಮಾತ್ರ ವೈಜ್ಞಾನಿಕ ಸಂಶೋಧನೆ ಮತ್ತು ಆವಿಷ್ಕಾರಗಳಿಗೆ ಬಹು ಆಯಾಮಗಳ ಮನ್ನಣೆ ದೊರಕುತ್ತದೆ ಎಂದು ಬೆಂಗಳೂರಿನ ಇಂಟೆಲಿಕೋಪಿಯಾ ಐಪಿ ಸರ್ವಿಸಸ್ ಸಂಸ್ಥೆಯ ಸಂಸ್ಥಾಪಕ ಡಾ.ಎಚ್.ಎಲ್.ನರೇಂದ್ರ ಭಟ್ ಹೇಳಿದರು.
ಉಜಿರೆಯಲ್ಲಿ ಎಸ್.ಡಿ.ಎಂ. ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿ ರಸಾಯನಶಾಸ್ತ್ರ ವಿಭಾಗ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಜಂಟಿ ಆಶ್ರಯದಲ್ಲಿ ಆಯೋಜಿಸಿದ ಬೌದ್ಧಿಕ ಆಸ್ತಿ ಹಕ್ಕುಗಳು ಮತ್ತು ಆವಿಷ್ಕಾರ ಉತ್ತೇಜನ ಎಂಬ ವಿಷಯದ ಕಾರ್ಯಾಗಾರದಲ್ಲಿ ಅವರು ಮಾಹಿತಿ ನೀಡಿದರು.
ನಿರ್ದಿಷ್ಟ ಆವಿಷ್ಕಾರವನ್ನು ವ್ಯವಹಾರಿ ಉದ್ದೇಶಕ್ಕಾಗಿ ಬಳಸಿಕೊಳ್ಳುವಾಗ ಸುಸ್ಥಿರ ಪರಿಕಲ್ಪನೆಯನ್ನೂ ಅನ್ವಯಿಸಬೇಕು. ಆಗ ಮಾತ್ರ ಪರಿಸರ ಮತ್ತು ಅಭಿವೃದ್ಧಿಯ ಆಯಾಮಗಳು ಸುಸ್ಥಿರ ನೆಲೆಯಲ್ಲಿ ಅನುಷ್ಠಾನಗೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಕಾರ್ಯಾಗಾರವನ್ನು ಉದ್ಘಾಟಿಸಿದ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯಾದರ್ಶಿ ಡಾ.ಎಸ್.ಸತೀಶ್ಚಂದ್ರ ಮಾತನಾಡಿ, ಬೌದ್ಧಿಕ ಆಸ್ತಿ ಹಕ್ಕುಗಳು ಮತ್ತು ಆವಿಷ್ಕಾರ ಒಂದೇ ನಾಣ್ಯದ ಎರಡು ಮುಖಗಳಂತೆ ಇದ್ದು, ಸುಸ್ಥಿರ ಅಭಿವೃದ್ದಿಗೆ ಪೂರಕವಾಗಿವೆ ಎಂದು ಹೇಳಿದರು.
ಎಸ್.ಡಿ.ಎಂ. ಕಾಲೇಜಿನ ಪ್ರಿನ್ಸಿಪಾಲ್ ಡಾ.ಪಿ.ಎನ್.ಉದಯಚಂದ್ರ ಅಧ್ಯಕ್ಷತೆ ವಹಿಸಿದರು.
ಸ್ನಾತಕೋತ್ತರ ಕೇಂದ್ರದ ಡೀನ್ ಡಾ. ಪಿ. ವಿಶ್ವನಾಥ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕಿ ಡಾ.ಶಶಿಪ್ರಭಾ ಧನ್ಯವಾದವಿತ್ತರು. ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರ‍್ರಾಧ್ಯಾಪಕಿ ಡಾ.ನೆಫೀಸತ್ ಕಾರ್ಯಕ್ರಮ ನಿರ್ವಹಿಸಿದರು.

Leave a Reply

error: Content is protected !!