ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ- ಕೋರಿ ಜಾತ್ರೆ ಹಾಗೂ ಜೀರ್ಣೊದ್ಧಾರ ಕಾರ್ಯದ ಪೂರ್ವಭಾವಿ ಸಭೆ

ಶೇರ್ ಮಾಡಿ

ನೇಸರ ನ22: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಲಿರುವ ಕೋರಿ ಜಾತ್ರೆ ಹಾಗೂ ಜೀರ್ಣೊದ್ಧಾರ ಕಾರ್ಯದ ಪೂರ್ವಭಾವಿ ಸಭೆಯು ನ.22 ರಂದು ದೇವಾಲಯದ ವಠಾರದಲ್ಲಿ ಜರುಗಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರುಗಳಾದ ಕೆ.ಹರೀಶ್ ಕುಮಾರ್, ಕೆ.ಪ್ರತಾಪ ಸಿಂಹ ನಾಯಕ್,ಕೊಕ್ಕಡ ಗ್ರಾ.ಪಂ ಅಧ್ಯಕ್ಷ ಯೋಗೀಶ ಆಲಂಬಿಲ, ಅದ್ಯಕ್ಷತೆಯನ್ನು ದೇವಸ್ಥಾನದ ಪವಿತ್ರಪಾಣಿ ರಾಧಾಕೃಷ್ಣ ಯಡಪಡಿತ್ತಾಯ ವಹಿಸಿದರು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ.

ಗೌರವ ಉಪಸ್ಥಿತಿಯಲ್ಲಿ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ತ್ರಿಗುಣಾತ್ಮಿಕಾ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಟ್ರಸ್ಟ್ ಅಧ್ಯಕ್ಷ ಪಿ ಕುಶಾಲಪ್ಪ ಗೌಡ ಪೂವಾಜೆ, ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀಧರ ಶಬರಾಯ ಅಕ್ಕೊ, ಶಿಬಾಜೆ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ರಾಘವೇಂದ್ರ ನಾಯಕ್, ಶ್ರೀ ಶಿಶಿಲೇಶ್ವರ ದೇವಸ್ಥಾನದ ಅಧ್ಯಕ್ಷ ಶ್ರೀನಿವಾಸ ಮೂಡೆತ್ತಾಯ, ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಅಧ್ಯಕ್ಷ ಕೆ.ಶ್ರೀಧರ ರಾವ್, ಮಿಯಾರು ಶ್ರೀ ವನದುರ್ಗಾ ಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ನಿತ್ಯಾನಂದ ಗೌಡ, ಪುತ್ಯೆ ಶ್ರೀ ಮಹಾವಿಷ್ಣು ದೇವಸ್ಥಾನದ ಅಧ್ಯಕ್ಷ ಜಯರಾಮ ಗೌಡ, ದೋಂತಿಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಧ್ಯಕ್ಷ ಮಹಾಬಲ ಶೆಟ್ಟಿ ದೋಂತಿಲ, ಹಾರ್ಪಳ ಶ್ರೀ ಶಾಸ್ತಾರೇಶ್ವರ ದೇವಸ್ಥಾನದ ಮೊಕ್ತೇಸರ ಸುಂದರ ಗೌಡ, ಪಡುವೆಟ್ಟು ಶ್ರೀ ಮಹಾವಿಷ್ಣು ದೇವಸ್ಥಾನದ ಮೊಕ್ತೇಸರ ಸುಬ್ರಹ್ಮಣ್ಯ ಶಬರಾಯ, ನೆಲ್ಯಾಡಿ ಶ್ರೀ ಅಯ್ಯಪ್ಪ ದೇವಸ್ಥಾನದ ಮೊಕ್ತೇಸರ ಡಾ|ಸದಾನಂದ ಕುಂದರ್, ಬಲ್ಯ ಶ್ರೀ ಉಮಾಮಹೇಶ್ವರಿ ದೇವಸ್ಥಾನದ ಅಧ್ಯಕ್ಷ ಕೆ ಚಿತ್ತರಂಜನ್ ರೈ, ಧರ್ಬೆತಡ್ಕ ಶ್ರೀ ಪರಶುರಾಮ ದೇವಸ್ಥಾನದ ಅಧ್ಯಕ್ಷ ಶ್ರೀ ರಾಮ ದಾಮ್ಲೆ, ಕೋಲಾರ್ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ಕುಶಾಲಪ್ಪ ಗೌಡ, ತಿರ್ಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮೊಕ್ತೇಸರ ಮಾಧವ ಸರಳಾಯ, ಕಳಪ್ಪಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಅಧ್ಯಕ್ಷ ಡೊಂಬಯ್ಯ ಗೌಡ ಕೆ, ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ಅಧ್ಯಕ್ಷ ಪದ್ಮಯ್ಯ ಗೌಡ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕೋರಿಗದ್ದೆ ಉಸ್ತುವಾರಿ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಅಧ್ಯಕ್ಷ ಕೆ.ಶ್ರೀಧರ ರಾವ್ ರವರು ನಡೆಸಿದ ಭತ್ತ ನಾಟಿ ಕಾರ್ಯದ ಬಗ್ಗೆಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು,ಜೀರ್ಣೋದ್ಧಾರ ಸಮಿತಿ ಸದಸ್ಯರು, ಗ್ರಾಮಸ್ಥರು, ಊರ-ಪರವೂರ ಭಕ್ತಾಧಿಗಳು ಉಪಸ್ಥಿತರಿದ್ದು, ಕೋರಿ ಜಾತ್ರೆ ನಡೆಸುವ ಬಗ್ಗೆ ಚರ್ಚೆ ನಡೆಸಿ, ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

Leave a Reply

error: Content is protected !!